Homeಮುಖಪುಟಪತ್ರಕರ್ತೆ ಜೊತೆ ಅನುಚಿತವಾಗಿ ವರ್ತಿಸಿದ ಬಿಜೆಪಿಯ ಮಾಜಿ ಸಂಸದ ಸುರೇಶ್‌ ಗೋಪಿ

ಪತ್ರಕರ್ತೆ ಜೊತೆ ಅನುಚಿತವಾಗಿ ವರ್ತಿಸಿದ ಬಿಜೆಪಿಯ ಮಾಜಿ ಸಂಸದ ಸುರೇಶ್‌ ಗೋಪಿ

- Advertisement -
- Advertisement -

ಮಾದ್ಯಮಗಳೊಂದಿಗೆ ಮಾತನಾಡುವಾಗ ವರದಿಗಾರ್ತಿಯನ್ನು ಅನುಚಿತವಾಗಿ ಸ್ಪರ್ಶಿಸಿದ ಆರೋಪ ಬಿಜೆಪಿಯ ಮಾಜಿ ಸಂಸದ, ನಟ ಸುರೇಶ್ ಗೋಪಿ ವಿರುದ್ಧ ಕೇಳಿ ಬಂದಿದ್ದು, ಈ ಬಗ್ಗೆ ಅವರು ಕ್ಷಮೆಯಾಚಿಸಿದ್ದಾರೆ.

ಬಿಜೆಪಿಯ ಮಾಜಿ ರಾಜ್ಯಸಭಾ ಸಂಸದ ಸುರೇಶ್ ಗೋಪಿ ಈ ಕುರಿತು ಪೋಸ್ಟ್‌ ಮಾಡಿದ್ದು, ವೇದಿಕೆ ಮೇಲಿರಲಿ ಅಥವಾ ಹೊರಗೆ ಇರಲಿ ಯಾರಿಗೂ ಅಗೌರವ ತೋರಿಸಿಲ್ಲ. ನನ್ನ ನಡವಳಿಕೆಯಿಂದ ಮಾನಸಿಕವಾಗಿ ನೋವಾಗಿದ್ದರೆ ನಾನು ಅವರ ಬಳಿ ಕ್ಷಮೆಯಾಚಿಸುತ್ತೇನೆ, ನನ್ನನ್ನು ಕ್ಷಮಿಸಿ ಎಂದು ಹೇಳಿದ್ದಾರೆ.

ಸುರೇಶ್ ಗೋಪಿ ಅವರು ಯಾವುದೇ ಕೆಟ್ಟ ಉದ್ದೇಶವನ್ನು ಹೊಂದಿಲ್ಲ ಮತ್ತು ವರದಿಗಾರ್ತಿಯನ್ನು ಮಗಳಿದ್ದಂತೆ ಎಂದು ಹೇಳಿದರು. ನಾನು  ಅನುಚಿತವಾಗಿ ಸ್ಪರ್ಶಿಸಿದ್ದೇನೆ ಎಂದು ಅವರು ಭಾವಿಸಿದ್ದರೆ ನಾನು ತಂದೆಯಂತೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ನಾನು ಸುದ್ದಿಗಾರರೊಂದಿಗೆ ಮಾತನಾಡಿದ ನಂತರ ಆವರಣದಿಂದ ಹೊರಹೋಗುತ್ತಿದ್ದೆ. ನನಗೆ ಯಾವುದೇ ತಪ್ಪು ಮಾಡುವ ಉದ್ದೇಶವಿರಲಿಲ್ಲ. ನಾನು ದೂರವಾಣಿ ಮೂಲಕ ವರದಿಗಾರ್ತಿಯನ್ನು ಕ್ಷಮೆಯಾಚಿಸಲು ಸಂಪರ್ಕಿಸಲು ಪ್ರಯತ್ನಿಸಿದೆ. ಆದರೆ ಅವರು ಕರೆ ಸ್ವೀಕರಿಸಲಿಲ್ಲ. ಈಗ ಅವರು ನನ್ನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿದ್ದರೆ ನಾನೇನು ಮಾಡಬೇಕು? ನನಗೆ ಮೂವರು ಹೆಣ್ಣು ಮಕ್ಕಳಿದ್ದಾರೆ ಮತ್ತು ನಾನು ತಂದೆಯಂತೆ ವರ್ತಿಸಿದ್ದೇನೆ ಎಂದು ಅವರು ಹೇಳಿದರು.

ಕೇರಳದ ಕಾರ್ಯನಿರತ ಪತ್ರಕರ್ತರ ಸಂಘವು ನಟನ ನಡವಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಮಹಿಳಾ ಆಯೋಗಕ್ಕೆ ದೂರು ನೀಡಲು ಮುಂದಾಗಿದ್ದೇವೆ ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷೆ ಎಂ.ವಿ.ವಿನೀತಾ ಹಾಗೂ ಪ್ರಧಾನ ಕಾರ್ಯದರ್ಶಿ ಆರ್.ಕಿರಣ್ ಬಾಬು ತಿಳಿಸಿದ್ದಾರೆ.

 

ಇದನ್ನು ಓದಿ: ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ ಉಳಿದ ಭಾರತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...