Homeಮುಖಪುಟಕಾಂಗ್ರೆಸ್‌ಗೆ ನಟಿ ಖುಷ್ಬೂ ರಾಜೀನಾಮೆ: ಇಂದು ಬಿಜೆಪಿ ಸೇರುವ ಸಾಧ್ಯತೆ

ಕಾಂಗ್ರೆಸ್‌ಗೆ ನಟಿ ಖುಷ್ಬೂ ರಾಜೀನಾಮೆ: ಇಂದು ಬಿಜೆಪಿ ಸೇರುವ ಸಾಧ್ಯತೆ

ಹತ್ರಾಸ್‌‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ಖುಷ್ಬೂ ತೀವ್ರವಾಗಿ ಟೀಕಿಸಿದ್ದರು.

- Advertisement -
- Advertisement -

ಬಹುಭಾಷಾ ನಟಿ, ರಾಜಕಾರಣಿ ಖುಷ್ಬೂ ಸುಂದರ್‌ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಹೇಳಿಕೆಗಳ ಬೆನ್ನಲ್ಲೇ ಎಐಸಿಸಿ ವಕ್ತಾರ ಸ್ಥಾನದಿಂದ ಕೈಬಿಡಲಾಗಿತ್ತು. ಈಗ ನಟಿ ಖುಷ್ಬೂ ತಾವೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದು ಅವರು ಬಿಜೆಪಿ ಸೇರುವ ಸಾಧ್ಯತೆಯನ್ನು ದಟ್ಟಗೊಳಿಸಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ಇನ್ನು ಎಂಟು ತಿಂಗಳು ಬಾಕಿ ಇರುವಾಗ ಇವರ ನಡೆ ಕುತೂಹಲ ಮೂಡಿಸಿದೆ.

ಇಂದು ಬಿಜೆಪಿಗೆ ಸೇರುವ ಸಾಧ್ಯತೆ ಇರುವುದಾಗಿ ವರದಿಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರರಾದ ಖುಷ್ಬೂ ಸುಂದರ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ’ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಬಯಸುವ ನನ್ನಂತಹ ಜನರನ್ನು ತುಳಿಯಲಾಗುತ್ತಿದೆ ಎಂದಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿರುವ ಖುಷ್ಬೂ, ’ಕಾಂಗ್ರೆಸ್ ಪಕ್ಷ 2014 ರ ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿ ಅತ್ಯಂತ ಹೀನಾಯ ಸಮಯದಲ್ಲಿ ನಾನು ಪಕ್ಷಕ್ಕೆ ಸೇರ್ಪಡೆಯಾದೆ. ಯಾವುದೇ ಹಣಕಾಸಿನ ಲಾಭಕ್ಕಾಗಿ ಅಥವಾ ಹೆಸರು, ಖ್ಯಾತಿಗಾಗಿ ಪಕ್ಷಕ್ಕೆ ಬರಲಿಲ್ಲ’ ಎಂದು ತಿಳಿಸಿದ್ದಾರೆ. ಪಕ್ಷದಲ್ಲಿ ವಾಸ್ತವ ಪರಿಸ್ಥಿತಿಯ ಸಂಪರ್ಕ ಇಲ್ಲದವರು ಅಥವಾ ಸಾರ್ವಜನಿಕವಾಗಿ ಗುರುತಿಸಿಕೊಳ್ಳದ ವ್ಯಕ್ತಿಗಳು ನಿಯಂತ್ರಣ ಹೇರುತ್ತಿದ್ದಾರೆ’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.  ಪತ್ರದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಜೊತೆಗಿನ ಆರು ವರ್ಷಗಳ ನಂಟು ಮುರಿದುಕೊಂಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು: AIADMK ಪಕ್ಷದಿಂದ ಇ.ಪಳನಿಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ; ಅಧಿಕೃತ ಘೋಷಣೆ

