Homeಕರ್ನಾಟಕಚುನಾವಣಾ ಪ್ರಚಾರಕ್ಕೆ ವೇಗವಾಗಿ ಧುಮುಕುವ ನಟರು ರೈತರ ಪರ ಒಂದು ಮಾತನ್ನೂ ಆಡಿಲ್ಲ: ನಟ ಚೇತನ್...

ಚುನಾವಣಾ ಪ್ರಚಾರಕ್ಕೆ ವೇಗವಾಗಿ ಧುಮುಕುವ ನಟರು ರೈತರ ಪರ ಒಂದು ಮಾತನ್ನೂ ಆಡಿಲ್ಲ: ನಟ ಚೇತನ್ ಕಿಡಿ

ನಾವು ನಟರು ಜನರಿಗೆ ಸಹಾಯ ಮಾಡುವ ಬಗ್ಗೆ ಕಾಳಜಿ ವಹಿಸುತ್ತೇವೆಯೇ? ಅಥವಾ ನಮ್ಮ ಶ್ರೀಮಂತ ಗಣ್ಯ ಸ್ನೇಹಿತರನ್ನು ಇನ್ನಷ್ಟು ಪ್ರಚೋದಿಸಲು ನಾವು ನಟರು ಮಾತ್ರ ಆಸಕ್ತಿ ಹೊಂದಿದ್ದೇವೆಯೇ? ಎಂದು ನಟ ಚೇತನ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವಂತೆ ದೇಶದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕನ್ನಡ ಚಲನಚಿತ್ರ ನಟ ಚೇತನ್ ಅಹಿಂಸಾ, “ಕನ್ನಡ ಚಲನಚಿತ್ರ ನಟರು ಚುನಾವಣಾ ಪ್ರಚಾರಕ್ಕೆ ವೇಗವಾಗಿ ಸ್ಪಂಧಿಸುತ್ತಾರೆ. ಆದರೆ ರೈತರ ಪರವಾಗಿ ಒಂದೂ ಮಾತನ್ನು ಆಡಿಲ್ಲ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ತಮ್ಮ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ಈ ಕುರಿತು ಹೇಳಿಕೆಯನ್ನು ಹಂಚಿಕೊಂಡಿರುವ ಚೇತನ್, “ದೇಶಾದ್ಯಂತ ರೈತರು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಚುನಾವಣಾ ಪ್ರಚಾರದ ಬ್ಯಾಂಡ್‌ವ್ಯಾಗನ್‌ಗಳ ಮೇಲೆ ವೇಗವಾಗಿ ನೆಗೆಯುವ ಕನ್ನಡ ಚಲನಚಿತ್ರ ನಟರು ರೈತರಿಗೆ ಬೆಂಬಲವಾಗಿ ಒಂದು ಮಾತನ್ನೂ ಹೇಳಿಲ್ಲ. ನಾವು ನಟರು ಜನರಿಗೆ ಸಹಾಯ ಮಾಡುವ ಬಗ್ಗೆ ಕಾಳಜಿ ವಹಿಸುತ್ತೇವೆಯೇ? ಅಥವಾ ನಮ್ಮ ಶ್ರೀಮಂತ ಗಣ್ಯ ಸ್ನೇಹಿತರನ್ನು ಇನ್ನಷ್ಟು ಪ್ರಚೋದಿಸಲು ನಾವು ನಟರು ಮಾತ್ರ ಆಸಕ್ತಿ ಹೊಂದಿದ್ದೇವೆಯೇ? ಅಹಿಂಸಾ…” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹೋರಾಟ ಹತ್ತಿಕ್ಕಲು ಸುಪ್ರೀಂಕೋರ್ಟ್‌ ಬಳಕೆ: ರೈತ ಸಂಘಟನೆಗಳ ಒಕ್ಕೂಟ ಖಂಡನೆ

ಇದನ್ನೂ ಓದಿ: ’ಐಕ್ಯ ಹೋರಾಟ ವೇದಿಕೆ’ಯಿಂದ ರೈತರ ಮೇಲಿನ ದೌರ್ಜನ್ಯ ವಿರೋಧಿಸಿ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಅನಿರ್ದಿಷ್ಟಾವಧಿ…

ಮೊದಲಿನಿಂದಲೂ ಕೇವಲ ನಟನೆ ಮಾತ್ರವಲ್ಲದೇ ಜನಪರ ಹೋರಾಟಗಳಲ್ಲಿಯೂ ತೊಡಗಿಸಿಕೊಂಡು ವೈಚಾರಿಕವಾಗಿ ಚಿಂತಿಸುವ ನಟ ಚೇತನ್ ಇದೀಗ ರೈತರ ಪರವಾಗಿ ದನಿಯೆತ್ತಿದ್ದಾರೆ. ಇಷ್ಟೇ ಅಲ್ಲದೇ ತಾವು ಪ್ರತಿನಿಧಿಸುತ್ತಿರುವ ಕನ್ನಡ ಚಿತ್ರರಂಗದ ಇತರ ನಟರ ಮೇಲೂ ಕಿಡಿಕಾರಿದ್ದಾರೆ.

ಇದನ್ನೂ ಓದಿ: ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ಕೇಂದ್ರದ ಬಿಜೆಪಿ ಸರ್ಕಾರವು ಮೂರು ಪ್ರಮುಖ ಕೃಷಿ ಮಸೂದೆಗಳಿಗೆ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆ ಜಾರಿಗೊಳಿಸಲು ಮುಂದಾಗಿತ್ತು. ಇದನ್ನು ವಿರೋಧಿಸಿ ದೇಶದಾದ್ಯಂತ ಲಕ್ಷಾಂತರ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಇದೀಗ ಲಕ್ಷಾಂತರ ಪಂಜಾಬ್ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದು 12 ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಸಾಕಷ್ಟು ಸುತ್ತಿನ ಮಾತುಕತೆಗಳು ನಡೆದರೂ ಅವುಗಳೆಲ್ಲಾ ವಿಫಲವಾಗಿವೆ.

ಇದನ್ನೂ ಓದಿ: ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೇಂಡ್‌‌‌‌ನ 36 ಸಂಸದರ ಬೆಂಬಲ

ರೈತರ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ಅಮಾನವೀಯ ಕ್ರಮಗಳನ್ನು ಕೈಗೊಂಡಿತ್ತು. ಇವುಗಳನ್ನೆಲ್ಲಾ ಲೆಕ್ಕಿಸದ ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.

ಈ ಹೋರಾಟಕ್ಕೆ ಬೆಂಬಲ ಸೂಚಿಸಿ ಇಂದಿನಿಂದ ಕರ್ನಾಟಕದಲ್ಲೂ ಸಹ ರೈತರ ಪ್ರತಿಭಟನೆ ಆರಂಭವಾಗಿದೆ.


ಇದನ್ನೂ ಓದಿ: ದರ್ಪ ಮುಂದುವರೆಸಿದ ಟೊಯೋಟಾ ಕಿರ್ಲೋಸ್ಕರ್; ಮತ್ತೇ 20 ಕಾರ್ಮಿಕರ ಅಮಾನತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...