Homeಮುಖಪುಟಆಮ್ ಆದ್ಮಿ ಪಕ್ಷ ಸೇರಲಿರುವ ಖ್ಯಾತ ವಕೀಲ ಜಗದೀಶ್‌ ಮಹಾದೇವ್‌

ಆಮ್ ಆದ್ಮಿ ಪಕ್ಷ ಸೇರಲಿರುವ ಖ್ಯಾತ ವಕೀಲ ಜಗದೀಶ್‌ ಮಹಾದೇವ್‌

- Advertisement -
- Advertisement -

ಪ್ರಚಲಿತ ಸಮಸ್ಯೆಗಳ ಬಗ್ಗೆ ಫೇಸ್‌ಬುಕ್ ಲೈವ್ ವಿಡಿಯೋಗಳ ಮೂಲಕ ಖ್ಯಾತರಾದ ಮತ್ತು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಂತ್ರಸ್ತ ಯುವತಿಯ ಪರ ನಿಂತ ವಕೀಲರಾದ ಜಗದೀಶ್‌ ಕೆ.ಎನ್‌. ಮಹಾದೇವ್‌ರವರು ಸೋಮವಾರ ಆಮ್‌ ಆದ್ಮಿ ಪಕ್ಷ ಸೇರಲಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಆಪ್ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ. ಸದಂ, “ಅಸಂಖ್ಯಾತ ಯುವ ಅಭಿಮಾನಿಗಳಿಂದ “ವಕೀಲ್‌ ಸಾಬ್”‌ ಎಂದೇ ಕರೆಸಿಕೊಳ್ಳುತ್ತಿರುವ ಖ್ಯಾತ ವಕೀಲರಾದ ಜಗದೀಶ್‌ ಕೆ.ಎನ್‌. ಮಹಾದೇವ್‌ರವರು ಆಮ್‌ ಆದ್ಮಿ ಪಾರ್ಟಿಯನ್ನು ಸೇರಲಿದ್ದಾರೆ. ರಮೇಶ್‌ ಜಾರಕಿಹೊಳಿಯವರು ಯುವತಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣ ಸೇರಿದಂತೆ ಅನೇಕ ಸಂದರ್ಭಗಳಲ್ಲಿ ಸಂತ್ರಸ್ತರ ಧ್ವನಿಯಾದ ಹೆಗ್ಗಳಿಕೆ ಇವರದ್ದು. ಆಮ್‌ ಆದ್ಮಿ ಪಾರ್ಟಿಯ ಮೂಲಕ ಇವರು ