Homeಮುಖಪುಟನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

- Advertisement -
- Advertisement -

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಪ್ರಕರಣದ 8ನೇ ಆರೋಪಿಯಾಗಿದ್ದ ದಿಲೀಪ್ ಜೊತೆಗೆ, ಅಪರಾಧ ಮಾಡಲು ಕ್ರಿಮಿನಲ್ ಪಿತೂರಿ ನಡೆಸಿದ ಆರೋಪ ಹೊತ್ತಿದ್ದ 7ನೇ ಆರೋಪಿಯಾಗಿದ್ದ ಚಾರ್ಲಿ ಥಾಮಸ್, 9 ಆರೋಪಿಯಾಗಿದ್ದ ಸನಿಲ್ ಕುಮಾರ್ ಯಾನೆ ಮೇಸ್ತ್ರಿ ಸನಿಲ್ ಮತ್ತು 15ನೇ ಆರೋಪಿಯಾಗಿದ್ದ ಶರತ್ ಜಿ. ನಾಯರ್ ಅವರ ಖುಲಾಸೆಯನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ.

ವಿಚಾರಣಾ ನ್ಯಾಯಾಲಯವು ಪ್ರಕರಣದ ಇತರ ಆರೋಪಿಗಳಾಗಿದ್ದ ಪಲ್ಸರ್ ಸುನಿ (ಎ1), ಮಾರ್ಟಿಂಗ್ ಆಂಟನಿ (ಎ2), ಬಿ. ಮಣಿಕಂದನ್ (ಎ3), ವಿಪಿ ವಿಜೀಶ್ (ಎ4), ಎಚ್. ಸಲೀಮ್ (ಎ5), ಸಿ. ಪ್ರದೀಪ್ (ಎ 6) ಅವರನ್ನು ಅತ್ಯಾಚಾರ, ಪಿತೂರಿ, ಅಪಹರಣ ಮತ್ತು ಇತರ ಅಪರಾಧಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120 ಬಿ, 340, 354, 366, 354 ಬಿ ಮತ್ತು 376 ಡಿ ಅಡಿಯ ಅಪರಾಧಗಳಲ್ಲಿ ಇವರನ್ನು ತಪ್ಪಿತಸ್ಥರೆಂದು ಘೋಷಣೆ ಮಾಡಲಾಗಿದೆ.

ಅಪರಾಧಿಗಳಿಗೆ ಸಾಮೂಹಿಕ ಅತ್ಯಾಚಾರದ ಅಪರಾಧಕ್ಕಾಗಿ 20 ವರ್ಷಗಳ ಕಠಿಣ ಸಜೆ ವಿಧಿಸಲಾಗಿದ್ದು, ಇತರ ಸಂಬಂಧಿತ ಅಪರಾಧಗಳಿಗಾಗಿ ಏಕಕಾಲದಲ್ಲಿ ಅನುಭವಿಸಬೇಕಾದ ಹೆಚ್ಚುವರಿ ಶಿಕ್ಷೆಗಳನ್ನು ನೀಡಲಾಗಿದೆ. ಅಲ್ಲದೆ, ಆಪರಾಧಿಗಳಿಗೆ ವಿಧಿಸಲಾದ ದಂಡದ ಮೊತ್ತದಲ್ಲಿ 5 ಲಕ್ಷ ರೂಪಾಯಿಯನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಲಯವು ನಿರ್ದೇಶಿಸಿದೆ.

ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿಯಲ್ಲಿ, 1 ರಿಂದ 6 ರವರೆಗಿನ ಅಪರಾಧಿಗಳಿಗೆ ವಿಧಿಸಲಾದ ಶಿಕ್ಷೆಯನ್ನು ಹೆಚ್ಚಿಸುವಂತೆ ಕೋರಿದೆ. ಅಪರಾಧದ ಗಂಭೀರತೆ ಮತ್ತು ಸಮಾಜದ ಮೇಲೆ ಅದು ಬೀರುವ ಪರಿಣಾಮವನ್ನು ಪರಿಗಣಿಸಿದರೆ, ಪ್ರಸ್ತುತ ನೀಡಿರುವ ಶಿಕ್ಷೆಯು ಅಸಮರ್ಪಕವಾಗಿದೆ ಎಂದು ವಾದಿಸಿದೆ.

