Homeಕರ್ನಾಟಕಎಂ.ಬಿ.ಪಾಟೀಲ್, ಪ್ರಿಯಾಂಕ್‌ ಖರ್ಗೆಗೆ ಹೆಚ್ಚುವರಿ ಖಾತೆ ನೀಡಿ ಅಧಿಸೂಚನೆ

ಎಂ.ಬಿ.ಪಾಟೀಲ್, ಪ್ರಿಯಾಂಕ್‌ ಖರ್ಗೆಗೆ ಹೆಚ್ಚುವರಿ ಖಾತೆ ನೀಡಿ ಅಧಿಸೂಚನೆ

- Advertisement -
- Advertisement -

ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರಿಗೆ ಹೆಚ್ಚುವರಿಯಾಗಿ ಮೂಲಸೌಲಭ್ಯ ಅಭಿವೃದ್ಧಿ ಖಾತೆಯನ್ನೂ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಹೆಚ್ಚುವರಿಯಾಗಿ ಮಾಹಿತಿ ತಂತ್ರಜ್ಞಾನ (ಐಟಿ)- ಜೈವಿಕ ತಂತ್ರಜ್ಞಾನ (ಬಿಟಿ) ಖಾತೆಯನ್ನೂ ಹಂಚಿಕೆ ಮಾಡಿ ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ.

ಇದೇ 28ರಂದು ಎಲ್ಲ ಸಚಿವರಿಗೆ ಖಾತೆಗಳನ್ನು ಹಂಚಲಾಗಿತ್ತು. ಆ ಸಂದರ್ಭದಲ್ಲಿ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಐಟಿ ಬಿಟಿ ಖಾತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಿಕೊಂಡಿದ್ದರು.

ಪರಿಷ್ಕೃತ ಖಾತೆ ಹಂಚಿಕೆ ಅಧಿಸೂಯಚನೆ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರ್ಥಿಕ, ಸಂಪುಟ ಸಚಿವಾಲಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ ಮತ್ತು ಹಂಚಿಯಾಗದ ಇತರ ಖಾತೆಗಳನ್ನು ನೋಡಿಕೊಳ್ಳಲಿದ್ದಾರೆ.

ಸಚಿವರ ಖಾತೆ ಹಂಚಿಕೆ ಪಟ್ಟಿ

  1. ಸಿಎಂ ಸಿದ್ದರಾಮಯ್ಯ- ಆರ್ಥಿಕ, ಸಂಪುಟ ಸಚಿವಾಲಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ ಮತ್ತು ಹಂಚಿಯಾಗದ ಇತರ ಖಾತೆಗಳು
  2. ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ
  3. ಡಾ. ಜಿ.ಪರಮೇಶ್ವರ್- ಗೃಹ
  4. ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ
  5.  ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ವ್ಯವಹಾರ
  6. ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ
  7. ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ
  8. ಕೆ.ಜೆ.ಜಾರ್ಜ್‌- ಇಂಧನ
  9. ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ
  10. ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ
  11. ಸತೀಶ್ ಜಾರಕಿಹೊಳಿ- ಲೋಕೋಪಯೋಗಿ
    ಕೃಷ್ಣ ಬೈರೇಗೌಡ- ಕಂದಾಯ
  12. ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ (ಐಟಿ) ಮತ್ತು ಜೈವಿಕ ತಂತ್ರಜ್ಞಾನ (ಬಿಟಿ)
  13. ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ
  14. ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು
  15. ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು
  16. ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ
  17. ಚಲುವರಾಯಸ್ವಾಮಿ- ಕೃಷಿ
  18. ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
  19. ರಹೀ ಖಾನ್: ಪೌರಾಡಳಿತ, ಹಜ್ ಖಾತೆ
  20. ಸಂತೋಷ ಲಾಡ್- ಕಾರ್ಮಿಕ
  21. ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ
  22. ಆರ್.ಬಿ.ತಿಮ್ಮಾಪುರ- ಅಬಕಾರಿ
  23. ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ
  24. ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ
  25. ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
  26. ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ
  27. ಕೆ.ಎನ್.ರಾಜಣ್ಣ: ಸಹಕಾರ
  28. ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)
  29. ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ
  30. ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ
  31. ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
  32. ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ
  33. ಎನ್.ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...