Homeಮುಖಪುಟ'ಪ್ಯಾಲೆಸ್ತೀನ್ ಮಕ್ಕಳಿಗಾಗಿ': ಅಮೆರಿಕ ಬೆಂಬಲಿತ ಪ್ರಶಸ್ತಿ ತಿರಸ್ಕರಿಸಿದ ಆದಿವಾಸಿ ಕವಿ ಜೆಸಿಂತಾ ಕೆರ್ಕಟ್ಟಾ

‘ಪ್ಯಾಲೆಸ್ತೀನ್ ಮಕ್ಕಳಿಗಾಗಿ’: ಅಮೆರಿಕ ಬೆಂಬಲಿತ ಪ್ರಶಸ್ತಿ ತಿರಸ್ಕರಿಸಿದ ಆದಿವಾಸಿ ಕವಿ ಜೆಸಿಂತಾ ಕೆರ್ಕಟ್ಟಾ

- Advertisement -
- Advertisement -

ಆದಿವಾಸಿ ಕವಿ ಮತ್ತು ಪತ್ರಕರ್ತೆ ಜೆಸಿಂತಾ ಕೆರ್ಕಟ್ಟಾ ಅವರು ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ ಫಾರ್ ಇಂಟರ್‌ನ್ಯಾಷನ್ ಡೆವಲಪ್‌ಮೆಂಟ್ ಮತ್ತು ರೂಮ್ ಟು ರೀಡ್ ಇಂಡಿಯಾ ಟ್ರಸ್ಟ್ ಜಂಟಿಯಾಗಿ ನೀಡುವ 2024 ರ ‘ರೂಮ್ ಟು ರೀಡ್ ಯಂಗ್ ಆಥರ್ ಅವಾರ್ಡ್’ ಅನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಗಾಝಾದ ಮೇಲಿನ ಇಸ್ರೇಲ್ ಆಕ್ರಮಣವನ್ನು ಪ್ರತಿಭಟಿಸಿ, ಪ್ಯಾಲೆಸ್ತೀನ್‌ನೊಂದಿಗೆ ಒಗ್ಗಟ್ಟು ಪ್ರದರ್ಶಿಸಿ ಕೆರ್ಕೆಟ್ಟಾ ಪ್ರಶಸ್ತಿ ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೆರ್ಕೆಟ್ಟಾ ಅವರ ಮಕ್ಕಳ ಕವನ ಸಂಕಲನ ‘ಜಿರ್ಹುಲ್‌’ ಗೆ ಪ್ರಶಸ್ತಿ ಘೋಷಣೆಯಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅಕ್ಟೋಬರ್ 7ರಂದು ದೆಹಲಿಯಲ್ಲಿ ಆಯೋಜಿಸಲಾಗಿದೆ.

“ಮಕ್ಕಳ ಶಿಕ್ಷಣಕ್ಕಾಗಿ ವಾಯು ಯಾನ ಕಂಪೆನಿ ಬೋಯಿಂಗ್‌ನೊಂದಿಗೆ ಕೂಡ ರೂಮ್ ಟು ರೀಡ್ ಇಂಡಿಯಾ ಟ್ರಸ್ಟ್ ಸಂಬಂಧ ಹೊಂದಿದೆ. ಶಸ್ತ್ರಾಸ್ತ್ರ ವ್ಯಾಪಾರ ಹಾಗೂ ಮಕ್ಕಳ ಪಾಲನೆ ಏಕ ಕಾಲದಲ್ಲಿ ನಡೆಯಲು ಹೇಗೆ ಸಾಧ್ಯ? ಏಕೆಂದರೆ, ಅದೇ ಶಸ್ತ್ರಾಸ್ತ್ರಗಳಿಂದ ಮಕ್ಕಳ ಜಗತ್ತು ನಾಶವಾಗುತ್ತಿದೆ” ಎಂದು ಕೆರ್ಕಟ್ಟಾ ಹೇಳಿದ್ದಾರೆ.

“ಮಕ್ಕಳಿಗಾಗಿ ಉತ್ತಮ ಜಗತ್ತನ್ನು ನಿರ್ಮಿಸುವಲ್ಲಿ ಹಿರಿಯರು ಮಹತ್ವದ ಪಾತ್ರವನ್ನು ನಿರ್ವಹಿಸದೇ ಇರುವಾಗ, ಈ ಪ್ರಶಸ್ತಿ ನಿಜವಾಗಿಯೂ ಯಾವ ಮೌಲ್ಯವನ್ನು ಹೊಂದಿದೆ? ಎಂದು ಪ್ರಶ್ನಿಸಿದ್ದಾರೆ.

ವಾಯು ಯಾನ ಕಂಪೆನಿ ಬೋಯಿಂಗ್ ಕಳೆದ 75ಕ್ಕೂ ಅಧಿಕ ವರ್ಷಗಳಿಂದ ಇಸ್ರೇಲ್‌ನೊಂದಿಗೆ ಸಂಬಂಧ ಹೊಂದಿದೆ. ಅಮೆರಿಕ ಸರಕಾರ ಅನುಮೋದಿಸಿದ ವಾಣಿಜ್ಯ ಒಪ್ಪಂದದ ಭಾಗವಾಗಿ ಬೋಯಿಂಗ್ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿದೆ.

ಮೇ ನಲ್ಲಿ ಎನ್‌ಪಿಆರ್ ನೆಟ್‌ವರ್ಕ್ ಮಾಡಿದ ವರದಿ ಪ್ರಕಾರ, ಅಮೆರಿಕದ ಕಂಪೆನಿಗಳಲ್ಲಿ ಬೋಯಿಂಗ್ 2021 ಹಾಗೂ 2023ರ ನಡುವೆ ಇಸ್ರೇಲ್‌ಗೆ ಬಾಂಬ್ ಹಾಗೂ ಸ್ಫೋಟಕಗಳ ಪೂರೈಕೆದಾರರಲ್ಲಿ ಪ್ರಥಮ ಸ್ಥಾನದಲ್ಲಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವೆ ಸ್ಮೃತಿ ಇರಾನಿ ಅವರು ರೂಮ್ ಟು ರೀಡ್ ಇಂಡಿಯಾ ಮತ್ತು ಬೋಯಿಂಗ್ ಪಾಲುದಾರಿಕೆಯೊಂದಿಗೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಸಾಕ್ಷರತಾ ಕಾರ್ಯಕ್ರಮ ಪ್ರಾರಂಭಿಸುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ : ಇಸ್ರೇಲ್‌ ಗುರಿಯಾಗಿಸಿಕೊಂಡು 200ಕ್ಕೂ ಹೆಚ್ಚು ಕ್ಷಿಪಣಿ ಹಾರಿಸಿದ ಇರಾನ್; ಸಾವುನೋವುಗಳ ವರದಿಗಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...