Homeಮುಖಪುಟಸಾರ್ವಜನಿಕ ಉದ್ದಿಮೆಗಳಲ್ಲಿ ಎಸ್‌ಸಿ, ಎಸ್‌ಟಿಗಳಿಗೆ ಸಿಗದ ಸೂಕ್ತ ಸ್ಥಾನಮಾನ: ಸಂಸದೀಯ ಸಮಿತಿ ವರದಿ

ಸಾರ್ವಜನಿಕ ಉದ್ದಿಮೆಗಳಲ್ಲಿ ಎಸ್‌ಸಿ, ಎಸ್‌ಟಿಗಳಿಗೆ ಸಿಗದ ಸೂಕ್ತ ಸ್ಥಾನಮಾನ: ಸಂಸದೀಯ ಸಮಿತಿ ವರದಿ

- Advertisement -
- Advertisement -

ಸಾರ್ವಜನಿಕ ವಲಯದ ಘಟಕಗಳಲ್ಲಿ ಉನ್ನತ ಅಥವಾ ಮಂಡಳಿ ಮಟ್ಟದ ಸ್ಥಾನಗಳಿಗೆ ಏರಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಸದಸ್ಯರಿಗೆ ಅವಕಾಶವನ್ನು ನೀಡಲಾಗುತ್ತಿಲ್ಲ ಎಂದು ಸಂಸದೀಯ ಸಮಿತಿಯು ತನ್ನ ವರದಿಯಲ್ಲಿ ತಿಳಿಸಿದೆ.

ಪವರ್ ಗ್ರಿಡ್ ಕಾರ್ಪೊರೇಷನ್ ಲಿಮಿಟೆಡ್‌ನ ವಿಶೇಷ ಉಲ್ಲೇಖದೊಂದಿಗೆ ‘ಕೇಂದ್ರ ಸಾರ್ವಜನಿಕ ವಲಯದ ಉದ್ಯಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ’ ಎಂಬ ವರದಿಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಂಸದೀಯ ಸಮಿತಿಯು ಸಂಸತ್ತಿನ ಮುಂದೆ ಮಂಡಿಸಿದ್ದು, ಅನೇಕ ವಿಷಯಗಳನ್ನು ಪ್ರಸ್ತಾಪಿಸಿದೆ.

“ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಾಮಾಜಿಕ-ಆರ್ಥಿಕ ಸಮಾನತೆಯನ್ನು ಒದಗಿಸುವ ದೃಷ್ಟಿಯಿಂದ, ಮಂಡಳಿ/ಉನ್ನತ ಹಂತದ ನೇಮಕಾತಿಗಳಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದ ಅರ್ಹ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಲು ಸರ್ಕಾರವು ಸಕಾರಾತ್ಮಕ ಕ್ರಮವನ್ನು ತೆಗೆದುಕೊಳ್ಳಬೇಕು” ಎಂದು ಸಮಿತಿ ಶಿಫಾರಸ್ಸು ಮಾಡಿದೆ. ಈ ಸಮಿತಿಯ ಮುಂದಾಳತ್ವವನ್ನು ಬಿಜೆಪಿ ಸಂಸದ ಕಿರಿತ್ ಸೋಲಂಕಿ ವಹಿಸಿದ್ದರು.

