Homeಮುಖಪುಟಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸುಪ್ರೀಂ ತೀರ್ಪಿನ ಮರುಪರಿಶೀಲನೆ ಕೋರಿ ಅರ್ಜಿ ಸಲ್ಲಿಕೆ

ಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸುಪ್ರೀಂ ತೀರ್ಪಿನ ಮರುಪರಿಶೀಲನೆ ಕೋರಿ ಅರ್ಜಿ ಸಲ್ಲಿಕೆ

- Advertisement -
- Advertisement -

ಅದಾನಿ ಗ್ರೂಪ್‌ ವಿರುದ್ದದ ಷೇರು ಬೆಲೆ ದುರ್ಬಳಕೆ ಆರೋಪಗಳ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಥವಾ ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ವರ್ಗಾಯಿಸಲು ನಿರಾಕರಿಸಿದ ಜನವರಿ 3ರ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಸಿಬಿಐ ಅಥವಾ ಎಸ್‌ಐಟಿ ತನಿಖೆಗೆ ಆದೇಶಿಸಲು ನಿರಾಕರಿಸಿದ್ದ ಸುಪ್ರೀಂ ಕೋರ್ಟ್, ಬಂಡವಾಳ ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅದಾನಿ ಗ್ರೂಪ್‌ ವಿರುದ್ಧದ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸುತ್ತಿದೆ ಎಂದು ತನ್ನ ತೀರ್ಪಿನಲ್ಲಿ ಹೇಳಿತ್ತು.

ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿ ದೋಷಗಳಿವೆ. ಅಲ್ಲದೆ, ಅರ್ಜಿದಾರರ ಪರ ವಕೀಲರು ಕಂಡುಕೊಂಡ ಕೆಲ ಹೊಸ ವಿಷಯಗಳ ಪ್ರಕಾರ, ತೀರ್ಪಿನ ಪರಿಶೀಲನೆಗೆ ಸಾಕಷ್ಟು ಕಾರಣಗಳಿವೆ ಎಂದು ಮರು ಪರಿಶೀಲನಾ ಅರ್ಜಿಯಲ್ಲಿ ಹೇಳಲಾಗಿದೆ. ಪ್ರಕರಣ ಸಂಬಂಧ ಈ ಹಿಂದೆ ಅರ್ಜಿ ಸಲ್ಲಿಸಿದವರಲ್ಲಿ ಒಬ್ಬರಾದ ಅನಾಮಿಕಾ ಜೈಸ್ವಾಲ್ ಅವರು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ವಕೀಲೆ ನೇಹಾ ರಾಠಿ ಅವರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ಸೆಬಿ ತನ್ನ ವರದಿಯಲ್ಲಿ ಅದಾನಿ ಗ್ರೂಪ್‌ ಮೇಲೆ ಆರೋಪ ಕೇಳಿ ಬಂದ ನಂತರ ತಾನು ಕೈಗೊಂಡ 24 ತನಿಖೆಗಳ ಸ್ಥಿತಿಗತಿಯ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಅವು ಪೂರ್ಣಗೊಂಡಿದೆಯೂ, ಇಲ್ಲವೋ. ಆದರೆ, ಸೆಬಿ ಯಾವುದೇ ತನಿಖೆ ಅಥವಾ ಕ್ರಮದ ವಿವರಗಳನ್ನು ಬಹಿರಂಗಪಡಿಸಿಲ್ಲ ಎಂದು ಹೇಳಲಾಗಿದೆ.

“ಸೆಬಿ ತನ್ನ ತನಿಖೆಯ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆಗೊಳಿಸದ ಹೊರತು, ಯಾವುದೇ ನಿಯಂತ್ರಕ ವೈಫಲ್ಯವಿಲ್ಲ ಎಂದು ತೀರ್ಮಾನಿಸಲು ಸಾಧ್ಯವಿಲ್ಲ” ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ತನ್ನ ತೀರ್ಪಿನಲ್ಲಿ, ಅದಾನಿ ಗ್ರೂಪ್ ವಿರುದ್ಧ ಆರೋಪಗಳನ್ನು ಹೊರಿಸಲಾದ 24 ವಿಷಯಗಳ ಪೈಕಿ 22 ರಲ್ಲಿ ಸೆಬಿ ತನ್ನ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೆಬಿ ವಿರುದ್ದ ಯಾವುದೇ ಸ್ಪಷ್ಟವಾದ ನಿಯಂತ್ರಕ ವೈಫಲ್ಯ ಆರೋಪಗಳಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಅರ್ಜಿಯು, ಸೆಬಿಯ ನಿಯಂತ್ರಕ ವೈಫಲ್ಯಗಳು ಸುಲಭವಾಗಿ ಗೋಚರಿಸುವ ಅನೇಕ ನಿದರ್ಶನಗಳಿವೆ. ಅಂತಹ ವೈಫಲ್ಯಗಳು ಅಂತಿಮವಾಗಿ ಆಪಾದಿತ ನಿಯಂತ್ರಕ ಉಲ್ಲಂಘನೆಗಳು ಮತ್ತು ಶಾಸನಬದ್ಧ ಉಲ್ಲಂಘನೆಗಳಿಗೆ ಕಾರಣವಾಗಿವೆ ಎಂದು ಹೇಳಿದೆ.

