Homeಮುಖಪುಟಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ - ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಜಾಗತಿಕವಾಗಿ ಬೆಂಬಲ ವ್ಯಕ್ತವಾಗುತ್ತಿದ್ದು, ಈ ಕುರಿತು ಖ್ಯಾತ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ರೈತರನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದರ ಪರ-ವಿರುದ್ಧ ಚರ್ಚೆಗಳು ವ್ಯಾಪಕವಾಗಿ ನಡೆದಿದ್ದವು. ಗ್ರೇಟಾ ಅವರನ್ನು ಹಲವಾರು ಜನ ಬೆಂಬಲಿಸಿದ್ದರು. ಈ ಸಾಲಿಗೆ ಈಗ ನಟಿ-ರಾಜಕಾರಣಿ ರಮ್ಯಾ ಸೇರಿದ್ದಾರೆ.

ರಮ್ಯಾ ಗ್ರೇಟಾ ಅವರ ಟ್ವೀಟನ್ನು ರೀಟ್ವೀಟ್ ಮಾಡಿದ್ದು, “ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತಪರ ಹೋರಾಟದಲ್ಲಿ ನಾವು ಹಿಂದುಳಿದಿಲ್ಲ – ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ ಕರವೇ

ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ದೆಹಲಿ ಪೊಲೀಸರು ಘರ್ಷಣೆ ನಡೆಸಿದ ನಂತರ ಅಲ್ಲಿ ಇಂಟರ್ನೆಟ್ ಕಡಿತಗೊಳಿಸಿರುವುದನ್ನು ಉಲ್ಲೇಖಿಸಿ ಸಿಎನ್‌ಎನ್ ಹೋರಾಟದ ಬಗ್ಗೆ ವರದಿ ಮಾಡಿತ್ತು. ಇದನ್ನು ತನ್ನ ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿದ್ದ ಪಾಪ್ ತಾರೆ ರಿಹಾನ್ನಾ “ರೈತ ಹೋರಾಟದ ಬಗ್ಗೆ ನಾವೇಕೆ ಮಾತನಾಡುತ್ತಿಲ್ಲ” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ರೈತ ಹೋರಾಟ: ಬಾಲಿವುಡ್ ನಟ ಸಲ್ಮಾನ್ ಖಾನ್‌‌ ಹೇಳಿದ್ದೇನು?

ರಿಹಾನ್ನಾ ಟ್ವೀಟ್ ಮಾಡಿದ ನಂತರ ಹೋರಾಟವು ಜಾಗತಿಕವಾಗಿ ಸದ್ದು ಮಾಡಿದ್ದು ಹಲವಾರು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಿದ್ದರು. ಇದರಿಂದ ಅಸಮಧಾನ ಗೊಂಡಿದ್ದ ಕೇಂದ್ರ ಸರ್ಕಾರ ರೈತರ ಸಮಸ್ಯೆಯು ದೇಶದ ಆಂತರಿಕ ವಿಷಯ, ವಿದೇಶಿಯರು ತಲೆ ಹಾಕಬಾರದು ಎಂದು ಹೇಳಿತ್ತು. ಜೊತೆಗೆ ರೈತರನ್ನು ಬೆಂಬಲಿಸಿದ ಹ್ಯಾಶ್‌ಟ್ಯಾಗ್‌ಗಳ ವಿರುದ್ದ ಕೆಲವು ಹ್ಯಾಶ್‌ಟ್ಯಾಗ್‌ಗಳನ್ನು ನೀಡಿತ್ತು. ಇದನ್ನು ಅನುಸರಿಸಿ ಭಾರತೀಯ ಸೆಲೆಬ್ರಿಟಿಗಳು ಸರ್ಕಾರದ ಪರ ಬ್ಯಾಟ್ ಬೀಸಿದ್ದರು.

ಈ ಮಧ್ಯೆ ರೈತ ಹೋರಾಟದ ಪರವಾಗಿ ಮಾತನಾಡಿದ್ದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್, ತನ್ನ ಟ್ವೀಟ್‌ ಒಂದರಲ್ಲಿ ಹೋರಾಟಕ್ಕೆ ಹೇಗೆ ಬೆಂಬಲಿಸಬಹುದು ಎಂಬ ಟೂಲ್‌ಕಿಟ್‌ ಅನ್ನು ಹಂಚಿಕೊಂಡಿದ್ದರು. ಇದೀಗ ಪೊಲೀಸರು ಈ ಟೂಲ್‌‌ಕಿಟ್‌ ಅನ್ನು ರಚಿಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ.


ಇದನ್ನೂ ಓದಿ: ಕಂಗನಾ ದ್ವೇಷಪೂರಿತ ಪೋಸ್ಟ್: ತನಿಖೆಯ ವರದಿ ಸಲ್ಲಿಸುವಂತೆ ಕೋರ್ಟ್ ನಿರ್ದೇಶನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...