Homeಮುಖಪುಟಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಆಪದ್ಬಾಂಧವನಾದ ನಟ ಸೋನು ಸೂದ್

ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಆಪದ್ಬಾಂಧವನಾದ ನಟ ಸೋನು ಸೂದ್

- Advertisement -
- Advertisement -

ಕೊರೊನಾ ಕಾಲದ ಆಪದ್ಬಾಂಧವನಾಗಿದ್ದ ಬಹುಭಾಷಾ ನಟ, ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ಮತ್ತೊಮ್ಮೆ ತಾವು ನಿಜ ಜೀವನದ ಹೀರೋ ಎಂಬುದನ್ನು ಸಾಬೀತುಪಡಿಸುತ್ತಿದ್ದಾರೆ. ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸಹಾಯಹಸ್ತ ಚಾಚಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಮ್ಮ ಮನೆಗಳನ್ನು ತಲುಪುವಲ್ಲಿ ನಟ ಸೋನು ಸೂದ್ ಚಾರಿಟಿ ಸಂಸ್ಥೆ ಸಹಾಯಕಕೆ ನಿಂತಿದೆ. ಅಲ್ಲಿನ ವಿದ್ಯಾರ್ಥಿಗಳು ಸೂಕ್ತವಾಗಿ ಗಡಿಗಳನ್ನು ತಲುಪಲು, ಅಲ್ಲಿಂದ ದೇಶಕ್ಕೆ ಬರುವಲ್ಲಿ ಇವರು ಸಹಾಯ ಮಾಡುತ್ತಿದ್ದಾರೆ. ಸೋನು ಸೂದ್ ಅವರ ತಂಡದ ಕಾರ್ಯವನ್ನು ಶ್ಲಾಘಿಸಿ ಹಲವರು ವಿದ್ಯಾರ್ಥಿಗಳು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.

“ಉಕ್ರೇನ್‌ನಲ್ಲಿರುವ ನಮ್ಮ ವಿದ್ಯಾರ್ಥಿಗಳಿಗೆ ಇದು ಕಷ್ಟದ ಸಮಯ ಮತ್ತು ಇಲ್ಲಿಯವರೆಗಿನ ನನ್ನ ಕೆಲಸಗಳಲ್ಲಿ ಅತೀ ಕಠಿಣ ಕೆಲಸ ಇದು. ಆದರೆ,  ಅದೃಷ್ಟವಶಾತ್ ನಾವು ಅನೇಕ ವಿದ್ಯಾರ್ಥಿಗಳಿಗೆ ಗಡಿ ದಾಟಿ ಸುರಕ್ಷಿತ ಪ್ರದೇಶಕ್ಕೆ ಹೋಗಲು ಸಹಾಯ ಮಾಡಿದ್ದೇವೆ. ಇದಕ್ಕಾಗಿ ಪ್ರಯತ್ನಿಸುತ್ತಲೇ ಇರೋಣ. ಅವರಿಗೆ ನಮ್ಮ ಅವಶ್ಯಕತೆಯಿದೆ” ಎಂದು ಸೋನು ಸೂದ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ: ನಟ ಸೋನು ಸೂದ್ ಕಾರನ್ನು ವಶಕ್ಕೆ ಪಡೆದ ಪೊಲೀಸರು

 

ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರು ತಮ್ಮ ಮನೆಗಳನ್ನು ತಲುಪಲು ಸಹಾಯ ಮಾಡಿದ್ದಕ್ಕಾಗಿ ಸೋನು ಸೂದ್ ಜನರ ಮನಗೆದ್ದಿದ್ದರು. ಅಂದಿನಿಂದ ಅವರು ಜನರಿಗಾಗಿ ಕೆಲಸ ಮಾಡುತ್ತಲೇ ಇದ್ದಾರೆ. ಇದಕ್ಕಾಗಿ ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ಗಳಿಸಿದ್ದಾರೆ. ಈಗ ಯುದ್ಧ ಪೀಡಿತ ಉಕ್ರೇನ್‌ನ ಹಲವು ನಗರಗಳಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗೆ ನಟ ಮತ್ತು ಆತನ ತಂಡ ಈಗ ಸಹಾಯ ಮಾಡುತ್ತಿದೆ.

ತಮ್ಮ ಟ್ವಿಟರ್‌ ಖಾತೆಯಲ್ಲಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಯೋಜನೆಯನ್ನು ವಿವರಿಸಿರುವ ನಟ ಸೋನು ಸೂದ್, “ಸ್ಥಳೀಯ ಟ್ಯಾಕ್ಸಿಗಳನ್ನು ವಿದ್ಯಾರ್ಥಿಗಳಿರುವ ಸ್ಥಳಕ್ಕೆ ಕಳುಹಿಸಲಾಗುತ್ತದೆ, ಅಲ್ಲಿಂದ ಅವರನ್ನು ಖಾರ್ಕಿವ್‌ನ ರೈಲು ನಿಲ್ದಾಣಕ್ಕೆ ಕರೆದೊಯ್ಯಲಾಗುತ್ತದೆ.  ಅಲ್ಲಿಂದ ಅವರು ರೈಲಿನಲ್ಲಿ ಎಲ್ವಿವ್ ನಗರದ ಸುರಕ್ಷಿತ ಸ್ಥಳಕ್ಕೆ ಪ್ರಯಾಣಿಸುತ್ತಾರೆ. ಬಳಿಕ ಅವರನ್ನು ಪೋಲಿಷ್ ಗಡಿಗೆ ಸಾಗಿಸಲು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ” ಎಂದಿದ್ದಾರೆ. ಪ್ರತಿಯೊಂದು ಹಂತಗಳನ್ನು ನಟ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಡೇಟ್ ಮಾಡುತ್ತಿದ್ದಾರೆ.


ಇದನ್ನೂ ಓದಿ: ‘ಕಾಲವೆ ಕಥೆ ಹೇಳುತ್ತದೆ!’ – ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಮಹಿಳೆಯೊಬ್ಬರ ಅಪಹರಣ ಪ್ರತ್ಯೇಕ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ...