Homeಮುಖಪುಟ2017ರಲ್ಲಿ ಆದಿತ್ಯನಾಥ್‌ ಅಧಿಕಾರ ವಹಿಸಿಕೊಂಡ ಬಳಿಕ 190 ಜನರ ಎನ್‌ಕೌಂಟರ್‌: ವರದಿ

2017ರಲ್ಲಿ ಆದಿತ್ಯನಾಥ್‌ ಅಧಿಕಾರ ವಹಿಸಿಕೊಂಡ ಬಳಿಕ 190 ಜನರ ಎನ್‌ಕೌಂಟರ್‌: ವರದಿ

- Advertisement -
- Advertisement -

2017ರಲ್ಲಿ ಉತ್ತರಪ್ರದೇಶದಲ್ಲಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಈವರೆಗೆ ಎನ್‌ಕೌಂಟರ್ ಎಂದು 190 ಜನರನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಮತ್ತು 2017ರಿಂದ 2023ರ ನಡುವೆ ಉತ್ತರಪ್ರದೇಶದ ಪೊಲೀಸರ ಗುಂಡೇಟಿನಿಂದ 5,591 ಜನರು ಗಾಯಗೊಂಡಿದ್ದಾರೆ.

ಲಕ್ನೋದಲ್ಲಿ ನಡೆದ ಪೊಲೀಸ್ ಸ್ಮೃತಿ ದಿವಸ್(ಪೊಲೀಸ್ ಸ್ಮರಣಾರ್ಥ ದಿನ) ಕಾರ್ಯಕ್ರಮದಲ್ಲಿ ಕೆಲ ಅಂಕಿ ಅಂಶಗಳನ್ನು ಸಿಎಂ ಯೋಗಿ ಆದಿತ್ಯನಾಥ್ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸುವುದು, ಸಾರ್ವಜನಿಕರಲ್ಲಿ ಭದ್ರತೆಯ ಭಾವವನ್ನು ಮೂಡಿಸುವುದು ಮತ್ತು ಅಪರಾಧಿಗಳಲ್ಲಿ ಕಾನೂನಿನ ಭಯ ಮೂಡಿಸುವುದು ಸರಕಾರದ ಗುರಿ ಎಂದು ಹೇಳಿ ಎನ್‌ಕೌಂಟರನ್ನು  ಸಮರ್ಥಿಸಿಕೊಂಡಿದ್ದಾರೆ.

ಎನ್‌ಕೌಂಟರ್‌ಗಳನ್ನು ಅಪರಾಧದ ವಿರುದ್ಧದ ಶೂನ್ಯ ಸಹಿಷ್ಣುತೆಯ ನೀತಿ ಎಂದು ಸರಕಾರ ಕರೆದರೆ, ಮಾನವ ಹಕ್ಕುಗಳ ಕಾರ್ಯಕರ್ತರು ಎನ್‌ಕೌಂಟರ್‌ಗಳ ಬಗ್ಗೆ ಪ್ರಶ್ನಿಸಿದ್ದಾರೆ ಮತ್ತು ಅವುಗಳನ್ನು ಹಂತಹಂತದ ಹತ್ಯೆಗಳು ಎಂದು ಕರೆದಿದ್ದಾರೆ.

ಎನ್‌ಕೌಂಟರನ್ನು ಪೊಲೀಸರು ಆತ್ಮರಕ್ಷಣೆಯ ಭಾಗ ಎಂದು ಹೇಳಿಕೊಂಡರೆ. ಆಪಾದಿತ ಎನ್‌ಕೌಂಟರ್‌ಗಳ ಬಗ್ಗೆ ಅನುಮಾನಾಸ್ಪದವಾದ ವಿವರಗಳನ್ನು ಕೂಡ ನೀಡಲಾಗಿದೆ ಎನ್ನುವುದು ಗಮನಾರ್ಹ.

ಉತ್ತರಪ್ರದೇಶದಲ್ಲಿ ಬಿಜೆಪಿ ಸರಕಾರ, ದರೋಡೆ ಮತ್ತು ಸಾಮಾಜ ವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ 1986ರ ನಿಬಂಧನೆಗಳನ್ನು ಬಳಸಿದೆ. ಕೆಲವು ಪ್ರಕರಣಗಳಲ್ಲಿ ದರೋಡೆಕೋರರ ಆಸ್ತಿಗಳನ್ನು ವಶಪಡಿಸಿಕೊಂಡಿದೆ. ಇದನ್ನು ಕೆಲವು ಸಂದರ್ಭಗಳಲ್ಲಿ ಅಲಹಾಬಾದ್ ಉಚ್ಚ ನ್ಯಾಯಾಲಯವು ರಾಜ್ಯವು ಕಾಯಿದೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ಯೋಗಿ ಸರಕಾರವು ರಾಜಕೀಯ ಉದ್ದೇಶದಿಂದ ವಿರೋಧಿಗಳನ್ನು ಬೆದರಿಸಲು ಮತ್ತು ಸಾಮಾನ್ಯ ನಾಗರಿಕರಿಗೆ ಕಿರುಕುಳ ನೀಡಲು ಕಾನೂನನ್ನು ದುರ್ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದೆ. ಬಿಜೆಪಿ ಸರ್ಕಾರವು ಮಾಫಿಯಾ ಗ್ಯಾಂಗ್‌ನ ಜನರ ವಿರುದ್ಧ ಮಾತ್ರವಲ್ಲದೆ ವಿರೋಧ ಪಕ್ಷದ ಶಾಸಕರು ಮತ್ತು ನಾಯಕರ ವಿರುದ್ಧವೂ 1986ರ ನಿಬಂಧನೆಗಳನ್ನು ನಿಯಮಿತವಾಗಿ ಬಳಸಿದೆ ಎಂದು ಆರೋಪಿಸಲಾಗಿದೆ.

ಆದಿತ್ಯನಾಥ್ ಅವರು ಅಧಿಕಾರಕ್ಕೆ ಬಂದಾಗಿನಿಂದ 69,332 ಜನರ ವಿರುದ್ಧ ದರೋಡೆ ಕಾಯಿದೆಯಡಿ ಮತ್ತು 887 ಜನರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆದಿತ್ಯನಾಥ್ ಅವರ ಸರ್ಕಾರವು ಮಾಫಿಯಾ ಗ್ಯಾಂಗ್‌ನ 68 ಸದಸ್ಯರ ಮೇಲೆ ಕಠಿಣ ಮೇಲೆ ಕ್ರಮಕೈಗೊಂಡಿದೆ. ಅವರಿಂದ 3,650 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಸಾಮಾಜಿಕ ಕಾರ್ಯಕರ್ತ ರಾಜೀವ್ ಯಾದವ್ ಅವರು ಎನ್‌ಕೌಂಟರ್‌ಗಳ ಮೂಲಕ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯನ್ನು ಪರಿಹರಿಸುವ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದಾರೆ. ಎನ್‌ಕೌಂಟರ್‌ಗಳ ಮೂಲಕ ಅಪರಾಧವನ್ನು ನಿಯಂತ್ರಿಸಲಾಗುತ್ತಿದೆ ಎಂದು ಅವರು ಹೇಳುತ್ತಾರೆ. ಮತ್ತೇಕೆ ಅವರು ದರೋಡೆ ಕಾಯಿದೆ ಮತ್ತು ಗೂಂಡಾ ಕಾಯ್ದೆಯ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಮತ್ತು ಆಸ್ತಿಯನ್ನು ಕೆಡವಲು ಬುಲ್ಡೋಜರ್‌ಗಳನ್ನು ಬಳಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಯುಪಿಯಲ್ಲಿ ಸಣ್ಣ ಪ್ರಕರಣದ ಆರೋಪಿಗಳನ್ನು ಸುಲಭವಾಗಿ ಬಂಧಿಸಬಹುದಾದರೂ ಪೊಲೀಸರು ಫೈರಿಂಗ್ ಮಾಡಿರುವುದನ್ನು ಸಾಮಾಜಿಕ ಕಾರ್ಯಕರ್ತ ರಾಜೀವ್ ಯಾದವ್ ಗಮನಿಸಿದ್ದಾರೆ. ಸೆಪ್ಟೆಂಬರ್‌ನಲ್ಲಿ ಅಂಬೇಡ್ಕರ್ ನಗರದಲ್ಲಿ 16 ವರ್ಷದ ಬಾಲಕಿಯ ದುಪಟ್ಟಾವನ್ನು ಎಳೆದ ನಂತರ ಮೋಟಾರ್‌ಸೈಕಲ್‌ನಿಂದ ಬಿದ್ದು ಬಾಲಕಿ ಮೃತಪಟ್ಟ ಪ್ರಕರಣದಲ್ಲಿ ಪೊಲೀಸರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಯಾದವ್ ಉಲ್ಲೇಖಿಸಿದ್ದಾರೆ.

ಅ.20 ರಂದು ರಾಜ್ಯದಲ್ಲಿ ನಡೆದ 4 ಎನ್‌ಕೌಂಟಗಳು ಕ್ಷುಲ್ಲಕ ಕಾರಣಕ್ಕೆ ನಡೆದಿದೆ. ಅ.19ರ ರಾತ್ರಿ ಬುಲಂದ್‌ಶಹರ್‌ನಲ್ಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಆತನಿಂದ ಕಳ್ಳತನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಅ.20 ರಂದು ಪೊಲೀಸರು ಮಹಾರಾಜಗಂಜ್‌ನಲ್ಲಿ ಇಬ್ಬರನ್ನು ಗುಂಡು ಹಾರಿಸಿ ಅವರಿಂದ 55 ಲಕ್ಷ ರೂಪಾಯಿ ಮತ್ತು 12 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. ಇಂತಹ ಸಣ್ಣ ಸಣ್ಣ ಪ್ರಕರಣಗಳಲ್ಲೂ ಪೊಲೀಸರು ಎನ್‌ಕೌಂಟರ್‌ ಮಾಡಿದ್ದಾರೆ ಎಂದು ರಾಜೀವ್‌ ಯಾದವ್‌ ಹೇಳಿದ್ದಾರೆ.

ಇದನ್ನು ಓದಿ: ಮೋದಿ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದ ಮಿಜೋರಾಂ ಸಿಎಂ; ಬಿಜೆಪಿಗೆ ಶಾಕ್ ಕೊಟ್ಟ ಮೈತ್ರಿ ಪಕ್ಷ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...