Homeಅಂತರಾಷ್ಟ್ರೀಯಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

- Advertisement -
- Advertisement -

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್ ನ್ಯಾಯಾಲಯಕ್ಕೆ ಜಂಟಿ ಅರ್ಜಿ ಸಲ್ಲಿಸಿರುವ ಎಸ್‌ಸಿ ಮತ್ತು ಅದಾನಿ ಪರ ಅಮೆರಿಕ ಮೂಲದ ವಕೀಲರು, ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಎಸ್‌ಇಸಿಯ ಸಮನ್ಸ್‌ಗಳನ್ನು ಸ್ವೀಕರಿಸಲು ಒಪ್ಪಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದರಿಂದಾಗಿ, ಅದಾನಿಗಳಿಗೆ ಹೇಗೆ ಸಮನ್ಸ್ ನೀಡಬೇಕು ಎಂದು ನ್ಯಾಯಾಧೀಶರು ತೀರ್ಪು ನೀಡುವ ಅಗತ್ಯವಿಲ್ಲ ಎಂದು ವರದಿಗಳು ಹೇಳಿವೆ.

ಅಮೆರಿಕದ ಕಾನೂನಿನ ಪ್ರಕಾರ ಈ ಪ್ರಕರಣದಲ್ಲಿ ಅದಾನಿಗಳಿಗೆ ಸಮನ್ಸ್ ಕೊಡುವುದು ಕಡ್ಡಾಯವಾಗಿದೆ. ಹಾಗಾಗಿ, ಎಸ್‌ಇಸಿ ಹೇಗ್ ಕನ್ವೆನ್ಷನ್ ಮೂಲಕ ಎರಡು ಬಾರಿ ಸಮನ್ಸ್ ಜಾರಿ ಮಾಡಿತ್ತು. ಆದರೆ, ಅದನ್ನು ಅದಾನಿಗಳಿಗೆ ತಲುಪಿಸಲು ಎರಡೂ ಬಾರಿಯೂ ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಸಚಿವಾಲಯ ನಿರಾಕರಿಸಿತ್ತು. ಸಮನ್ಸ್‌ಗಳಲ್ಲಿ ತಾಂತ್ರಿಕ ದೋಷಗಳಿದ್ದವು. ಅಂದರೆ, ಅದರ ಮೇಲೆ ಅಗತ್ಯವಾದ ಅಧಿಕೃತ ಸೀಲ್ ಮತ್ತು ಇಂಕ್ ಸಹಿ ಮುಂತಾದವು ಸರಿಯಾಗಿ ಇರಲಿಲ್ಲ ಎಂದು ಸರ್ಕಾರ ಜಾರಿಕೊಂಡಿತ್ತು.

ಭಾರತ ಸರ್ಕಾರ ಎರಡು ಬಾರಿ ಸಮನ್ಸ್ ತಲುಪಿಸಲು ನಿರಾಕರಿಸಿದ ಕಾರಣ ಎಸ್‌ಇಸಿಗೆ ಹೇಗ್ ಕನ್ವೆನ್ಷನ್ ಮೂಲಕ ಸಮನ್ಸ್ ತಲುಪಿಸುವುದು ಕಷ್ಟವಾಗಿತ್ತು. ಇದರಿಂದಾಗಿ ಅದು ನ್ಯೂಯಾರ್ಕ್‌ನ ಈಸ್ಟರ್ನ್ ಡಿಸ್ಟ್ರಿಕ್ಟ್ ಫೆಡರಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸಾಮಾನ್ಯ ಪ್ರಕ್ರಿಯೆಯನ್ನು ಬಿಟ್ಟು ಬೇರೆ ಮಾರ್ಗದ ಮೂಲಕ (ಇ-ಮೇಲ್ ಮೂಲಕ) ಸಮನ್ಸ್ ತಲುಪಿಸಲು ಅನುಮತಿ ಕೇಳಿತ್ತು. ಈ ನಡುವೆ ಅದಾನಿಗಳು ಸಮನ್ಸ್ ಸ್ವೀಕರಿಸಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ನ್ಯಾಯಾಧೀಶರು ಈ ಜಂಟಿ ಅರ್ಜಿಯನ್ನು ಅನುಮೋದಿಸಿದರೆ, ಅದಾನಿಯವರಿಗೆ ಎಸ್‌ಇಸಿ ದೂರಿನ ಮೇಲೆ ಪ್ರತಿಕ್ರಿಯಿಸಲು ಅಥವಾ ಆ ಪ್ರಕರಣವನ್ನು ವಜಾಗೊಳಿಸುವಂತೆ ಅರ್ಜಿ ಸಲ್ಲಿಸಲು 90 ದಿನಗಳ ಕಾಲಾವಕಾಶ ಸಿಗಲಿದೆ. ಅದಾನಿಯವರ ಪ್ರತಿಕ್ರಿಯೆಯ ನಂತರ, ಎಸ್‌ಇಸಿ ತನ್ನ ಆಕ್ಷೇಪಣೆ ಅಥವಾ ವಿರೋಧವನ್ನು ಸಲ್ಲಿಸಲು ಮುಂದಿನ 60 ದಿನಗಳ ಕಾಲಾವಕಾಶ ಹೊಂದಿರುತ್ತದೆ. ಎಸ್‌ಇಸಿ ಸಲ್ಲಿಸಿದ ಆಕ್ಷೇಪಣೆಗಳಿಗೆ ಅದಾನಿಯವರು ತಮ್ಮ ಅಂತಿಮ ಪ್ರತ್ಯುತ್ತರವನ್ನು ನೀಡಲು 45 ದಿನಗಳ ಸಮಯವನ್ನು ನಿಗದಿಪಡಿಸಲಾಗಿದೆ.

ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು 2021 ರ ಬಾಂಡ್ ವಿತರಣೆಯ ಸಮಯದಲ್ಲಿ ಅಮೆರಿಕದ ಹೂಡಿಕೆದಾರರಿಗೆ ಸುಳ್ಳು ಮತ್ತು ದಾರಿತಪ್ಪಿಸುವ ಮಾಹಿತಿ ನೀಡಿದ್ದಾರೆ. ಭಾರತದಲ್ಲಿ ಸೌರಶಕ್ತಿ ಒಪ್ಪಂದಗಳನ್ನು ಪಡೆಯಲು ಸರ್ಕಾರಿ ಅಧಿಕಾರಿಗಳಿಗೆ ಸುಮಾರು $265 ಮಿಲಿಯನ್ (ಅಂದಾಜು ₹2,200 ಕೋಟಿ) ಲಂಚ ನೀಡುವ ಯೋಜನೆಯ ಬಗ್ಗೆ ಹೂಡಿಕೆದಾರರಿಂದ ಮಾಹಿತಿಯನ್ನು ಮರೆಮಾಚಲಾಗಿದೆ. ಹೂಡಿಕೆದಾರರಿಗೆ ಕಂಪನಿಯು ಭ್ರಷ್ಟಾಚಾರ ವಿರೋಧಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದೆ ಎಂದು ನಂಬಿಸಿ, ಅಕ್ರಮವಾಗಿ ಹಣ ಸಂಗ್ರಹಿಸಲಾಗಿದೆ ಈ ಎಲ್ಲಾ ಆರೋಪಗಳನ್ನು ಮಾಡಿ ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ (ಎಜಿಇಎಲ್‌) ಮೇಲೆ ಎಸ್‌ಇಸಿ ನವೆಂಬರ್ 2024 ರಲ್ಲಿ ದೂರು ದಾಖಲಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅದಾನಿ ಗ್ರೂಪ್, ಈ ಆರೋಪಗಳು ಆಧಾರರಹಿತವಾಗಿವೆ ಎಂದು ತಿರಸ್ಕರಿಸಿದೆ. ಅಲ್ಲದೆ, ಎಜಿಇಎಲ್‌ ಕಂಪನಿಯು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಮತ್ತು ಕಂಪನಿಯ ಯಾವುದೇ ನಿರ್ದೇಶಕರ ಮೇಲೆ ಲಂಚ ಅಥವಾ ಭ್ರಷ್ಟಾಚಾರದ ಅಪರಾಧ ಆರೋಪಗಳನ್ನು ಹೊರಿಸಲಾಗಿಲ್ಲ ಎಂದು ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...