Homeಅಂತರಾಷ್ಟ್ರೀಯಅದಾನಿ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸಿದ ಶ್ರೀಲಂಕಾ - ವರದಿ

ಅದಾನಿ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸಿದ ಶ್ರೀಲಂಕಾ – ವರದಿ

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಲಂಚ ಮತ್ತು ವಂಚನೆ ಆರೋಪಗಳ ಮೇಲೆ ಅಮೆರಿಕ ನಡೆಸಿದ ತನಿಖೆಯ ಹಿನ್ನಲೆ, ಶ್ರೀಲಂಕಾ ಸರ್ಕಾರ ಅದಾನಿ ಗ್ರೂಪ್ ಜೊತೆಗಿನ ವಿದ್ಯುತ್ ಖರೀದಿ ಒಪ್ಪಂದವನ್ನು ರದ್ದುಗೊಳಿಸಿದೆ ಎಂದು AFP ಶುಕ್ರವಾರ ವರದಿ ಮಾಡಿದೆ.

ಭಾರತದಲ್ಲಿ ಸೌರ ಯೋಜನೆಗಳಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಮೇಲೆ ಗೌತಮ್ ಅದಾನಿ ವಿರುದ್ಧ ನವೆಂಬರ್‌ನಲ್ಲಿ ಅಮೆರಿಕದ ನ್ಯಾಯಾಲಯವೊಂದು ದೋಷಾರೋಪಣೆ ಮಾಡಿತ್ತು. ಇದತ ನಂತರ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರ ಆಡಳಿತವು ಶ್ರೀಲಂಕಾದಲ್ಲಿ ಅದಾನಿ ಗ್ರೂಪ್ ಯೋಜನೆಗಳ ಬಗ್ಗೆ ವಿಚಾರಣೆಯನ್ನು ಪ್ರಾರಂಭಿಸಿತ್ತು.

ಮೇ 2024 ರಲ್ಲಿ ಶ್ರೀಲಂಕಾದ ಅಧ್ಯಕ್ಷರಾಗಿದ್ದ ರನಿಲ್ ವಿಕ್ರಮಸಿಂಘೆ ಅವರು ದೇಶದ ವಾಯುವ್ಯದಲ್ಲಿ ಯೋಜಿಸಲಾದ ಅದಾನಿ ಪವನ ವಿದ್ಯುತ್ ಸೌಲಭ್ಯದಿಂದ ಪ್ರತಿ ಕಿಲೋವ್ಯಾಟ್-ಗಂಟೆಗೆ $0.0826 ಕ್ಕೆ ವಿದ್ಯುತ್ ಖರೀದಿಸುವ ಒಪ್ಪಂದವನ್ನು ಅನುಮೋದಿಸಿದ್ದರು. ಆದಾಗ್ಯೂ, ಈ ತಿಂಗಳ ಆರಂಭದಲ್ಲಿ ಹಾಲಿ ಅಧ್ಯಕ್ಷ ದಿಸಾನಾಯಕೆ ಅವರ ಸಂಪುಟ ಒಪ್ಪಂದವನ್ನು ರದ್ದುಗೊಳಿಸಿದೆ ಎಂದು ಇಂಧನ ಸಚಿವಾಲಯದ ಅಧಿಕಾರಿಯೊಬ್ಬರು AFP ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸರ್ಕಾರ ವಿದ್ಯುತ್ ಖರೀದಿ ಒಪ್ಪಂದವನ್ನು ರದ್ದುಗೊಳಿಸಿದೆ, ಆದರೆ ಯೋಜನೆಯನ್ನು ರದ್ದುಗೊಳಿಸಲಾಗಿಲ್ಲ. ಸಂಪೂರ್ಣ ಯೋಜನೆಯನ್ನು ಪರಿಶೀಲಿಸಲು ಸಮಿತಿಯನ್ನು ನೇಮಿಸಲಾಗಿದೆ.” ಎಂದು ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ AFP ವರದಿ ಮಾಡಿದೆ.

