Homeಮುಖಪುಟನಟಿಯ ಅಪಹರಣ, ಅತ್ಯಾಚಾರ ಪ್ರಕರಣ | ಸಂಚುಕೋರನಿಗೆ ಶಿಕ್ಷೆಯಾಗಿಲ್ಲ, ನ್ಯಾಯ ಇನ್ನೂ ಅಪೂರ್ಣ : ನಟಿ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ | ಸಂಚುಕೋರನಿಗೆ ಶಿಕ್ಷೆಯಾಗಿಲ್ಲ, ನ್ಯಾಯ ಇನ್ನೂ ಅಪೂರ್ಣ : ನಟಿ ಮಂಜು ವಾರಿಯರ್

- Advertisement -
- Advertisement -

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ, ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಸೋಮವಾರ (ಡಿ.8) ನ್ಯಾಯಾಲಯ ಖುಲಾಸೆಗೊಳಿಸಿದೆ.

ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಮಾಧ್ಯಮಗಳ ಜೊತೆ ಮಾತನಾಡಿದ್ದ ದಿಲೀಪ್, ಮಾಜಿ ಪತ್ನಿ ಮಂಜು ವಾರಿಯರ್ ತನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಕುರಿತು ಮಂಜು ವಾರಿಯರ್ ಭಾನುವಾರ (ಡಿ.14) ಪ್ರತಿಕ್ರಿಯಿಸಿದ್ದು, “ಪ್ರಕರಣದ ಸಂಚುಕೋರನಿಗೆ ಇನ್ನೂ ಶಿಕ್ಷೆಯಾಗಿಲ್ಲ, ಹಾಗಾಗಿ ನ್ಯಾಯ ಇನ್ನೂ ಅಪೂರ್ಣವಾಗಿದೆ” ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ಮಂಜು ವಾರಿಯರ್, “ಗೌರವಾನ್ವಿತ ನ್ಯಾಯಾಲಯದ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಈ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಇನ್ನೂ ಅಪೂರ್ಣವಾಗಿದೆ. ದೈಹಿಕವಾಗಿ ಅಪರಾಧ ಎಸಗಿದವರಿಗೆ ಮಾತ್ರ ಶಿಕ್ಷೆಯಾಗಿದೆ. ಆದರೆ, ಈ ಹೇಯ ಕೃತ್ಯಕ್ಕೆ ಸಂಚು ರೂಪಿಸಿದವರು, ಅದು ಯಾರೇ ಆಗಿರಲಿ, ಇನ್ನೂ ಮುಕ್ತವಾಗಿ ಓಡಾಡುತ್ತಿದ್ದಾರೆ. ಇದು ಅತ್ಯಂತ ಭಯಾನಕ ವಿಚಾರ. ಈ ಅಪರಾಧದ ಹಿಂದಿರುವ ಪ್ರತಿಯೊಬ್ಬರನ್ನು ಹೊಣೆಗಾರರನ್ನಾಗಿ ಮಾಡಿದಾಗ ಸರಿಯಾದ ನ್ಯಾಯ ಸಿಗುತ್ತದೆ”ಎಂದು ಬರೆದುಕೊಂಡಿದ್ದಾರೆ.

“ಇದು ಕೇವಲ ಒಬ್ಬ ಸಂತ್ರಸ್ತೆಯ ಪ್ರಶ್ನೆಯಲ್ಲ. ಪ್ರತಿಯೊಬ್ಬ ಹುಡುಗಿ, ಪ್ರತಿಯೊಬ್ಬ ಮಹಿಳೆ ಹಾಗೂ ಪ್ರತಿಯೊಬ್ಬ ಮನುಷ್ಯರು ಭಯವಿಲ್ಲದೆ ಕೆಲಸದ ಸ್ಥಳಗಳಲ್ಲಿ, ಬೀದಿಗಳಲ್ಲಿ ಹಾಗೂ ತಮ್ಮ ಜೀವನದಲ್ಲಿ ತಲೆಯೆತ್ತಿ ನಡೆಯುವ ಹಕ್ಕಿನ ವಿಷಯವಾಗಿದೆ” ಎಂದು ಮಂಜು ವಾರಿಯರ್ ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಾಲಯ ಖುಲಾಸೆಗೊಳಿಸಿದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದ ದಿಲೀಪ್, “ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಪಿತೂರಿ ನಡೆಸಲಾಗಿದೆ. ನಾನೇ ಈ ಪ್ರಕರಣದ ನಿಜವಾದ ಬಲಿಪಶು. ನನ್ನ ವೃತ್ತಿ ಜೀವನ, ಪ್ರತಿಷ್ಠೆ ಮತ್ತು ಸಮಾಜದಲ್ಲಿ ನನ್ನ ಜೀವನವನ್ನು ನಾಶಮಾಡುವ ಉದ್ದೇಶದಿಂದ ಈ ಪಿತೂರಿ ನಡೆಸಲಾಗಿದೆ. ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ ಇದೆ ಎಂದು ಮೊದಲು ಹೇಳಿದ್ದೇ ಮಂಜು ವಾರಿಯರ್. ಅವರು ಹೀಗೆ ಹೇಳಿದ ದಿನದಿಂದಲೇ ನನ್ನ ವಿರುದ್ಧದ ಪಿತೂರಿ ಶುರುವಾಯಿತು” ಎಂದು ಹೇಳಿದ್ದರು.

2017ರಲ್ಲಿ ಕೊಚ್ಚಿಯ ಹೊರವಲಯದಲ್ಲಿ ನಡೆದ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ತೀರ್ಪನ್ನು ಡಿಸೆಂಬರ್ 8ರಂದು ಎರ್ನಾಕುಲಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಹನಿ ಎಂ.ವರ್ಗೀಸ್ ಪ್ರಕಟಿಸಿದ್ದು, 8ನೇ ಆರೋಪಿಯಾಗಿದ್ದ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ್ದರು.

ಉಳಿದ ಆರೋಪಿಗಳಾದ ಸುನಿಲ್ ಎನ್.ಎಸ್ ಅಲಿಯಾಸ್‌ ಪಲ್ಸರ್ ಸುನಿ, ಮಾರ್ಟಿನ್ ಆಂಟೋನಿ, ಮಣಿಕಂಠನ್ ಬಿ, ವಿಜೀಶ್ ವಿಪಿ, ಸಲೀಂ ಎಚ್ ಅಲಿಯಾಸ್ ವಡಿವಲ್ ಸಲೀಂ ಹಾಗೂ ಪ್ರದೀಪ್ ಅವರನ್ನು ದೋಷಿಗಳೆಂದು ಘೋಷಿಸಿದ್ದರು. ಈ ಎಲ್ಲಾ ಅಪರಾಧಿಗಳಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

ಚುನಾವಣಾ ಆಯೋಗದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ...

ಕರ್ನಾಟಕ ಎಸ್ಐಆರ್: ಅಳಿಸುವಿಕೆಗೆ ಸಂಬಂಧಿಸಿದ ದತ್ತಾಂಶದಿಂದ ಸುಮಾರು 6000 ಮತದಾರರು ನಾಪತ್ತೆ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಅಂಕಿಅಂಶಗಳ ವ್ಯತ್ಯಾಸ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆ, ಚುನಾವಣಾ ಆಯೋಗದ ಅಂಕಿಅಂಶಗಳಲ್ಲೇ ಸುಮಾರು 6 ಸಾವಿರ ಮತದಾರರ ಅಳಿಸುವಿಕೆಗೆ ಸಂಬಂಧಿಸಿದ ವ್ಯತ್ಯಾಸ ಬೆಳಕಿಗೆ ಬಂದಿದೆ. ಮತದಾರರ...

Breaking News: ಎಸ್‌ಐಆರ್‌ನಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್: ಕರ್ನಾಟಕದ ಅಂಕಿಅಂಶಗಳು ಎತ್ತಿದ ಗಂಭೀರ ಪ್ರಶ್ನೆಗಳು

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದಲ್ಲಿ ಮುಂದುವರಿಯುತ್ತಿರುವ ಬೆನ್ನಲ್ಲೇ, ಅದರ ಲಿಂಗಾನುಪಾತದ ಅಂಕಿಅಂಶಗಳು ಗಂಭೀರವಾದ ಸಾಮಾಜಿಕ ನ್ಯಾಯದ ಪ್ರಶ್ನೆಯನ್ನು ಮುನ್ನೆಲೆಗೆ ತಂದಿವೆ. ಲಭ್ಯವಿರುವ 34 ಜಿಲ್ಲೆ/ನಗರ ಆಡಳಿತ ಘಟಕಗಳ...

ಎಸ್ಐಆರ್‌ನಲ್ಲಿ ಬದುಕಿದ್ದರೂ ‘ಮೃತ’, ಮನೆಯಲ್ಲಿದ್ದರೂ ‘ಸ್ಥಳಾಂತರ’: ಚಿಕ್ಕಬಳ್ಳಾಪುರದ ಸಂತ್ರಸ್ತರನ್ನು ಭೇಟಿಯಾದ ಪ್ರಕಾಶ್ ರಾಜ್ 

ಚಿಕ್ಕಬಳ್ಳಾಪುರ: ಚುನಾವಣಾ ಆಯೋಗದ ಎಸ್ಐಆರ್ ಪ್ರಕ್ರಿಯೆಯಲ್ಲಿ ಬದುಕಿರುವ ಮತದಾರರನ್ನೇ ಮೃತಪಟ್ಟವರು ಎಂದು ಗುರುತಿಸಿರುವ ಆರೋಪಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಕೇಳಿಬಂದಿವೆ. ಎಸ್ಐಆರ್ ಪರಿಶೋಧನೆ-ಪ್ರತಿರೋಧ ಜಾಥಾದ ಭಾಗವಾಗಿ ಗುಡಿಬಂಡೆ ತಾಲೂಕು ಕಚೇರಿ ಆವರಣಕ್ಕೆ ಆಗಮಿಸಿದ್ದ...

