Homeಮುಖಪುಟಖ್ಯಾತ ಮಲಯಾಳಂ ನಟ ವಿನಾಯಕನ್ ಬಂಧನ

ಖ್ಯಾತ ಮಲಯಾಳಂ ನಟ ವಿನಾಯಕನ್ ಬಂಧನ

- Advertisement -
- Advertisement -

ರಜನಿಕಾಂತ್ ಅಭಿನಯದ ಜೈಲರ್ ಚಿತ್ರದಲ್ಲಿ ಖಳನಾಯಕನಾಗಿ ನಟಿಸಿದ್ದ ಖ್ಯಾತ ಮಲಯಾಳಂ ನಟ ವಿನಾಯಕನ್ ಅವರನ್ನು ಮಂಗಳವಾರ ಕೇರಳದ ಪೊಲೀಸ್ ಠಾಣೆಯೊಂದರಲ್ಲಿ ದಾಂಧಲೆ ನಡೆಸಿದ ಆರೋಪದಲ್ಲಿ ಬಂಧಿಸಲಾಗಿದೆ.

ಕುಡಿದ ಅಮಲಿನಲ್ಲಿ ಸಾರ್ವಜನಿಕವಾಗಿ ಅನುಚಿತವಾಗಿ ವರ್ತಿಸಿದ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿನಾಯಕನ್ ಅವರನ್ನು ಎರ್ನಾಕುಲಂ ಉತ್ತರ ಪೊಲೀಸರು ಬಂಧಿಸಿದ್ದರು.

ಏನಿದು ಪ್ರಕರಣ?

ನಟ ವಿನಾಯಕನ್ ಅಪಾರ್ಟ್‌ಮೆಂಟ್‌ನಲ್ಲಿ ಗಲಾಟೆ ಮಾಡಿದ್ದಾರೆ ಎಂದು ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು. ಈ ಬಗ್ಗೆ ಸಮನ್ಸ್‌ ನೀಡಿ ವಿಚಾರಣೆಗೆ ವಿನಾಯಕನ್ ಅವರನ್ನು ಪೊಲೀಸ್ ಠಾಣೆಗೆ ಕರೆಸಲಾಗಿದೆ. ಎರ್ನಾಕುಲಂ ಉತ್ತರ ಠಾಣೆಗೆ ಹಾಜರಾಗಿದ್ದ ವಿನಾಯಕನ್‌ ಪೊಲೀಸ್‌ ಠಾಣೆಯಲ್ಲಿ ಗದ್ದಲ ಎಬ್ಬಿಸಿದ್ದಾರೆ. ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಇದರಿಂದ ಪೊಲೀಸರು ಅವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಇದಲ್ಲದೆ ಪೊಲೀಸ್ ಠಾಣೆ ಅಂಗಳದಲ್ಲಿ ಧೂಮಪಾನ ಮಾಡಿದ್ದಕ್ಕಾಗಿ ದಂಡ ವಿಧಿಸಲಾಗಿದೆ. ವೈದ್ಯಕೀಯ ಪರೀಕ್ಷೆಗಾಗಿ ಠಾಣೆಯಿಂದ ಹೊರಗೆ ಕರೆದುಕೊಂಡು ಹೋಗುತ್ತಿದ್ದಾಗಲೂ ಅವರು ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದರು ಎನ್ನಲಾಗಿದೆ.

ವಿನಾಯಕನ್‌ ಅಸಭ್ಯವಾಗಿ ವರ್ತಿಸಿದ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅವರು ಕುಡಿದಿದ್ದಾರೆ. ಅದು ನಮಗೆ ಅರ್ಥವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸರ್ಕಲ್ ಇನ್ಸ್‌ಪೆಕ್ಟರ್ ಪ್ರತಾಪಚಂದ್ರನ್ ಈ ಕುರಿತು ಮಾತನಾಡಿದ್ದು, ನಟ ವಿನಾಯಕನ್ ಮದ್ಯದ ಅಮಲಿನಲ್ಲಿ ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ್ದು, ಅವರ ಮೇಲೆ ಪ್ರಕರಣ ದಾಖಲಾಗಿದೆ. ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಠಾಣೆಯ ಕೆಲಸಕ್ಕೆ ಅಡ್ಡಿಪಡಿಸಿದ ನಂತರ ಪ್ರಕರಣ ದಾಖಲಿಸಿದ್ದೇವೆ. ಕೌಟುಂಬಿಕ ಕಲಹ ಬಗೆಹರಿಸಲು ನಿನ್ನೆ ಮಧ್ಯಾಹ್ನ ಪೊಲೀಸರು ಅವರನ್ನು ಠಾಣೆಗೆ ಕರೆಸಿಕೊಂಡಿದ್ದರು. ರಾತ್ರಿ 10:30ಕ್ಕೆ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಣಿಪುರ ಜನಾಂಗೀಯ ಕಲಹಕ್ಕೆ ಪ್ರಚೋದಿಸಿದ್ದು ಸಿಎಂ ಬಿರೇನ್ ಸಿಂಗ್: ಗಂಭೀರ ಆರೋಪ ಮಾಡಿದ ಬುಡಕಟ್ಟು ಸಂಸ್ಥೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...