Homeಕರ್ನಾಟಕದಲಿತ ಸಮುದಾಯಕ್ಕೆ ಅವಮಾನ - ತೀವ್ರ ಟೀಕೆಯ ನಂತರ ಕ್ಷಮೆಯಾಚಿಸಿದ ನಟ ಉಪೇಂದ್ರ

ದಲಿತ ಸಮುದಾಯಕ್ಕೆ ಅವಮಾನ – ತೀವ್ರ ಟೀಕೆಯ ನಂತರ ಕ್ಷಮೆಯಾಚಿಸಿದ ನಟ ಉಪೇಂದ್ರ

- Advertisement -
- Advertisement -

ನಟ, ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿಡಿಯೋ ಸಂದೇಶದಲ್ಲಿ ಮಾತನಾಡುವಾಗ ಗಾದೆ ಮಾತನ್ನು ಉಲ್ಲೇಖಿಸಿ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಆಕ್ರೋಶ ಕೇಳಿ ಬಂದಿದೆ.

ಉಪೇಂದ್ರ ಅವರು ವಿಡಿಯೋ ಸಂದೇಶದಲ್ಲಿ ಮಾತನಾಡುತ್ತಾ, “ಊರು ಅಂದರೆ ಹೋಲಗೇರಿ ಇರುತ್ತೆ” ಎಂದು ಗಾದೆ ಮಾತನ್ನು ಬಳಸಿ ದಲಿತ ಸಮುದಾಯದ ಜನರಿಗೆ ಅವಮಾನ ಮಾಡಿದ್ದಾರೆ.

ಉಪೇಂದ್ರ ಅವರ  ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಉಪೇಂದ್ರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ದೀಪು ಗೌಡ್ರು ಎಂಬವರು ಈ ಕುರಿತು ಪ್ರತಿಕ್ರಿಯಿಸಿ,”ಅಲ್ಲ ಈತನ ಯಾವುದೋ ಒಂದು ಪಕ್ಷದ ಸಿದ್ದಾಂತದ ವಿರುದ್ಧ ಒಂದಷ್ಟು ಜನ ವಿರೋಧ ವ್ಯಕ್ತಪಡಿಸಿದರೆ, ಆ ಜನರನ್ನು “ಹೊಲ್ಗೇರಿ”ಗೆ ಹೊಲಿಸೋದು ಎಷ್ಟರ ಮಟ್ಟಕ್ಕೆ ಸರಿ..?? ಹಾಗಾದರೆ ಈ ಮನುಷ್ಯನ ಪ್ರಕಾರ ಹೊಲ್ಗೇರಿಯಲ್ಲಿ ಬದುಕುವ ಜನರೆಲ್ಲರು ಕೆಟ್ಟವರಾ? ಇಂತಹ ಕೆಟ್ಟ ಮನಸ್ಥಿತಿಗೆನೇ ನಾವು ಬ್ರಾಹ್ಮಣ್ಯ ಅಂತ ಉಗಿಯೋದು.. ಅಲ್ಲ್ರೀ ಸ್ವಾಮಿ ನಿಮಗೆ ನಿಜವಾಗಿಯೂ ಸಮಾಜದ ಮೇಲೆ ಕಾಳಜಿ ಇದಿದ್ದಿದ್ರೆ ಊರಿನಲ್ಲಿ ಹೊಲ್ಗೇರಿನೆ ಇರಬಾರದು ಅನ್ನೋ ಸಮಾನತೆಯ ಸಮಾಜದ ಬಗ್ಗೆ ಯೋಚನೆ ಮಾಡ್ತಿದ್ರಿ” ಎಂದು ಬರೆದಿದ್ದಾರೆ.

ಕರ್ನಾಟಕ ರಾಜ್ಯ ಭೀಮ್ ಆರ್ಮಿ ಅಧ್ಯಕ್ಷರಾದ ರಾಜಗೋಪಾಲ್. ಡಿ ಅವರು ಪ್ರತಿಕ್ರಿಯಿಸಿ, ಉಪೇಂದ್ರ ಅವರೆ, “ಊರು ಅಂದರೆ ಹೋಲಗೇರಿ ಇರುತ್ತೆ” ಎಂದು ಹೇಳುವುದರ ಮೂಲಕ ನೀವು ದಲಿತರನ್ನು ಅಪಮಾನಿಸುತ್ತಾ ಇದ್ದಿರಿ… ಕೂಡಲೆ ನಿಮ್ಮ ಹೇಳಿಕೆ ವಾಪಸ್ಸು ಪಡೆದುಕೋಳ್ಳಬೇಕು ಮತ್ತೆ ಈ ದಲಿತ ಸಮಾಜಕ್ಕೆ ಕ್ಷಮೆ ಕೇಳಬೇಕು.

ಇಲ್ಲದಿದ್ದಲ್ಲಿ ನಿಮ್ಮ ವಿರುದ್ದ ಭೀಮ್ ಆರ್ಮಿ ಮತ್ತು ದಲಿತ ಸಂಘಟನೆಗಳಿಂದ ಹೋರಾಟ ಮಾಡಬೇಕಾಗುತ್ತದೆ ಮತ್ತೆ ದೌರ್ಜನ್ಯ ಕಾಯ್ದೆ ಅಡಿ ನಿಮ್ಮ ಮೇಲೆ ಕೇಸು ದಾಖಲಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಉಪೇಂದ್ರ ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮಾಪನೆಯನ್ನು ಕೇಳಿದ್ದು, ಬಾಯಿ ತಪ್ಪಿನಿಂದ  ಗಾದೆ ಮಾತು ಬಂದಿದೆ. ಇದರಿಂದ ಹಲವರ ಭಾವನೆಗಳು ಧಕ್ಕೆಯಾಗಿರುವುದನ್ನು ಗಮನಿಸಿ ತಕ್ಷಣ ಲೈವ್ ವಿಡಿಯೋವನ್ನು ಡಿಲಿಟ್ ಮಾಡಿದ್ದೇನೆ. ಮಾತಿಗೆ ಕ್ಷಮೆ ಇರಲಿ ಎಂದು ಹೇಳಿದ್ದಾರೆ.

ಇದನ್ನು ಓದಿ: ಜಾದವ್‌ಪುರ ವಿವಿ ಹಾಸ್ಟೆಲ್ ನಲ್ಲಿ ರ್ಯಾಗಿಂಗ್ ಗೆ ವಿದ್ಯಾರ್ಥಿ ಬಲಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...