Homeಮುಖಪುಟಅದಾನಿ, ಮಣಿಪುರ ಕುರಿತು ಚರ್ಚೆಗೆ ಆಗ್ರಹ | ಸದನದ ಕಲಾಪ ಮುಂದೂಡಿಕೆ

ಅದಾನಿ, ಮಣಿಪುರ ಕುರಿತು ಚರ್ಚೆಗೆ ಆಗ್ರಹ | ಸದನದ ಕಲಾಪ ಮುಂದೂಡಿಕೆ

- Advertisement -
- Advertisement -

ಅಮೆರಿಕದ ಅಧಿಕಾರಿಗಳು ಅದಾನಿ ಗ್ರೂಪ್ ವಿರುದ್ಧ ಮಾಡಿರುವ ಲಂಚದ ಆರೋಪದ ಮೇಲೆ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಸದನದಲ್ಲಿ ಪ್ರತಿಭಟನೆ ನಡೆಸಿದ್ದು, ಹಾಗಾಗಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ವರ್ಷದ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರದ ಕಲಾಪವನ್ನು ಮುಂದೂಡಲಾಗಿದೆ. “ಈ ನೋಟಿಸ್‌ಗಳು ಪೀಠವು ನೀಡಿದ ನಿರ್ದೇಶನಗಳಿಗೆ ಅನುಗುಣವಾಗಿಲ್ಲ” ಎಂದು ಧಂಖರ್ ನೋಟಿಸ್‌ಗಳನ್ನು ತಿರಸ್ಕರಿಸಿದ್ದಾರೆ. ಅದಾನಿ – ಮಣಿಪುರ

ಅದಾನಿ ಗ್ರೂಪ್‌ನ ಆಪಾದಿತ ಭ್ರಷ್ಟಾಚಾರ, ಲಂಚ ಮತ್ತು ಹಣಕಾಸು ಅಕ್ರಮಗಳ ಕುರಿತು ಚರ್ಚೆ ನಡೆಸುವಂತೆ ವಿರೋಧ ಪಕ್ಷದ ಸಂಸದರಿಂದ 13 ನೋಟಿಸ್‌ಗಳು ಬಂದಿವೆ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಹೇಳಿದ್ದಾರೆ. ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಇತ್ತೀಚೆಗೆ ನಿಧನರಾದ ಐವರು ಸಂಸದರ ಸಂತಾಪ ಸೂಚನೆಗಳನ್ನು ಓದಿದರು ಮತ್ತು ಸದನವು ಒಂದು ನಿಮಿಷ ಮೌನ ಆಚರಿಸಿತು. ಅದಾನಿ – ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರ ಮತ್ತು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಕುರಿತು ಚರ್ಚೆಗಳು ಮತ್ತು ಈ ವರ್ಷದ ಆರಂಭದಲ್ಲಿ ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ನೆರವು ಕೋರಿ ವಿರೋಧ ಪಕ್ಷದ ಸಂಸದರು ನೋಟಿಸ್‌ಗಳನ್ನು ಸಲ್ಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅದಾನಿ ವಿವಾದದ ಬಗ್ಗೆ ಚರ್ಚೆಯೊಂದಿಗೆ ಸಂಸತ್ತಿನ ಅಧಿವೇಶನವನ್ನು ಪ್ರಾರಂಭಿಸಬೇಕು. ಈ ವಿವಾದವೂ ಭಾರತದ ಜಾಗತಿಕ ಚಿತ್ರಣಕ್ಕೆ ಧಕ್ಕೆ ತಂದಿದೆ ಎಂದು ಹೇಳಿದ್ದಾರೆ. ಕೋಟಿಗಟ್ಟಲೆ ಚಿಲ್ಲರೆ ಹೂಡಿಕೆದಾರರ ಕಷ್ಟಪಟ್ಟು ಗಳಿಸಿದ ಹೂಡಿಕೆಗಳು ಅಪಾಯದಲ್ಲಿದೆ ಎಂದು ಇಂಡಿಯಾ ಒಕ್ಕೂಟದ ಪಕ್ಷಗಳು ಇಂದು ಬೇಡಿಕೆ ಇಟ್ಟಿವೆ ಎಂದು ಖರ್ಗೆ ಹೇಳಿದ್ದಾರೆ.

