Homeಮುಖಪುಟನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು” ಎಂದು ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ರೋಹಿತ್ ವೇಮುಲಾ ಪ್ರಾಣತೆತ್ತಿದ್ದರು.

- Advertisement -
- Advertisement -

2016ರ ಜನವರಿಯಲ್ಲಿ ಪ್ರಾಣತೆತ್ತ ಮತ್ತು ಆ ಮೂಲಕ ವಿವಿಗಳಲ್ಲಿನ ಜಾತಿ ಮನಸ್ಥಿತಿಯನ್ನು ದೇಶಕ್ಕೆ ಸಾರಿದ ಹುತಾತ್ಮ ರೋಹಿತ್ ವೇಮುಲಾರವರ ಸಹೋದರ ರಾಜಾ ವೇಮುಲಾ ವಕೀಲ ಪದವಿ ಪಡೆದಿದ್ದು, ಜನರ ಹಕ್ಕುಗಳಿಗಾಗಿ ಹೋರಾಡಲು ಸಿದ್ದನಾಗಿದ್ದಾನೆ ಎಂದು ರಾಧಿಕ ವೇಮುಲಾ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ನನ್ನ ಕಿರಿಯ ಮಗ ರಾಜಾ ವೇಮುಲಾ ಈಗ ವಕೀಲ. ರೋಹಿತ್ ವೇಮುಲಾ ನಂತರ ಈ 5 ವರ್ಷಗಳಲ್ಲಿ ನಮ್ಮ ಜೀವನದಲ್ಲಿ ಸಂಭವಿಸಿದ ಪ್ರಮುಖ ಬದಲಾವಣೆಗಳಲ್ಲಿ ಇದು ಒಂದು. ವಕೀಲ ರಾಜಾ ವೇಮುಲಾ ಈಗ ನ್ಯಾಯಾಲಯದಲ್ಲಿ ಜನರಿಗೆ ಮತ್ತು ಅವರ ಹಕ್ಕುಗಳಿಗಾಗಿ ಕೆಲಸ ಮಾಡುತ್ತಾನೆ ಮತ್ತು ಹೋರಾಡುತ್ತಾನೆ. ಇದು ಸಮಾಜಕ್ಕೆ ನಾನು ಹಿಂತಿರುಗಿಸುತ್ತಿರುವ ಕೊಡುಗೆ. ಅವನನ್ನು ಆಶೀರ್ವದಿಸಿ. ಜೈ ಭೀಮ್” ಎಂದಿದ್ದಾರೆ.

“ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು” ಎಂದು ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ರೋಹಿತ್ ವೇಮುಲಾ ಪ್ರಾಣತೆತ್ತಿದ್ದರು. ಇದನ್ನು ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳು ವಿಶ್ವವಿದ್ಯಾಲಯ, ಸಮಾಜ ಮತ್ತು ಜಾತಿ ವ್ಯವಸ್ಥೆ ಮಾಡಿದ ಸಾಂಸ್ಥಿಕ ಕೊಲೆಯೆಂದು ಕರೆದಿದ್ದರು.

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್‌ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಯಿ ಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ನಂತರ ಪ್ರಾಣತೆತ್ತಿದ್ದು ಇತಿಹಾಸ.

ಅಂದಿನಿಂದ ಸಾಮಾಜಿಕ ಚಳವಳಿಗಳ ಭಾಗವಾಗಿರುವ ಅವರ ತಾಯಿ ರಾಧಿಕಾ ವೇಮುಲಾ ಗುಜರಾತ್‌ನಲ್ಲಿ ನಡೆದ ಊನಾ ಚಲೋ ಚಳವಳಿಯಲ್ಲಿ ಭಾಗವಹಿಸಿದ್ದರು. ದೆಹಲಿಯ ವಿದ್ಯಾರ್ಥಿ ನಜೀಬ್ ಕಾಣೆಯಾದಾಗ ಆತನ ತಾಯಿಯೊಂದಿಗೆ ನಿಂತಿದ್ದರು. ನೂರಾರು ಹೋರಾಟಗಳಲ್ಲಿ ಭಾಗವಹಿಸಿದ್ದ ಅವರು ಈಗ ತಮ್ಮ ಇನ್ನೊಬ್ಬ ಮಗನನ್ನು ವಕೀಲನಾಗಿ ಸಮಾಜಕ್ಕೆ ಅರ್ಪಿಸುತ್ತಿದ್ದೇನೆ ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ: ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...