ಸೆಷನ್ಸ್ ನ್ಯಾಯಾಲಯವು ಅಪರಾಧಿಗಳಿಗೆ ಆಶ್ರಯ ನೀಡಿದ್ದ ಆರೋಪದಿಂದ ಚಾರ್ಲಿ ಥಾಮಸ್ ಅವರನ್ನು ಖುಲಾಸೆಗೊಳಿಸಿದೆ ಮತ್ತು ನಟ ದಿಲೀಪ್ ಅವರ ಮೇಲಿದ್ದ ಎಲ್ಲಾ ಆರೋಪಗಳನ್ನು ವಜಾಗೊಳಿಸಿ ಅವರನ್ನು ಮುಕ್ತಗೊಳಿಸಿದೆ. ಸನಿಲ್ ಕುಮಾರ್ ಮತ್ತು ಶರತ್ ನಾಯರ್ ಅವರ ಮೇಲಿದ್ದ ಪಿತೂರಿ, ಪ್ರಚೋದನೆ ಮತ್ತು ಸಾಕ್ಷ್ಯ ನಾಶಪಡಿಸಿದ ಆರೋಪಗಳಿಂದಲೂ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿದೆ.

ರಾಜ್ಯ ಸರ್ಕಾರವು ತನ್ನ ಮೇಲ್ಮನವಿಯಲ್ಲಿ, ಆರೋಪಿಗಳ ಖುಲಾಸೆಯು ಕಾನೂನುಬಾಹಿರ ಮತ್ತು ಅಸಮರ್ಥನೀಯ ಎಂದು ಪ್ರತಿಪಾದಿಸಿದೆ. ಪ್ರಕರಣದ ಹಿಂದಿನ ದೊಡ್ಡ ಮಟ್ಟದ ಪಿತೂರಿಗೆ ಸಂಬಂಧಿಸಿದ ಪುರಾವೆಗಳನ್ನು ಸಮಗ್ರವಾಗಿ ಮೌಲ್ಯಮಾಪನ ಮಾಡುವಲ್ಲಿ ವಿಚಾರಣಾ ನ್ಯಾಯಾಲಯವು ವಿಫಲವಾಗಿದೆ ಎಂದು ವಾದಿಸಿದೆ. ದಾಖಲಾಗಿರುವ ಸಾಕ್ಷ್ಯಾಧಾರಗಳ ಪ್ರಕಾರ, ಸಂತ್ರಸ್ತೆಯ ಮೇಲಿನ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ 2013 ರಲ್ಲೇ ಎಂಟನೇ ಆರೋಪಿ (ಎ8) ಮತ್ತು ಮೊದಲನೇ ಆರೋಪಿ (ಎ1) ನಡುವೆ ಮುಖ್ಯ ಪಿತೂರಿ ನಡೆದಿತ್ತು. ಆ ನಂತರ 1 ರಿಂದ 6 ರವರೆಗಿನ ಆರೋಪಿಗಳು ಮಾಡಿದ ಕೃತ್ಯಗಳು ಅದೇ ಪಿತೂರಿಯ ಮುಂದುವರಿದ ಭಾಗವಾಗಿವೆ ಎಂದಿದೆ.

ವಿಚಾರಣಾ ನ್ಯಾಯಾಲಯವು ತನಿಖಾ ತಂಡದ ವಿರುದ್ಧ ನೀಡಿರುವ ಕೆಲವು ಪ್ರತಿಕೂಲ ಅಭಿಪ್ರಾಯಗಳನ್ನು ಸಹ ರಾಜ್ಯ ಸರ್ಕಾರವು ತನ್ನ ಮೇಲ್ಮನವಿಯಲ್ಲಿ ಪ್ರಶ್ನಿಸಿದೆ. ವಿಶೇಷ ತನಿಖಾ ತಂಡವು (ಎಸ್‌ಐಟಿ) ಅತ್ಯಂತ ಸಮಗ್ರವಾದ ಮತ್ತು ನ್ಯಾಯಸಮ್ಮತವಾದ ತನಿಖೆಯನ್ನು ನಡೆಸಿದೆ ಎಂದು ಸರ್ಕಾರ ಪ್ರತಿಪಾದಿಸಿದೆ. ತನಿಖೆಯಲ್ಲಿ ಒಂದು ವೇಳೆ ಸಣ್ಣಪುಟ್ಟ ನ್ಯೂನತೆಗಳಿದ್ದರೂ ಸಹ, ಅವುಗಳಿಂದ ಆರೋಪಿಗಳಿಗೆ ಅನ್ಯಾಯವಾಗಿದೆ ಎಂದು ಸಾಬೀತಾಗದ ಹೊರತು, ಅಂತಹ ನ್ಯೂನತೆಗಳನ್ನೇ ಖುಲಾಸೆಗೆ ಆಧಾರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...