ಮನ್ನಾರ್ ಮತ್ತು ಪೂನೆರಿನ್ ಪ್ರದೇಶಗಳಿಗೆ ಯೋಜಿಸಲಾಗಿರುವ 484 ಮೆಗಾವ್ಯಾಟ್ ಪವನ ವಿದ್ಯುತ್ ಸ್ಥಾವರದ ನಿರ್ಮಾಣವನ್ನು ಮರುಮೌಲ್ಯಮಾಪನ ಮಾಡಲು ಶ್ರೀಲಂಕಾದ ಸಚಿವ ಸಂಪುಟ ನಿರ್ಧರಿಸಿದೆ ಎಂದು ಸರ್ಕಾರಿ ದಾಖಲೆಗಳನ್ನು ಉಲ್ಲೇಖಿಸಿದೆ ಎಎಫ್‌ಪಿ ವರದಿ ಮಾಡಿದೆ. ಪರಿಸರ ಕಾಳಜಿಯ ಮೇರೆಗೆ ಈ ಯೋಜನೆಯನ್ನು ದೇಶದ ಸುಪ್ರೀಂ ಕೋರ್ಟ್‌ನಲ್ಲಿಯೂ ಪ್ರಶ್ನಿಸಲಾಗುತ್ತಿದೆ.

ಅದಾಗ್ಯೂ, ಶ್ರೀಲಂಕಾ ಸರ್ಕಾರವು ಯೋಜನೆ ರದ್ಧು ಮಾಡಿದೆ ಎಂಬ ವರದಿಗೆ ಶುಕ್ರವಾರ ಪ್ರತಿಕ್ರಿಯಿಸಿರುವ ಅದಾನಿ ಗ್ರೂಪ್, “ಮನ್ನಾರ್ ಮತ್ತು ಪೂನೆರಿನ್‌ನಲ್ಲಿನ ಪವನ ವಿದ್ಯುತ್ ಯೋಜನೆಗಳನ್ನು ರದ್ದುಗೊಳಿಸಲಾಗಿದೆ ಎಂಬ ವರದಿಗಳು ಸುಳ್ಳು ಮತ್ತು ದಾರಿತಪ್ಪಿಸುವವು” ಎಂದು ಹೇಳಿದೆ.

“ಯೋಜನೆಯನ್ನು ರದ್ದುಗೊಳಿಸಲಾಗಿಲ್ಲ ಎಂದು ನಾವು ಸ್ಪಷ್ಟವಾಗಿ ಹೇಳುತ್ತೇವೆ. ವಿಶೇಷವಾಗಿ ಹೊಸ ಸರ್ಕಾರದೊಂದಿಗೆ, ನಿಯಮಗಳು ಅವರ ಪ್ರಸ್ತುತ ಆದ್ಯತೆಗಳು ಮತ್ತು ಇಂಧನ ನೀತಿಗಳೊಂದಿಗೆ ಹೊಂದಿಕೆಯಾಗುತ್ತವೆ ಎಂದು ಖಚಿತಪಡಿಸಿಕೊಳ್ಳಲು [ಜನವರಿ 2, 2025] ರಂದು ಶ್ರೀಲಂಕಾದ ಸಚಿವ ಸಂಪುಟವು ಮೇ 2024 ರಲ್ಲಿ ಅನುಮೋದಿಸಲಾದ ಸುಂಕವನ್ನು ಮರುಮೌಲ್ಯಮಾಪನ ಮಾಡುವ ನಿರ್ಧಾರವು ಪ್ರಮಾಣಿತ ಪರಿಶೀಲನಾ ಪ್ರಕ್ರಿಯೆಯ ಭಾಗವಾಗಿ ಇದನ್ನು ನಡೆಸಲಾಗುತ್ತಿದೆ.” ಎಂದು ಅದಾನಿ ಗ್ರೂಪ್ ವಕ್ತಾರರು ಹೇಳಿದ್ದಾರೆ.

ಸಣ್ಣ ನವೀಕರಿಸಬಹುದಾದ ಇಂಧನ ಪೂರೈಕೆದಾರರು ಅದಾನಿ ಗ್ರೂಪ್ ಪ್ರಸ್ತಾಪಿಸಿದ ಬೆಲೆಯ ಸುಮಾರು ಮೂರನೇ ಎರಡರಷ್ಟು ಬೆಲೆಗೆ ವಿದ್ಯುತ್ ನೀಡುತ್ತಾರೆ ಎಂದು ಹೋರಾಟಗಾರರು ವಾದಿಸಿದ್ದಾರೆ.

