ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರ ಹೋರಾಟವನ್ನು ಬೆಂಬಲಿಸಿದ ನಟ ‘ಯಶ್‌’ | Naanu gauri

ಕೆಎಸ್‌ಆ‌ರ್‌ಟಿಸಿ ಸಾರಿಗೆ ನೌಕರರ ಮುಷ್ಕರ ಒಂಬತ್ತನೆ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರ ಒಕ್ಕೂಟವು ಖ್ಯಾತ ಕನ್ನಡ ಚಲನಚಿತ್ರ ನಟ ಯಶ್ ಅವರಿಗೆ ತಮ್ಮ ಮುಷ್ಕರವನ್ನು ಬೆಂಬಲಿಸುವಂತೆ ವಿನಂತಿಸಿ ಬರೆದಿರುವ ಪತ್ರಕ್ಕೆ ಪ್ರತ್ಯುತ್ತರ ನೀಡಿದ್ದು, ಅವರ ಹೋರಾಟವನ್ನು ಬೆಂಬಲಿಸಿದ್ದಾರೆ.

ನೌಕರರ ಪತ್ರಕ್ಕೆ ನೀಡಿರುವ ಪ್ರತ್ಯುತ್ತರದ ಪತ್ರವನ್ನು ಗುರುವಾರ ತಮ್ಮ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಯಶ್‌, “ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ಮುಷ್ಕರ ಆರನೇ ದಿನಕ್ಕೆ-ತಟ್ಟೆ, ಲೋಟ ಬಡಿದು ನೌಕರರ ಪ್ರತಿಭಟನೆ!

ಅವರು ತಮ್ಮ ಪತ್ರದಲ್ಲಿ, “ಇಂದು ನಿಮ್ಮ ಯಶ್‌ ಏನೇ ಆಗಿರಬಹುದು, ಆದರೆ ಅದಕ್ಕೂ ಮೊದಲು ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ. ಮನೆಯಲ್ಲಿ ನಾನು ತಡ ಮಾಡಿದ್ರೆ ದಿನಾಲೂ ನನ್ನ ಬಸ್ಸಿನಲ್ಲಿಯೇ ಬರೋ ಪ್ರಯಾಣಿಕರಿಗೆ ಟ್ರೈನ್‌ ಮಿಸ್‌ ಆಗುತ್ತೇನೋ, ಆಫೀಸ್‌ ಗೆ ಲೇಟ್‌ ಆಗುತ್ತೇನೋ ಅಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೇ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತೆ” ಎಂದು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಮುಂದುವರೆದು ಬರೆದಿರುವ ಅವರು, “ಬಹುಶಃ ಇದು ನನ್ನ ಅಪ್ಪನ ಕತೆ ಮಾತ್ರವಲ್ಲ, ಕರ್ತವ್ಯ ನಿಷ್ಠೆ ಮೆರೆವ ಸಾವಿರಾರು ಸಾರಿಗೆ ನೌಕರರುಗಳ ದಿನಚರಿ ಹೀಗೆ ಇರುತ್ತೆ. ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿವೆ. ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯವಿರಬಹುದು. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು. ಓವರ್‌ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವನ್ನೂ ನಾನು ಹತ್ತಿರದಿಂದ ಬಲ್ಲವನು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾಳೆಯು ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

“ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು. ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿವೆ. ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ” ಎಂದು ನೌಕರರ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.

ರಾಜ್ಯ ಸರ್ಕಾರ ಸಂಬಳ ನೀಡದೆ ಇದ್ದಿದ್ದಕ್ಕೆ ಭಿಕ್ಷಾಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರನ ಮಗು! ವಿಡಿಯೋ ನೋಡಿ

“ಸಮಾಧಾನದ ವಿಷಯ ಅಂದ್ರೆ ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ. ಜೊತೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿ ಕೊಡ್ತು” ಎಂದ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ” ಎಂದು ಅವರು ತಮ್ಮ ಪತ್ರದಲ್ಲಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here