2014ರಲ್ಲಿ ಸೋನಿಯಾ ಗಾಂಧಿ ಜೊತೆಗಿನ ಭೇಟಿ ಬಳಿಕ ನಟಿ ಡಿಎಂಕೆ ತೊರೆದ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಆದರೆ 2019ರ ಲೋಕಸಭಾ ಚುನಾವಣೆಯ ಡಿಎಂಕೆ–ಕಾಂಗ್ರೆಸ್‌ ಮೈತ್ರಿಯಲ್ಲಿ ಅವರಿಗೆ ಟಿಕೆಟ್‌ ಸಿಗಲಿಲ್ಲ, ಅಲ್ಲದೇ ರಾಜ್ಯಸಭೆಗೂ ಆಯ್ಕೆ ಮಾಡಲಿಲ್ಲ.

ಕಳೆದ ವಾರ, ಖುಷ್ಬೂ ಸುಂದರ್ ಬಿಜೆಪಿ ಸೇರುವ ವದಂತಿಗಳನ್ನು ತಳ್ಳಿ ಹಾಕಿದ್ದರು. ತಾನು ಕಾಂಗ್ರೆಸ್ ನಿಂದ ಎಲ್ಲಿಯೂ ಹೋಗುತ್ತಿಲ್ಲ ಮತ್ತು ಬಿಜೆಪಿಗೆ ಸೇರುವ ವದಂತಿಗಳು 2014 ರಿಂದ ಸುತ್ತುತ್ತಿವೆ ಎಂದು ದಿ ಹಿಂದೂಗೆ ತಿಳಿಸಿದ್ದರು.

ನಟಿ ಪಕ್ಷಕ್ಕೆ ಸೇರಲಿದ್ದಾರೆ ಎಂದು ತಮಿಳುನಾಡಿನ ಬಿಜೆಪಿ ಮೂಲಗಳು ತಿಳಿಸಿವೆ. ಟಿಎನ್‌ಸಿಸಿಯ ಹಿರಿಯ ನಾಯಕಿ ಕೂಡ ಅವರು (ಖುಷ್ಬೂ) ದೆಹಲಿಗೆ ತೆರಳಿದ ನಂತರ ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಧೃಢಪಡಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್‌.ಮುರುಗನ್‌ ಶನಿವಾರದಿಂದಲೂ ನವದೆಹಲಿಯಲ್ಲೇ ಇದ್ದಾರೆ. ನಟಿ ಖುಷ್ಬೂ ಭಾನುವಾರ ರಾತ್ರಿ ದೆಹಲಿಗೆ ತೆರಳಿದ್ದಾರೆ. ಅವರ ದೆಹಲಿ ಭೇಟಿ ಮತ್ತಷ್ಟು ಊಹಾಪೊಹಗಳಿಗೆ ಕಾರಣವಾಗಿದೆ.

90ರ ದಶಕದಲ್ಲಿ ತಮಿಳುನಾಡಿನ ಅತ್ಯಂತ ಜನಪ್ರಿಯ ಸ್ಟಾರ್‌ ನಟ-ನಟಿಯರಲ್ಲಿ ಖುಷ್ಬೂ ಸಹ ಒಬ್ಬರಾಗಿದ್ದರು. ಆ ಸಮಯದಲ್ಲಿ ಅಭಿಮಾನಿಗಳು ಅವರಿಗಾಗಿಯೇ ದೇವಾಲಯವನ್ನೂ ಕಟ್ಟಿದ್ದರು. ಅವರು ಹಿರಿತೆರೆಯ ಜೊತೆಗೆ ಕಿರುತೆರೆಗಳಲ್ಲೂ ಕಾಣಿಸಿಕೊಂಡಿದ್ದಾರೆ.

ಹತ್ರಾಸ್‌‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ಅವರು ತೀವ್ರವಾಗಿ ಟೀಕಿಸಿದ್ದರು.


ಇದನ್ನೂ ಓದಿ: ಜಾತಿಕಾರಣ: ಗ್ರಾಮಪಂಚಾಯಿತಿ ಅಧ್ಯಕ್ಷೆಯನ್ನು ನೆಲದ ಮೇಲೆ ಕೂರಿಸಿದ ಸದಸ್ಯರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...