ಸಾರ್ವಜನಿಕ ವಲಯದ ಘಟಕಗಳಲ್ಲಿನ ಉನ್ನತ ಮಟ್ಟದ ಹುದ್ದೆಗಳಿಗೆ ಸಂದರ್ಶನಕ್ಕೆ ಹಾಜರಾಗಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಸಂಖ್ಯೆ ಹಾಗೂ ಆ ಅಭ್ಯರ್ಥಿಗಳು ಆಯ್ಕೆಯಾಗದಿರಲು ಇರುವ ಕಾರಣವೇನೆಂದು ತಿಳಿಯಲು ಬಯಸಿರುವುದಾಗಿ ಸಮಿತಿ ಹೇಳಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಧಿಕಾರಿಗಳು ಉತ್ಯುತ್ತಮ ಕೆಲಸದ ದಾಖಲೆಯನ್ನು ಹೊಂದಿದ್ದರೂ ಅವರ ವಿರುದ್ಧ ಕಾಲ್ಪನಿಕ ಆರೋಪಗಳನ್ನು ಹೊರಿಸುವ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬಡ್ತಿ ನಿರಾಕರಿಸಲಾಗಿದೆ ಎಂದು ಸಮಿತಿಯು ಹೇಳಿರುವುದಾಗಿ ‘ದಿ ಟ್ರಿಬ್ಯೂನ್‌’ ವರದಿ ಮಾಡಿದೆ.

ಬ್ಯಾಂಕ್‌ನ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರ್ದೇಶಕರು ಏಕೆ ಇಲ್ಲ ಎಂದು ಸಮಿತಿಯು ಸರ್ಕಾರವನ್ನು ಪ್ರಶ್ನಿಸಿದೆ.

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದ ನಿರ್ದೇಶಕರ ಮಂಡಳಿಯಲ್ಲಿ ಯಾವುದೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿ ಇಲ್ಲ ಎಂದು ಸಮಿತಿ ಗಮನಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

“ಕೇಂದ್ರೀಯ ಸಾರ್ವಜನಿಕ ವಲಯದ ಉದ್ಯಮದಲ್ಲಿ ಎಸ್‌ಸಿ/ಎಸ್‌ಟಿಗಳ ಪ್ರಾತಿನಿಧ್ಯವು ಗಂಭೀರ ಕಾಳಜಿಯ ವಿಷಯವಾಗಿಲ್ಲ” ಎಂದು ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

“ಪವರ್ ಗ್ರಿಡ್‌ನ ಅಧ್ಯಕ್ಷರು, ಸದಸ್ಯರ ನೇಮಕಕ್ಕೆ ಸಂಬಂಧಿಸಿದ ಕಾಯಿದೆಯಲ್ಲಿ ತಿದ್ದುಪಡಿ ತಂದು ಎಸ್‌ಸಿ/ಎಸ್‌ಟಿಗಳಿಗೆ ಪ್ರಾತಿನಿಧ್ಯವನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸಮಿತಿ ಒತ್ತಾಯಿಸಿದೆ.

ಎಲ್ಲಾ ಸಾರ್ವಜನಿಕ ವಲಯದ ಘಟಕಗಳಲ್ಲಿನ ಬೋರ್ಡ್ ಮತ್ತು ಮ್ಯಾನೇಜ್‌ಮೆಂಟ್ ಮಟ್ಟದ ಹುದ್ದೆಗಳ ನೇಮಕಾತಿ ನೀತಿಯನ್ನು ಪರಿಶೀಲಿಸುವ ಕುರಿತು ಮಾಡಿದ ತನ್ನ ಶಿಫಾರಸುಗಳಿಗೆ ಸಂಬಂಧಿಸಿದಂತೆ ಸರ್ಕಾರವು ಗಂಭೀರವಾಗಿಲ್ಲ ಎಂದು ಭಾವಿಸಿರುವುದಾಗಿ ಸಮಿತಿ ಬೇಸರ ವ್ಯಕ್ತಪಡಿಸಿದೆ.

ಆಡಳಿತ ಮಂಡಳಿಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರನ್ನು ನೇಮಕ ಮಾಡಲು ಅನುಕೂಲವಾಗುವಂತೆ ಪ್ರಸ್ತುತ ಇರುವ ನಿಯಮಾವಳಿಗಳಿಗೆ ತಿದ್ದುಪಡಿ ತರಲು ಸಾರ್ವಜನಿಕ ಉದ್ದಿಮೆಗಳ ಇಲಾಖೆಯು ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಶಿಫಾರಸು ಮಾಡಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...