ಶ್ರೀಲಂಕಾದ ಕೊಲಂಬೊ ಬಂದರಿನಲ್ಲಿ ಕೊಲಂಬೊ ವೆಸ್ಟ್ ಇಂಟರ್ನ್ಯಾಷನಲ್ ಟರ್ಮಿನಲ್ ಎಂಬ $700 ಮಿಲಿಯನ್ ಮೌಲ್ಯದ ಆಳ-ನೀರಿನ ಕಂಟೇನರ್ ಟರ್ಮಿನಲ್ ಅನ್ನು ನಿರ್ಮಿಸುವಲ್ಲಿಯೂ ಅದಾನಿ ಗ್ರೂಪ್‌ ಸಮೂಹವು ಭಾಗಿಯಾಗಿದೆ.

2020 ಮತ್ತು 2024 ರ ನಡುವೆ ಅದಾನಿ ಗ್ರೀನ್ ಎನರ್ಜಿಗಾಗಿ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಅಥವಾ ಸುಮಾರು 2,236 ಕೋಟಿ ರೂ.ಗಳನ್ನು ಲಂಚವಾಗಿ ನೀಡಲು ಒಪ್ಪಿಕೊಂಡಿದ್ದಕ್ಕಾಗಿ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಇತರ ಆರು ಜನರ ವಿರುದ್ಧ ನ್ಯೂಯಾರ್ಕ್‌ನ ಪೂರ್ವ ಜಿಲ್ಲೆಯ ಯುನೈಟೆಡ್ ಸ್ಟೇಟ್ಸ್ ಅಟಾರ್ನಿ ಕಚೇರಿ ಕಳೆದ ತಿಂಗಳು ದೋಷಾರೋಪಣೆ ಮಾಡಿತ್ತು.

ಈ ಒಪ್ಪಂದಗಳ ಕಾರಣಕ್ಕೆ 20 ವರ್ಷಗಳಲ್ಲಿ $2 ಬಿಲಿಯನ್ ಅಥವಾ ಸುಮಾರು 16,880 ಕೋಟಿ ರೂ.ಗಳಷ್ಟು ಲಾಭವನ್ನು ಗಳಿಸುವ ನಿರೀಕ್ಷೆಯಿತ್ತು. ಈ ಆರೋಪಗಳಿಗೆ ಸಂಬಂಧಿಸಿದಂತೆ ಯುನೈಟೆಡ್ ಸ್ಟೇಟ್ಸ್ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಕಮಿಷನ್ ಗೌತಮ್ ಅದಾನಿ ಮತ್ತು ಸಾಗರ್ ಅದಾನಿಗೆ ಸಮನ್ಸ್ ಜಾರಿ ಮಾಡಿದೆ. ಅದಾಗ್ಯೂ, ಅದಾನಿ ಗ್ರೂಪ್ ಆರೋಪಗಳನ್ನು ನಿರಾಕರಿಸಿದ್ದು, ಅವುಗಳನ್ನು “ಆಧಾರರಹಿತ” ಎಂದು ಕರೆದಿದೆ.

ಈ ಆರೋಪಗಳು ಬೆಳಕಿಗೆ ಬಂದ ನಂತರ, ಕೀನ್ಯಾ ಕೂಡ ದೇಶದ ಪ್ರಾಥಮಿಕ ವಿಮಾನ ನಿಲ್ದಾಣದ ನಿಯಂತ್ರಣವನ್ನು ಅದಾನಿ ಗ್ರೂಪ್‌ಗೆ ನೀಡಬಹುದಾಗಿದ್ದ ಖರೀದಿ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆದೇಶಿಸಿದೆ.

ಇದನ್ನೂಓದಿ:  ಗುಜರಾತ್| ಮದುವೆ ಮೆರವಣಿಗೆಗೆ ಮುನ್ನ ಪೊಲೀಸ್ ರಕ್ಷಣೆ ಕೋರಿದ ದಲಿತ ವಕೀಲ

ಗುಜರಾತ್| ಮದುವೆ ಮೆರವಣಿಗೆಗೆ ಮುನ್ನ ಪೊಲೀಸ್ ರಕ್ಷಣೆ ಕೋರಿದ ದಲಿತ ವಕೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...