“ಈ ದೇಶವನ್ನು ನಡೆಸಲು ನಮಗೆ ಏಕಸ್ವಾಮ್ಯ ಮತ್ತು ಕಾರ್ಟೆಲ್‌ಗಳ ಅಗತ್ಯವಿಲ್ಲ. ನಮಗೆ ಖಾಸಗಿ ವಲಯದಲ್ಲಿ ಆರೋಗ್ಯಕರ ಮಾರುಕಟ್ಟೆ ಚಾಲಿತ ಸ್ಪರ್ಧೆಯ ಅಗತ್ಯವಿದೆ. ಹೀಗಿದ್ದಾಗ ಸಮಾನ ಅವಕಾಶಗಳು, ಉದ್ಯೋಗ ಮತ್ತು ಸಂಪತ್ತಿನ ಸಮಾನ ವಿತರಣೆಯನ್ನು ಸುಗಮಗೊಳಿಸುತ್ತದೆ. ಭಾರತದ ಅಂತರ್ಗತ ಉದ್ಯಮಶೀಲತಾ ಮನೋಭಾವವನ್ನು ಪೂರೈಸುತ್ತದೆ” ಎಂದು ಅವರು ಖರ್ಗೆ ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರತಿಪಕ್ಷಗಳು ಅಮೆರಿಕದಲ್ಲಿ ಗೌತಮ್ ಅದಾನಿ ಅವರ ದೋಷಾರೋಪಣೆಯ ಕುರಿತು ಚರ್ಚೆಯನ್ನು ಕೋರಿದ್ದು, ಸದನವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಬಿಜೆಪಿ ಸಂಸದೆ ಸಂಧ್ಯಾ ರೇ ಅವರ ಅಧ್ಯಕ್ಷತೆಯಲ್ಲಿ ಕಲಾಪ ಪುನರಾರಂಭಗೊಂಡಾಗ ಪ್ರತಿಪಕ್ಷಗಳು ಮತ್ತೆ ಗದ್ದಲ ಎಬ್ಬಿಸಿದ್ದರಿಂದ ಸದನವನ್ನು ಬುಧವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು.

ಇತ್ತೀಚೆಗೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿನ ಸೋಲಿಗೆ ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷನದಲ್ಲಿ ಆರೋಪಿಸಿದ್ದಾರೆ. ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ತಮ್ಮ ಗುರಿಯನ್ನು ಸಾಧಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಮೋದಿ ಹೇಳಿದ್ದಾರೆ. “ಹೊಸ ಆಲೋಚನೆಗಳು ಮತ್ತು ಉತ್ಸಾಹ ಹೊಂದಿರುವ ಸಂಸತ್ತಿನ ಹೊಸ ಮತ್ತು ಯುವ ಸದಸ್ಯರು ಮಾತನಾಡಲು ಸಾಧ್ಯವಾಗುವುದಿಲ್ಲ ಎಂಬುದು ಅತ್ಯಂತ ನೋವಿನ ಸಂಗತಿಯಾಗಿದೆ.” ಎಂದು ಅವರು ಹೇಳಿದ್ದಾರೆ.

ನವೆಂಬರ್ 20 ರಂದು, ಅಮೆರಿಕದ ಅಧಿಕಾರಿಗಳು ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಬಹು-ಬಿಲಿಯನ್ ಡಾಲರ್ ಲಂಚ ಮತ್ತು ವಂಚನೆ ಯೋಜನೆಯಲ್ಲಿ ದೋಷಾರೋಪಣೆಯನ್ನು ಘೋಷಿಸಿದ್ದಾರೆ. ಅದಾನಿ ಗ್ರೂಪ್‌ನ ಸಂಸ್ಥಾಪಕ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿಗೆ ಕೂಡಾ ನ್ಯಾಯಾಧೀಶರು ಬಂಧನ ವಾರಂಟ್‌ಗಳನ್ನು ಹೊರಡಿಸಿದ್ದಾರೆ.

ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಸೇರಿದಂತೆ ಇತರ ಏಳು ಜನರು ಸುಮಾರು 20 ವರ್ಷಗಳಲ್ಲಿ 2 ಬಿಲಿಯನ್ ಡಾಲರ್‌ ಅಥವಾ 16,880 ಕೋಟಿ ರೂಗಳು ಲಾಭವಿರುವ ವ್ಯಾಪಾರಿ ಒಪ್ಪಂದವನ್ನು ಒಪ್ಪಿಕೊಳ್ಳಲು 2020 ಮತ್ತು 2024 ರ ನಡುವೆ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಅಥವಾ ಸುಮಾರು 2,236 ಕೋಟಿ ರೂಪಾಯಿಗಳನ್ನು ಲಂಚವಾಗಿ ನೀಡುವ ಬಗ್ಗೆ ಒಪ್ಪಿಕೊಂಡಿದ್ದರು ಎಂದು ಅಮೆರಿಕಾದ ಅಟಾರ್ನಿ ಕಚೇರಿಯಿಂದ ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ಈ ದೋಷಾರೋಪಣೆಯು ಭಾರತದಲ್ಲಿ ರಾಜಕೀಯವಾಗಿ ಕೋಲಾಹಲ ಉಂಟಾಗಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೌತಮ್ ಅದಾನಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...