Homeಮುಖಪುಟಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಡಿಆರ್

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಡಿಆರ್

- Advertisement -
- Advertisement -

ಬಿಹಾರದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್‌) ವಿರುದ್ದ ಸ್ವಯಂ ಸೇವಾ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಾಟಿಕ್ ರಿಫಾರ್ಮ್ಸ್ (ಎಡಿಆರ್) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಕ್ರಿಯೆ ಸರಿಯಾಗಿಲ್ಲ. ಅಸಮಂಜಸವಾಗಿದೆ ಮತ್ತು ಸಮಯದ ಕೊರತೆ ಇದೆ ಎಂದು ಎಡಿಆರ್ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.

ಜುಲೈ 4ರಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ಮೂಲಕ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಎಡಿಆರ್, “ಪ್ರಸ್ತುತ ರಿಟ್ ಅರ್ಜಿಯನ್ನು ಭಾರತದ ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಸಲ್ಲಿಸಲಾಗಿದೆ ಎಂದಿದೆ. ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ (ಇಸಿಐ) 24 ಜೂನ್ 2025 ರಂದು ಹೊರಡಿಸಿರುವ ಆದೇಶ ರದ್ದುಗೊಳಿಸುವಂತೆ ಕೊರಿದೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ನಿರ್ದೇಶಿಸಿರುವುದು, ಭಾರತದ ಸಂವಿಧಾನದ 14, 19, 21, 325 ಮತ್ತು 326ನೇ ವಿಧಿಗಳು ಹಾಗೂ 1950ರ ಜನ ಪ್ರಾತಿನಿಧ್ಯ ಕಾಯ್ದೆ ಮತ್ತು 1960ರ ಮತದಾರರ ನೋಂದಣಿ ನಿಯಮಗಳ 21 ಎ ಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಎಡಿಆರ್ ಹೇಳಿದೆ.

ಚುನಾವಣಾ ಆಯೋಗದ ಆದೇಶವನ್ನು ರದ್ದುಗೊಳಿಸದಿದ್ದರೆ, ನಿರಂಕುಶವಾಗಿ ಮತ್ತು ಸರಿಯಾದ ಪ್ರಕ್ರಿಯೆಯಿಲ್ಲದೆ ಲಕ್ಷಾಂತರ ಮತದಾರರು ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡುವ ಹಕ್ಕು ಕಳೆದುಕೊಳ್ಳಲಿದ್ದಾರೆ. ಇದು ಸಂವಿಧಾನದ ಮೂಲ ರಚನೆಯ ಭಾಗವಾಗಿರುವ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳು ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದೆ” ಎಂದಿದೆ.

ಚುನಾವಣಾ ಆಯೋಗ ಕೇಳಿದ ದಾಖಲೆಗಳು ಹೊಂದಿಸಲು ಎಲ್ಲಾ ಜನರಿಗೆ ಸಾಧ್ಯವಿಲ್ಲ. ಮತದಾರರ ಪಟ್ಟಿ  ಪರಿಷ್ಕರಣೆ ಪ್ರಕ್ರಿಯೆ ಸರಿಯಿಲ್ಲ. ಸಮಯದ ಕೊರತೆಯಿದೆ. ಲಕ್ಷಾಂತರ ನಿಜವಾದ ಮತದಾರರು ತಮ್ಮ ಹಕ್ಕನ್ನು ಕಳೆದುಕೊಳ್ಳುವ ಆತಂಕವಿದೆ. ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿಗಳು ಆಗುವುದಿಲ್ಲ, ಬದಲಾಗಿ ಜನನ ಪ್ರಮಾಣಪತ್ರವೇ ತರಬೇಕೆಂದು ಕಡ್ಡಾಯ ಮಾಡಿದೆ. ಇದರಿಂದ ತಳ ಸಮುದಾಯಗಳ ಮತ್ತು ಬಡ ಮಧ್ಯಮ ವರ್ಗದ ಜನರನ್ನು ಮತದಾನದಿಂದ ವಂಚಿತರಾಗಿಸುವ ಸಾಧ್ಯತೆ ಇದೆ ಎಂದು ಎಡಿಆರ್ ಅರ್ಜಿಯಲ್ಲಿ ತಿಳಿಸಿದೆ.

ಮತದಾರರ ಪಟ್ಟಿ ಪರಿಷ್ಕರಣೆಯು ಸಂವಿಧಾನದ ವಿಧಿ 326ರ ಉಲ್ಲಂಘನೆಯಾಗಿದೆ. ಏಕೆಂದರೆ ಮತದಾರರು ತಮ್ಮ ಪೌರತ್ವವನ್ನು ಮತ್ತು ಅವರ ತಾಯಿ ಅಥವಾ ತಂದೆಯ ಪೌರತ್ವವನ್ನು ಸಾಬೀತುಪಡಿಸಲು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇಲ್ಲದಿದ್ದರೆ ಅವರ ಹೆಸರನ್ನು ಕರಡು ಮತದಾರರ ಪಟ್ಟಿಯಲ್ಲಿ ಸೇರಿಸಲಾಗುವುದಿಲ್ಲ ಮತ್ತು ಅದರಿಂದ ಅಳಿಸಬಹುದು ಎಡಿಆರ್ ಹೇಳಿದೆ.

“ವಿಶೇಷ ಸಾರಾಂಶ ಪರಿಷ್ಕರಣೆ (ಎಸ್‌ಎಸ್‌ಆರ್) ಅನ್ನು ಈಗಾಗಲೇ ಅಕ್ಟೋಬರ್ 29, 2024 ಮತ್ತು ಜನವರಿ 6, 2025ರ ನಡುವೆ ನಡೆಸಲಾಗಿದೆ. ಈ ಮೂಲಕ ವಲಸೆ, ಸಾವು ಅಥವಾ ಇತರ ಕಾರಣಗಳಿಂದಾಗಿ ಅನರ್ಹ ಮತದಾರರಂತಹ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಹೀಗಿರುವಾಗ ಕಡಿಮೆ ಅವಧಿಯಲ್ಲಿ ಲಕ್ಷಾಂತರ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ಅಗತ್ಯವಿಲ್ಲ” ಎಂದು ಎಡಿಆರ್ ತನ್ನ ಅರ್ಜಿಯಲ್ಲಿ ವಾದಿಸಿದೆ.

ಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...