“ಚುನಾವಣಾ ಆಯೋಗದ ‘ಕೊಳೆತ ವ್ಯವಸ್ಥೆ’ ಗ್ಯಾನೇಶ್ ಕುಮಾರ್ ಅವರಿಂದಷ್ಟೇ ಶುರುವಾಗಿದ್ದಲ್ಲ!” – ಬಂಗಾಳ ಚುನಾವಣೆಯ ಅಸಲಿ ಸತ್ಯ ಬಿಚ್ಚಿಟ್ಟ ಪ್ರಶಾಂತ್ ಕಿಶೋರ್

ಭಾರತೀಯ ಚುನಾವಣಾ ಆಯೋಗದ ಒಳಗಿನ 'ಸರ್ವಾಧಿಕಾರಿ' ಧೋರಣೆ, ಇಬ್ಬರು ಆಯುಕ್ತರ ಬಂಡಾಯ ಮತ್ತು ನಿಯಮಬಾಹಿರ ನಿರ್ಧಾರಗಳ ಕುರಿತು ಇಡೀ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ, ಖ್ಯಾತ ಚುನಾವಣಾ ತಂತ್ರಜ್ಞ ಹಾಗೂ 'ಜನ್...

ಎಸ್ಐಆರ್ ಅಕ್ರಮ: ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ; ಪೊಲೀಸರಿಂದ ಹಲವೆಡೆ ಅಶ್ರುವಾಯು, ಜಲಫಿರಂಗಿ ಪ್ರಯೋಗ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸಿದ್ದು, ಕನಿಷ್ಠ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಕ್ಷದ ಕಾರ್ಯಕರ್ತರು ಬೀದಿಗಿಳಿದಿದ್ದಾರೆ. ಚುನಾವಣಾ...

ಶೀಘ್ರವೇ ಪೌರಕಾರ್ಮಿಕರ ಉಪಹಾರ ಭತ್ಯೆ ₹70 ಕ್ಕೆ ಹೆಚ್ಚಿಸುವೆ: ಸಿಎಂ ಡಿ.ಕೆ. ಶಿವಕುಮಾರ್

ಪೌರಕಾರ್ಮಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಪೌರಕಾರ್ಮಿಕರ ಉಪಹಾರ ಭತ್ಯೆಯನ್ನು ₹35 ರಿಂದ ₹70 ಕ್ಕೆ ಏರಿಕೆ ಮಾಡಿ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು...

ಎಸ್ಐಆರ್ ಬಡವರ ಪಾಲಿನ ಕೊಲ್ಲುವ ಕತ್ತಿಯಾಗಿದೆ : ಪ್ರಕಾಶ್ ರಾಜ್

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಬಡವರ ಪಾಲಿನ ಕೊಲ್ಲುವ ಕತ್ತಿಯಾಗಿದೆ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು. ಎಸ್ಐಆರ್ ಪರಿಶೋಧನೆ ಮತ್ತು ಪ್ರತಿರೋಧ ಜಾಥಾದ ಭಾಗವಾಗಿ ಶುಕ್ರವಾರ (ಸೆ.25)...

ದಲಿತರ ಮೇಲಿನ ದೌರ್ಜನ್ಯ ಹೆಚ್ಚಳ: ದಲಿತ ಸಂಘಟನೆಗಳ ಒಕ್ಕೂಟ ಖಂಡನೆ

ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿರುವ ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ತಡೆಯುವಲ್ಲಿ ಸರ್ಕಾರದ ವೈಫಲ್ಯವನ್ನು ಖಂಡಿಸಿ ಇಂದ ಬೆಂಗಳೂರಿನ ಪ್ರೆಸ್‌ ಕ್ಲಬ್‌ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದಲಿತ ಸಂಘಟನೆಗಳ...

ಮುರ್ಷಿದಾಬಾದ್‌: ಎಸ್ಐಆರ್ ಪ್ರಕ್ರಿಯೆಯಲ್ಲಿ ಹೆಸರುಗಳು ಉಳಿದರೂ ‘ಬಾಂಗ್ಲಾದೇಶಿ’ ಎಂದು ಅನುಮಾನಿಸಿ 60 ವರ್ಷದ ತಂದೆ, ಮೂವರು ಪುತ್ರರ ಗಡಿಪಾರು ಆರೋಪ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಂಗಾಳಿ ಮುಸ್ಲಿಂ ಕುಟುಂಬವೊಂದರ ನಾಲ್ವರು ಸದಸ್ಯರನ್ನು ಪೊಲೀಸರು ಮನೆಯಿಂದ ಕರೆದೊಯ್ದು, ಅವರು ಬಾಂಗ್ಲಾದೇಶಿ ಪ್ರಜೆಗಳು ಎಂದು ಆರೋಪಿಸಿ ಬಿಎಸ್‌ಎಫ್‌ಗೆ ಹಸ್ತಾಂತರಿಸಿ ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು...