Homeಮುಖಪುಟಕೊರೊನಾ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ನಟಿ ಶಿಲ್ಪಾ ಶೆಟ್ಟಿ ಮನವಿ

ಕೊರೊನಾ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ನಟಿ ಶಿಲ್ಪಾ ಶೆಟ್ಟಿ ಮನವಿ

- Advertisement -
- Advertisement -

ಕೊರೊನಾ ವೈರಸ್ ಬಗ್ಗೆ ನಕಲಿ ಸುದ್ದಿಗಳ ಹರಡುತ್ತಿರುವುದರ ವಿರುದ್ದ ಹಾಗೂ ವೈದ್ಯರ ಮೇಲಿನ ದೌರ್ಜನ್ಯದ ವಿರುದ್ದ ನಟಿ ಶಿಲ್ಪಾ ಶೆಟ್ಟಿ ವಿಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ.

ಆರೋಗ್ಯ ಕಾರ್ಯಕರ್ತರ ವಿರುದ್ಧ ಆಗುತ್ತಿರುವ ಹಿಂಸಾಚಾರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ರವೀನಾ ಟಂಡನ್ ಅವರ “ಜೀತೆಗಾ ಇಂಡಿಯಾ ಜೀತೇಂಗೆ ಹಮ್” ಅಭೀಯಾನದ ಭಾಗವಾಗಿ ಶಿಲ್ಪಾ ತಮ್ಮ ವಿಡಿಯೋ ಸಂದೇಶವನ್ನು ಹಂಚಿಕೊಂಡಿದ್ದಾರೆ.

ವೈದ್ಯರು, ದಾದಿಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆರೋಗ್ಯ ವೃತ್ತಿಪರರನ್ನು ಉಲ್ಲೇಖಿಸಿ “ಮಾನವೀಯತೆಯ ಹೆಸರಿನಲ್ಲಿ ನಾವು ಮಾಡಬಹುದಾದ ಕ್ರಮವವೇನೆಂದರೆ, ನಮ್ಮನ್ನು ಸುರಕ್ಷಿತವಾಗಿಡಲು ತಮ್ಮ ಪ್ರಾಣವನ್ನೇ ತ್ಯಾಗ ಮಾಡುತ್ತಿರುವವರಿಗಾಗಿ ಧ್ವನಿ ಎತ್ತುವುದು” ಎಂದು ಶಿಲ್ಪಾ ಹೇಳಿದ್ದಾರೆ.

ಜೊತೆಗೆ ಕೊರೊನಾ ವೈರಸ್ ಸುಳ್ಳು ಮಾಹಿತಿಯ ಹರಡುವಿಕೆಯ ಬಗ್ಗೆ ಎಚ್ಚರವಾಗಿರುವಂತೆ ಶಿಲ್ಪಾ ಶೆಟ್ಟಿ ತನ್ನ ಇನ್ಸ್ಟ್ರಾಗ್ರಾಮ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಶಿಲ್ಪಾ ತನ್ನ ಲಾಕ್‌ಡೌನ್ ಜೀವನ ದೈನಂದಿನ ನೋಟವನ್ನು ಆಗಾಗ್ಗೆ ಹಂಚಿಕೊಳ್ಳುತ್ತಿದ್ದಾರೆ. ಇಂದು ಶಿಲ್ಪಾ “ನನ್ನ ಪ್ರೀತಿಯ, ರವೀನಾ ನನ್ನನ್ನು ನಾಮನಿರ್ದೇಶನ ಮಾಡಿದ್ದಕ್ಕಾಗಿ ಮತ್ತು ನಿಮ್ಮ ಈ ಅದ್ಭುತ ಕಾರ್ಯಕ್ರಮದಲ್ಲಿ ಭಾಗವಾಗಿಸಿದ್ದಕ್ಕಾಗಿ ಧನ್ಯವಾದಗಳು. ನನ್ನ ಎಲ್ಲ ಸಹ ನಾಗರಿಕರೆ ದಯವಿಟ್ಟು ನಮ್ಮ ಸಮುದಾಯವನ್ನು ಸುರಕ್ಷಿತವಾಗಿಡಲು ದಣಿವರಿಯಿಲ್ಲದೆ ಕೆಲಸ ಮಾಡುತ್ತಿರುವ ಯೋಧರ ಪರವಾಗಿ ನಿಂತುಕೊಳ್ಳಿ .. ಸುಳ್ಳು ವದಂತಿಗಳನ್ನು ಬಯಲು ಮಾಡಿ. ನಿಮ್ಮ ಮಟ್ಟದಲ್ಲಿ ನಕಲಿ ಸುದ್ದಿಗಳ ಹರಡುವಿಕೆಯನ್ನು ನಿಲ್ಲಿಸಬೇಕು ಎಂಬುದು ನನ್ನ ವಿನಮ್ರ ವಿನಂತಿಯಾಗಿದೆ. ಈ ಸಾಂಕ್ರಾಮಿಕ ರೋಗದ ವಿರುದ್ಧ ಒಗ್ಗಟ್ಟಾಗಿ ನಿಲ್ಲುವ ಸಮಯ ಇದು. ” ಎಂದಿದ್ದಾರೆ.

