Homeಮುಖಪುಟಭಾರತದ ಮೊದಲ ಸೌರ ಮಿಷನ್ ಆದಿತ್ಯ-ಎಲ್ 1 ಯಶಸ್ವಿಯಾಗಿ ಉಡಾವಣೆ

ಭಾರತದ ಮೊದಲ ಸೌರ ಮಿಷನ್ ಆದಿತ್ಯ-ಎಲ್ 1 ಯಶಸ್ವಿಯಾಗಿ ಉಡಾವಣೆ

- Advertisement -
- Advertisement -

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತನ್ನ ಮೊದಲ ಸೌರ ಮಿಷನ್ ಆದಿತ್ಯ-ಎಲ್ 1ನ್ನು ಉಡಾವಣೆ ಮಾಡಿದೆ. ಈ ಮೂಲಕ  ಸೂರ್ಯನ ಅಧ್ಯಯನಕ್ಕೆ ನೌಕೆ ಕಳುಹಿಸಿದ 4ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ  ಭಾರತ ಪಾತ್ರವಾಗಿದೆ.

ಇಂದು 11:50ಕ್ಕೆ ಸರಿಯಾಗಿ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಬಾಹ್ಯಾಕಾಶ ನಿಲ್ದಾಣದಿಂದ  ರಾಕೆಟ್‌ನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಉಡಾವಣೆ ಬಳಿಕ ರಾಕೆಟ್ ಮೂರನೇ ಹಂತದಲ್ಲೂ ಯಶಸ್ವಿಯಾಗಿ ಪ್ರತ್ಯೇಕಗೊಂಡು ಮುನ್ನುಗ್ಗುತ್ತಿದೆ ಎಂದು ಇಸ್ರೋ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.

ಆದಿತ್ಯ-L1 ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿ.ಮೀ. ಪ್ರಯಾಣಿಸಿ ಸೂರ್ಯನ ಬಳಿ ತೆರಳಲಿದೆ. ಇದಕ್ಕೆ 125 ದಿನಗಳನ್ನು ತೆಗೆದುಕೊಳ್ಳಲಾಗುತ್ತದೆ. ಉಪಗ್ರಹ ಸೂರ್ಯನ ಮೇಲ್ಮೈ, ತಾಪಮಾನ, ಸೂರ್ಯನ ಕಿರಣ, ಸೌರಜ್ವಾಲೆ ಕುರಿತು ಅಧ್ಯಯನ ನಡೆಸಲಿದೆ.

ಆದಿತ್ಯ-L1 ಸೂರ್ಯನ ವಿವರವಾದ ಅಧ್ಯಯನವನ್ನು ನಡೆಸಲು ಏಳು ವಿಭಿನ್ನ ಪೇಲೋಡ್‌ಗಳನ್ನು ಹೊತ್ತೊಯ್ಯುತ್ತದೆ. ಅದರಲ್ಲಿ ನಾಲ್ಕು ಸೂರ್ಯನ ಬೆಳಕನ್ನು ವೀಕ್ಷಿಸಲಿದೆ.

ಇತ್ತೀಚೆಗೆ ಇಸ್ರೋ ಕಳುಹಿಸಿದ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಲ್ಯಾಂಡ್ ಆಗಿತ್ತು. ಇದು ಭಾರತದ ವಿಜ್ಞಾನಿಗಳು ಮಾಡಿದ ಅದ್ಭುತ ಸಾಧನೆಯಾಗಿದ್ದು, ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿತ್ತು.

ಇದನ್ನು ಓದಿ: ದೆಹಲಿ ಐಐಟಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...