ಬೈಕ್‌ ಅಪಘಾತಕ್ಕೀಡಾಗಿದ್ದ ನಟ ಸಂಚಾರಿ ವಿಜಯ್ ಆಸ್ಪತ್ರೆಯಲ್ಲಿ ನಿಧನ | NaanuGauri

ಶನಿವಾರದಂದು ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೀಡಾಗಿ ನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರಿಗೆ 38 ವರ್ಷ ವಯಸ್ಸಾಗಿತ್ತು.

ಶನಿವಾರ ರಾತ್ರಿ ತಮ್ಮ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂಚಾರಿ ವಿಜಯ್ ಅವರ ಬೈಕ್‌ ಅಪಘಾತಕ್ಕೀಡಾಗಿ, ತಲೆ ಮತ್ತು ಕಾಲಿಗೆ ಗಂಭೀರ ಗಾಯವಾಗಿತ್ತು. ಆಸ್ಪತ್ರೆಗೆ ದಾಖಲಾದಾಗಲೇ ಅವರ ಸ್ಥಿತಿ ಗಂಭೀರವಾಗಿತ್ತು. ಮೆದುಳಿನಲ್ಲಿ ರಕ್ತಸ್ರಾವವಾಗಿದ್ದರಿಂದ ಕೋಮ ಸ್ಥಿತಿಯಲ್ಲಿದ್ದರು. ಐಸಿಯುನಲ್ಲಿ ವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ ಕೂಡ, ಚಿಕಿತ್ಸೆಗೆ ಸ್ಪಂದಿಸದ ಅವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಜೀವ ಬೆದರಿಕೆಯಿದೆ ಎಂದು ಪೊಲೀಸರಿಗೆ ತಿಳಿಸಿದ್ದ ಪತ್ರಕರ್ತ ಸಾವು: ಅಪಘಾತ ಎಂದ ಪೊಲೀಸರು!

ಚಿಕ್ಕಮಗಳೂರು ಜಿಲ್ಲೆಯ, ಕಡೂರು ತಾಲ್ಲೂಕಿನ ರಂಗಾಪುರ ಗ್ರಾಮದ ವಿಜಯ್‌ ಅವರು ಬಾಲ್ಯದಿಂದಲೇ ರಂಗಭೂಮಿ ಹಾಗೂ ಚಿತ್ರಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ರಂಗಭೂಮಿ ಕಲಾವಿದರಾಗಿ ಸಿನೆಮಾ ಕ್ಷೇತ್ರಕ್ಕೆ ಕಾಲಿಟ್ಟ ಇವರು, ಕನ್ನಡ ಚಿತ್ರರಂಗ ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿ ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇವರು ನಟಿಸಿದ್ದ ನಾನು ಅವನಲ್ಲ…ಅವಳು ಕನ್ನಡ ಸಿನಿಮಾ ಚಿತ್ರಕ್ಕೆ 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ವಿಜಯ್‌ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರು. ಈ ಚಿತ್ರದಲ್ಲಿ ಅವರು ತೃತೀಯ ಲಿಂಗಿಯ ಪಾತ್ರ ನಿರ್ವಹಿಸಿದ್ದಾರೆ.

ನಾತಿಚರಾಮಿ, ದಾಸವಾಳ, ಪಾದರಸ, ವರ್ತಮಾನ, ಒಗ್ಗರಣೆ, ರಂಗಪ್ಪ ಹೋಗ್ಬಿಟ್ನ, ಉಲವಚಾರು ಬಿರಿಯಾನಿ ಮುಂತಾದ ಸಿನಿಮಾಗಳಲ್ಲಿ ಸಂಚಾರಿ ವಿಜಯ್ ನಟಿಸಿದ್ದಾರೆ.

ಪ್ರತಿಭಾವಂತ ನಟನ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜಕೀಯ ನಾಯಕರು ಹಾಗೂ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ “ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್‌ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಂತಾಪ ಸೂಚಿಸಿದ್ದಾರೆ.

ಸಚಿವ ಶಿವರಾಮ್ ಹೆಬ್ಬಾರ್‌, “ರಾಷ್ಟ್ರಪ್ರಶಸ್ತಿ ಪುರಸ್ಕೃತ ಯುವ ನಟ ಸಂಚಾರಿ ವಿಜಯ್ ಅವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಸಂಚಾರಿ ವಿಜಯ್ ಅವರ ನಿಧನದಿಂದಾಗಿ ಕನ್ನಡ ಚಿತ್ರರಂಗವು ತನ್ನ ಅತ್ಯಮೂಲ್ಯ ರತ್ನವೊಂದನ್ನು ಕಳೆದುಕೊಂಡಿದೆ‌” ಎಂದು ಹೇಳಿದ್ದಾರೆ.

ನಟ ಸುದೀಪ್‌ ಅವರು, “ಸಂಚಾರಿ ವಿಜಯ್ ಕೊನೆಯುಸಿರೆಳೆದರು ಎಂದು ಒಪ್ಪಿಕೊಳ್ಳಲಾಗುತ್ತಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಟ ಸಂಚಾರಿ ವಿಜಯ್‌ ಬೈಕ್‌ ಅಪಘಾತ; ಗಂಭೀರ ಗಾಯ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here