ಸಂದೇಶವನ್ನು ಹರಡಲು ಶಿಲ್ಪಾ ತನ್ನ ಸಹೋದರಿ ಶಮಿತಾ ಶೆಟ್ಟಿ, ಚಲನಚಿತ್ರ ನಿರ್ಮಾಪಕ ಫರಾ ಖಾನ್ ಮತ್ತು ನಟ ಅಭಿಮನ್ಯು ದಸ್ಸಾನಿಯನ್ನು ನಾಮಕರಣ ಮಾಡಿದರು.

View this post on Instagram

Thank you my dear, @officialraveenatandon for nominating me and making me a part of this amazing initiative of yours. To all my fellow citizens, please look out and stand up for the warriors who are tirelessly working round the clock to keep our community safe. It’s a humble request to please treat these heroes with respect, debunk myths & false rumours, and stop the spread of fake news at your own levels. Let’s do our bit too! It’s time to stand united against this pandemic. I nominate @shamitashetty_official @farahkhankunder and @abhimanyud to take this cause forward. . . . . . #SwasthRahoMastRaho #JeetegaIndia #JeetengeHum #IndiaFightsCorona #COVID19 #StayHomeStaySafe

A post shared by Shilpa Shetty Kundra (@theshilpashetty) on

ಈ ರೀತಿಯ ಕಾರ್ಯದಲ್ಲಿ ಕೈಜೋಡಿಸುವಂತೆ ರವೀನಾ, ಶಿಲ್ಪಾ ಶೆಟ್ಟಿಯ ಜೊತೆ ಸೋನು ಸೂದ್ ಅವರನ್ನು ಕೂಡಾ ನಾಮಕರಣ ಮಾಡಿದ್ದರು. ಈ ಮಧ್ಯೆ ಹ್ಯಾಪಿ ನ್ಯೂ ಇಯರ್ ನಟ ಕೊರೊನಾ ವಿರುದ್ದ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರು ಉಳಿಯಲು ತನ್ನ ಮುಂಬೈ ಹೋಟೆಲ್ ಅನ್ನು ತೆರೆದಿದ್ದಾರೆ. ತಮ್ಮ ಸಂದೇಶಗಳನ್ನು ಹಂಚಿಕೊಂಡ ರವೀನಾ, ಸೋನಾಲಿ ಕುಲಕರ್ಣಿ ಮತ್ತು ಚಲನಚಿತ್ರ ನಿರ್ಮಾಪಕ ಒನಿರ್ ಅವರನ್ನು ಕೂಡಾ ಟ್ಯಾಗ್ ಮಾಡಿದ್ದರು.


ಇದನ್ನೂ ಓದಿ: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...