Homeಮುಖಪುಟಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾಗೆ ಸಂಬಂಧಿಸಿದಂತೆ ನಟಿ ಸಂಜನಾ ಬಂಧನ!

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾಗೆ ಸಂಬಂಧಿಸಿದಂತೆ ನಟಿ ಸಂಜನಾ ಬಂಧನ!

ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಬಂಧನವಾಗಿರುವ ನಟಿ ಸಂಜನಾರನ್ನು 5 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

- Advertisement -
- Advertisement -

ದೇಶದಲ್ಲಿ ಡ್ರಗ್ಸ್ ಮಾಫಿಯಾಗೆ ಸಂಬಂಧಿಸಿದಂತೆ ಹಲವಾರು ಜನರನ್ನು ಬಂಧಿಸಲಾಗುತ್ತಿದ್ದು, ಪ್ರತಿಯೊಂದು ಪ್ರಕರಣವೂ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇಂದು ಸುಶಾಂತ್ ಸಿಂಗ್ ಸಾವಿನ ಪ್ರಕರಣದ ತನಿಖೆಯ ವೇಳೆ ಡ್ರಗ್ ಸೇವನೆಯ ಬಗ್ಗೆ ಬಾಯಿ ಬಿಟ್ಟ ರಿಯಾ ಚಕ್ರವರ್ತಿಯವರನ್ನು ಬಂಧಿಸಿದ ಬೆನ್ನಲ್ಲೇ ಕನ್ನಡದ ನಟಿ ಸಂಜನಾ ಅವರನ್ನು ಬಂಧಿಸಲಾಗಿದೆ.

ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಬಂಧನವಾಗಿರುವ ನಟಿ ಸಂಜನಾರನ್ನು 5 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಈಗಷ್ಟೇ ಸಿಸಿಬಿ ಪೊಲೀಸರು ನಟಿ ಸಂಜನಾರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 8ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು. ಈ ವೇಳೆ ಸಿಸಿಬಿ ಪೊಲೀಸರ ಮನವಿಯನ್ನು ಪುರಸ್ಕರಿಸಿದ ನ್ಯಾಯಧೀಶರು ವಿಚಾರಣೆ ನಡೆಸಿದರು. ಈಗ 5 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ:ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಟಿ ರಾಗಿಣಿಯ ನಂತರ ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಗಲ್ರಾನಿ ಅವರನ್ನು ಬಂಧಿಸಿದ್ದು, ಜೊತೆಗೆ ರಾಹುಲ್ ಶೆಟ್ಟಿ ಎಂಬುವವರನ್ನು ಸಿಸಿಬಿ ಬಂಧಿಸಿದ್ದರು. ಈ ವೇಳೆ ಸಂಜನಾ ಬಗ್ಗೆ ಪೊಲೀಸರ ಬಳಿ ರಾಹುಲ್ ಶೆಟ್ಟಿ ಬಾಯಿ ಬಿಟ್ಟಿದ್ದ. ರಾಹುಲ್ ಜೊತೆ ಹಲವು ಪಾರ್ಟಿಗಳಲ್ಲಿ ಸಹ ಸಂಜನಾ ಕಾಣಿಸಿಕೊಳ್ಳುತ್ತಿದ್ದರು ಎನ್ನಲಾಗಿತ್ತು. ಹೀಗಾಗಿ ಸಂಜನಾರನ್ನು ಪೊಲೀಸರು ಬಂಧಿಸಿದ್ದಾರೆ.

ಇಂದು ಬೆಳಿಗ್ಗೆಯೇ ಸಂಜನಾರನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದರು. ಸತತ ವಿಚಾರಣೆ ಬಳಿಕ ಸಿಸಿಬಿ ಅಧಿಕಾರಿಗಳು ಸಂಜನಾರನ್ನು ಬಂಧಿಸಿದ್ದರು. ಬಳಿಕ ಸಂಜನಾಗೆ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.

ಮಂಗಳೂರು ಮೂಲದ ಡ್ರಗ್ ಪೆಡ್ಲರ್ ಪೃಥ್ವಿ ಶೆಟ್ಟಿ ಹಾಗೂ ರಾಹುಲ್ ನೀಡಿದ್ದ ಹೇಳಿಕೆಯ ಆಧಾರದಲ್ಲಿ ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ಯುಪಿ ಪೊಲೀಸರ ಸಮ್ಮುಖದಲ್ಲೇ ಕೊಲೆ ಆರೋಪಿಯ ಹತ್ಯೆಗೈದ ಗುಂಪು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...