ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ ಸಿವಿಲ್ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಮಾರುಕಟ್ಟೆ ನಿಯಂತ್ರಣ ಸಂಸ್ಥೆಯಾದ ಯುಎಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ದಾಖಲಿಸಿದ್ದ ಸಿವಿಲ್ ವಂಚನೆ ಮೊಕದ್ದಮೆಯನ್ನು ಕೊನೆಗೊಳಿಸಲು ಅದಾನಿ ಗ್ರೂಪ್ ಜಂಟಿ ಒಪ್ಪಂದಕ್ಕೆ ಬಂದಿದೆ. ನ್ಯಾಯಾಲಯದ ಅಂತಿಮ ಅನುಮೋದನೆಗೆ ಒಳಪಟ್ಟು ಈ ಇತ್ಯರ್ಥ ಪ್ರಕ್ರಿಯೆ … Continue reading ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?