ಇನ್ನೂ ಅನೇಕ ಅಂಶಗಳನ್ನು ಉಲ್ಲೇಖಿಸಿ ತೀರ್ಪಿನ ಮರು ಪರಿಶೀಲನೆಗೆ ಅನಾಮಿಕಾ ಜೈಸ್ವಾಲ್ ಮನವಿ ಮಾಡಿದ್ದಾರೆ.

ಹಿಂಡೆನ್‌ಬರ್ಗ್‌ ವರದಿ : 

ಅದಾನಿ ಸಮೂಹದ ಕಂಪನಿಗಳು ಸಾಲ ಪಡೆಯುವುದಕ್ಕಾಗಿ ಕೃತಕವಾಗಿ ತಮ್ಮ ಷೇರುಗಳ ಬೆಲೆ ಏರಿಸಿಕೊಂಡಿದೆ. ತಮ್ಮ ಷೇರುಗಳ ಬೆಲೆಯನ್ನು ಅಕ್ರಮವಾಗಿ ಏರಿಸಿ, ಅವುಗಳ ಮೌಲ್ಯ ಹೆಚ್ಚಿಸಿಕೊಂಡು ನಂತರ ಅವುಗಳನ್ನು ಅಡವಿಟ್ಟು ಸಾಲ ಪಡೆದಿವೆ. ಸಾಗರದಾಚೆಗಿನ ವ್ಯವಹಾರಗಳಲ್ಲಿ ತೆರಿಗೆ ವಂಚಿಸುವುದಕ್ಕಾಗಿ ದಶಕಗಳ ಕಾಲ ಲೆಕ್ಕಪತ್ರಗಳಲ್ಲಿ ವಂಚನೆ ನಡೆಸಿವೆ. ಆ ಮೂಲಕ ಅತಿ ಹೆಚ್ಚು ಸಾಲದ ಸುಳಿಗೆ ಸಿಲುಕಿದ್ದು, ಒಟ್ಟಾರೆ ಅದರ ಆರ್ಥಿಕ ತಳಪಾಯವೇ ಅಪಾಯದಲ್ಲಿದೆ ಎಂದು ಹಿಂಡೆನ್‌ಬರ್ಗ್ ವರದಿ ಆರೋಪಿಸಿತ್ತು.

“ನಾವು ಎರಡು ವರ್ಷದ ಸಂಶೋಧನೆಯ ವರದಿಯನ್ನು ಇಂದು ಬಹಿರಂಗಪಡಿಸುತ್ತಿದ್ದೇವೆ. 17.8 ಟ್ರಿಲಿಯನ್ (218 ಬಿಲಿಯನ್ ಅಮೆರಿಕನ್ ಡಾಲರ್) ಮೌಲ್ಯದ ವಹಿವಾಟು ನಡೆಸುವ ಭಾರತೀಯ ಅದಾನಿ ಸಮೂಹವು ದಶಕಗಳ ಕಾಲ ಸ್ಟಾಕ್ ತಿರುಚುವಿಕೆ ಮತ್ತು ಲೆಕ್ಕಪತ್ರ ವಂಚನೆ ಯೋಜನೆಯಲ್ಲಿ ತೊಡಗಿದೆ ಎಂಬುದಕ್ಕೆ ಪುರಾವೆಗಳನ್ನು ಪ್ರಸ್ತುತಪಡಿಸುತ್ತಿದ್ದೇವೆ” ಎಂದು ಸರಣಿ ಟ್ವೀಟ್‌ಗಳನ್ನು ಹಿಂಡೆನ್‌ಬರ್ಗ್‌ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಡಿತ್ತು.

ಈ ವಿಷಯ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿ ಅದಾನಿ ‍ಷೇರುಗಳು ದಿಢೀರನೆ ಕುಸಿದಿತ್ತು. ಅದಾನಿ ಸಮೂಹದ ಜೊತೆ ಬಹಳ ಆಪ್ತತೆಯಿಂದ ಇರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕಸಿವಿಸಿ ಉಂಟು ಮಾಡಿತ್ತು. ಬಳಿಕ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣ ಎಸ್‌ಐಟಿ ಅಥವಾ ಸಿಬಿಐ ತನಿಖೆಗೆ ಕೋರಿದ್ದ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಸೆಬಿಗೆ ತನಿಖೆಯ ಜವಬ್ದಾರಿ ವಹಿಸಿದೆ.

ಇದನ್ನೂ ಓದಿ : ಯುಸಿಸಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ: ವಿವಾದಾತ್ಮಕ ಕಾಯ್ದೆ ಜಾರಿಗೆ ಉತ್ತರಾಖಂಡದ ಹಾದಿ ಸುಗಮ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...