Homeಕರ್ನಾಟಕದೇವನಹಳ್ಳಿ ರೈತ ಹೋರಾಟಕ್ಕೆ ದನಿಗೂಡಿಸಿದ ನಟಿ ರಮ್ಯಾ

ದೇವನಹಳ್ಳಿ ರೈತ ಹೋರಾಟಕ್ಕೆ ದನಿಗೂಡಿಸಿದ ನಟಿ ರಮ್ಯಾ

- Advertisement -
- Advertisement -

ದೇವನಹಳ್ಳಿ ರೈತರ ಭೂ ಸ್ವಾಧೀನ ವಿರೋಧಿ ಹೋರಾಟಕ್ಕೆ ಸ್ಯಾಂಡಲ್‌ವುಡ್ ನಟಿ ರಮ್ಯಾ ದನಿಗೂಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ರೈತರ ಹೋರಾಟದ ಕುರಿತ ಪತ್ರಿಕಾ ವರದಿಯನ್ನು ಹಂಚಿಕೊಂಡಿರುವ ಅವರು, “ಕರ್ನಾಟಕ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಬಗ್ಗೆ ಸ್ವಲ್ಪ ಕರುಣೆ ತೋರಿಸಿ ಅವರಿಗೆ ಒಳ್ಳೆಯದನ್ನು ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

“ಇದು ಕೇವಲ ಕರ್ನಾಟಕದ ರೈತರ ಕಥೆಯಲ್ಲ. ದೇಶದಾದ್ಯಂತ ಎಲ್ಲಾ ಕಡೆಯು ಇದೇ ಪರಿಸ್ಥಿತಿ ಇದೆ.
ಕೈಗಾರಿಕೆಗಳು ಉದ್ಯೋಗಗಳನ್ನು ಸೃಷ್ಟಿಸುವಾಗ ರೈತರ ಜೀವನೋಪಾಯವನ್ನೂ ಕಾಪಾಡಿಕೊಳ್ಳಬೇಕಿದೆ” ಎಂದು ಬರೆದುಕೊಂಡಿದ್ದಾರೆ.

ಭೂ ಸ್ವಾಧೀನದ ವಿರುದ್ದ ಕಳೆದ 1,185 ದಿನಗಳಿಂದ ನಿರಂತರ ಹೋರಾಟ ಮಾಡಿಕೊಂಡು ಬಂದಿರುವ ದೇವನಹಳ್ಳಿಯ 13 ಹಳ್ಳಿಗಳ ರೈತರಿಗೆ ಇಂದು ನಿರ್ಣಾಯಕ ದಿನವಾಗಿದೆ.

ನಂದಿ ಬೆಟ್ಟದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಸರ್ಕಾರ ರೈತರ ಪರ ತೀರ್ಮಾನ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸದಲ್ಲಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ ಮತ್ತು ಚನ್ನರಾಯಪಟ್ಟಣ ಹೋರಾಟ ಸ್ಥಳದಲ್ಲಿ ಉಪವಾಸ ರೈತರು ಹೋರಾಟಗಾರರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಆರನೇ ದಿನಕ್ಕೆ ಕಾಲಿಟ್ಟ ‘ಭೂಮಿ ಸತ್ಯಾಗ್ರಹ’: ಫ್ರೀಡಂ ಪಾರ್ಕ್‌, ಚನ್ನರಾಯಪಟ್ಟಣದಲ್ಲಿ ನಿರಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...

ಇಂಡಿಗೋ ಹಾರಾಟದಲ್ಲಿ ಐದನೇ ದಿನವೂ ವ್ಯತ್ಯಯ: ವಿಮಾನ ದರಕ್ಕೆ ತಾತ್ಕಾಲಿಕ ಮಿತಿ ವಿಧಿಸಿದ ಕೇಂದ್ರ

ಇಂಡಿಗೋದ ದೇಶೀಯ ಕಾರ್ಯಾಚರಣೆಗಳು ಸತತ ಐದನೇ ದಿನವೂ ಅಸ್ತವ್ಯಸ್ತಗೊಂಡಿದ್ದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ (ಡಿಸೆಂಬರ್ 6) ವಿಮಾನ ಟಿಕೆಟ್ ದರಗಳ ಮೇಲೆ ತಾತ್ಕಾಲಿಕ ಮಿತಿಯನ್ನು ವಿಧಿಸಿದೆ. ನಿಗದಿತ ಮಾನದಂಡಗಳ ಯಾವುದೇ...

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು

ಪಶ್ಚಿಮ ಬಂಗಾಳದ ಬಂಕುರಾದ ಮುಚಿಕಟಾ ಮತ್ತು ವೆದುವಾಶೋಲ್ ಗ್ರಾಮಗಳ ಬುಡಕಟ್ಟು ಜನಾಂಗದವರು 'ಸಮಾಜ್ವಾದ್ ಅಂತರ-ರಾಜ್ಯ ಮಾಝಿ ಸರ್ಕಾರ್'ಗೆ ನಿಷ್ಠೆಯನ್ನು ಉಲ್ಲೇಖಿಸಿ, ಚುನಾವಣಾ ಆಯೋಗ್ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ...