Homeಮುಖಪುಟಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ಶಕ್ತಿಯ ಖಾಸಗೀಕರಣ ಮಸೂದೆ ಅಂಗೀಕಾರ ಬೆನ್ನಲ್ಲೇ ಬೆಳವಣಿಗೆ

- Advertisement -
- Advertisement -

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ.

ಈ ಬೆನ್ನಲ್ಲೇ ಅದಾನಿ ಗ್ರೂಪ್ ವಾಣಿಜ್ಯ ಪರಮಾಣು ವಿದ್ಯುತ್ ಯೋಜನೆಯ ಕುರಿತು ಉತ್ತರ ಪ್ರದೇಶ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್ ಒಂದು ಹೊಸ ನ್ಯೂಕ್ಲಿಯರ್ ವಿದ್ಯುತ್ ಯೋಜನೆಯ ಬಗ್ಗೆ ಆಲೋಚಿಸುತ್ತಿದೆ. ಒಟ್ಟು 8 ಸಣ್ಣ ಆಕಾರದ ನ್ಯೂಕ್ಲಿಯರ್ ರಿಯಾಕ್ಟರ್‌ಗಳನ್ನು (ಎಸ್‌ಎಂಆರ್‌) ಸ್ಥಾಪಿಸುವ ಯೋಜನೆ ಇದಾಗಿದೆ. ಪ್ರತಿಯೊಂದು ರಿಯಾಕ್ಟರ್‌ನ ಸಾಮರ್ಥ್ಯ 300 ಮೆಗಾವ್ಯಾಟ್ ಆಗಿರುತ್ತದೆ.ಒಟ್ಟು 8 ರಿಯಾಕ್ಟರ್‌ಗಳಿಂದ ಅದಾನಿ ಗ್ರೂಪ್‌ಗೆ ಸುಮಾರು 1,600 ಮೆಗಾವ್ಯಾಟ್ ನ್ಯೂಕ್ಲಿಯರ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಸಿಗಲಿದೆ.ಈ ಮಾಹಿತಿಯನ್ನು ತಿಳಿಸಿದವರು ತಮ್ಮ ಹೆಸರನ್ನು ಬಹಿರಂಗಪಡಿಸದಂತೆ ಕೇಳಿಕೊಂಡಿದ್ದಾರೆ. ಏಕೆಂದರೆ ಈ ಯೋಜನೆಯ ಬಗ್ಗೆ ಇನ್ನೂ ಖಾಸಗಿ ಚರ್ಚೆಗಳು ನಡೆಯುತ್ತಿವೆ ಎಂದು ಸುದ್ದಿ ಸಂಸ್ಥೆ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ರಿಯಾಕ್ಟರ್‌ಗಳಿಗೆ ಸ್ಥಿರವಾದ ನೀರಿನ ಪೂರೈಕೆಯನ್ನು ಖಚಿತಪಡಿಸಿಜಕೊಳ್ಳುವುದು ಅಗತ್ಯವಾಗಿದೆ. ಹಾಗಾಗಿ, ಯೋಜನೆಗೆ ಉತ್ತರ ಪ್ರದೇಶ ಸರ್ಕಾರ ಇನ್ನೂ ಸೂಕ್ತವಾದ ನದಿ ತೀರದ ಸ್ಥಳವನ್ನು ಗುರುತಿಸಿಲ್ಲ.

ದತ್ತಾಂಶ ಕೇಂದ್ರ ವಿಸ್ತರಣೆ ಮತ್ತು ಕೃತಕ ಬುದ್ಧಿಮತ್ತೆ-ಚಾಲಿತ ವ್ಯವಸ್ಥೆಗಳ ಹೆಚ್ಚುತ್ತಿರುವ ಬಳಕೆಯಿಂದಾಗಿ ಭಾರತದ ವಿದ್ಯುತ್ ಬೇಡಿಕೆ ತೀವ್ರವಾಗಿ ಏರುತ್ತಿರುವ ಸಮಯದಲ್ಲಿ, ತನ್ನ ನವೀಕರಿಸಬಹುದಾದ ಮತ್ತು ಕಡಿಮೆ-ಇಂಗಾಲದ ಇಂಧನ ಬಂಡವಾಳವನ್ನು ವಿಸ್ತರಿಸುವ ಅದಾನಿಯ ಪ್ರಯತ್ನಗಳ ಒಂದು ಭಾಗವಾಗಿ ಈ ಯೋಜನೆಗೆ ಮುಂದಾಗಿದೆ ಎಂದು ವರದಿ ಹೇಳಿದೆ.

ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಅದಾನಿ ಗ್ರೂಪ್ ಅಣು ವಿದ್ಯುತ್ ಯೋಜನೆ ಕುರಿತು ಚರ್ಚೆಗೆ ಮುಂದಾಗಿರುವುದು ಗಮನಾರ್ಹವಾಗಿದೆ.

ಖಾಸಗಿ ಗ್ರೂಪ್ ಒಂದು ಅಣು ವಿದ್ಯುತ್ ಯೋಜನೆಗೆ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ ಮಸೂದೆ ಮಂಡಿಸಲಾಗಿದೆ ಎಂದು ಸಂಸತ್ತಿನಲ್ಲಿ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದರು.

ಫೆಬ್ರವರಿಯ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಪರಮಾಣು ಇಂಧನ ಮಿಷನ್ ಅಡಿಯಲ್ಲಿ, ಕೇಂದ್ರ ಸರ್ಕಾರವು ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿಗೆ 200 ಬಿಲಿಯನ್ ರೂ.ಗಳನ್ನು ಖರ್ಚು ಮಾಡುವುದಾಗಿ ಹೇಳಿದೆ.

ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿ

ಅದಾನಿ ಗ್ರೂಪ್ ಮತ್ತು ಉತ್ತರ ಪ್ರದೇಶ ಸರ್ಕಾರದ ನಡುವಿನ ಚರ್ಚೆಗಳು ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿಯ ಸುತ್ತ ಕೇಂದ್ರೀಕೃತವಾಗಿವೆ. ಪ್ರಸ್ತಾವಿತ ಯೋಜನೆಯ ಪ್ರಕಾರ, ಸರ್ಕಾರಿ ಸ್ವಾಮ್ಯದ ಭಾರತೀಯ ಪರಮಾಣು ವಿದ್ಯುತ್ ನಿಗಮ ಲಿಮಿಟೆಡ್ (ಎನ್‌ಪಿಸಿಐಎಲ್) ಅದಾನಿ ಗ್ರೂಪ್ ಪರವಾಗಿ ಸ್ಥಾವರವನ್ನು ನಿರ್ವಹಿಸುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ಅದಾನಿ ಸ್ಥಾಪಿಸಲು ಯೋಜಿಸಿರುವ 200 ಮೆಗಾವ್ಯಾಟ್ ಸಾಮರ್ಥ್ಯದ ಎಸ್‌ಎಂಆರ್‌ಗಳ ವಿನ್ಯಾಸ ಮತ್ತು ಅಭಿವೃದ್ಧಿಯ ಕುರಿತು ಸರ್ಕಾರಿ ಸ್ವಾಮ್ಯದ ಭಾಭಾ ಪರಮಾಣು ಸಂಶೋಧನಾ ಕೇಂದ್ರ (ಬಿಎಆರ್‌ಸಿ) ಕೆಲಸ ಮಾಡುತ್ತಿದೆ.

ಸರ್ಕಾರದ ಅನುಮೋದನೆಗಳನ್ನು ಪಡೆದ ನಂತರ ಈ ಯೋಜನೆ ಪೂರ್ಣಗೊಳ್ಳಲು ಐದರಿಂದ ಆರು ವರ್ಷಗಳು ಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಅದಾನಿ ಪರಮಾಣು ವಲಯಕ್ಕೆ ಮೊದಲ ಬಾರಿಗೆ ಪ್ರವೇಶಿಸುವುದರಿಂದ ಸಮಯ ಮಿತಿಯನ್ನು ಭಾಗಶಃ ವಿಸ್ತರಿಸಲಾಗಿದೆ.

ಇತರ ಕಂಪನಿಗಳಿಂದ ಪರಮಾಣು ಕ್ಷೇತ್ರದ ಮೇಲೆ ಕಣ್ಣು

ಟಾಟಾ ಗ್ರೂಪ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಜೆಎಸ್‌ಡಬ್ಲ್ಯೂ ಗ್ರೂಪ್ ಸೇರಿದಂತೆ ಇತರ ಭಾರತೀಯ ಉದ್ಯಮ ಸಮೂಹಗಳು ಕೂಡ ಪರಮಾಣು ವಿದ್ಯುತ್ ವಲಯಕ್ಕೆ ಪ್ರವೇಶವನ್ನು ಬಯಸುತ್ತಿವೆ ಎಂದು ಪಿಟಿಐ ಈ ಹಿಂದೆ ವರದಿ ಮಾಡಿತ್ತು.

ಭಾರತವು ಪ್ರಸ್ತುತ ಏಳು ಸ್ಥಳಗಳಲ್ಲಿ ಸುಮಾರು ಎರಡು ಡಜನ್ ಪರಮಾಣು ರಿಯಾಕ್ಟರ್‌ಗಳನ್ನು ನಿರ್ವಹಿಸುತ್ತಿದ್ದು, ಇದು ದೇಶದ ವಿದ್ಯುತ್ ಉತ್ಪಾದನೆಗೆ ಸರಿಸುಮಾರು ಶೇಕಡ 3ರಷ್ಟು ಕೊಡುಗೆ ನೀಡುತ್ತಿದೆ. ಈ ರಿಯಾಕ್ಟರ್‌ಗಳು ಸುಮಾರು 8,780 ಮೆಗಾವ್ಯಾಟ್ ಸ್ಥಾಪಿತ ಸಾಮರ್ಥ್ಯವನ್ನು ಹೊಂದಿದ್ದು, ಅನುಷ್ಠಾನದ ವಿವಿಧ ಹಂತಗಳಲ್ಲಿರುವ ಯೋಜನೆಗಳ ಮೂಲಕ ಸಾಮರ್ಥ್ಯವನ್ನು 13,600 ಮೆಗಾವ್ಯಾಟ್‌ಗೆ ಹೆಚ್ಚಿಸುವ ಯೋಜನೆಗಳು ನಡೆಯುತ್ತಿವೆ. 2047 ರ ವೇಳೆಗೆ 100 ಗಿಗಾವ್ಯಾಟ್ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು ಸಾಧಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಪರಮಾಣು ಕ್ಷೇತ್ರಕ್ಕೆ ಅದಾನಿ ಪ್ರವೇಶದ ಕುರಿತು ಉತ್ತರ ಪ್ರದೇಶ ಸರ್ಕಾರ, ಅದಾನಿ ಗ್ರೂಪ್ ಮತ್ತು ಪರಮಾಣು ಇಂಧನ ಇಲಾಖೆಯ ಪ್ರತಿನಿಧಿಗಳು, ಯಾರೂ ಕೂಡ ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ಬ್ಲೂಮ್‌ಬರ್ಗ್‌ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...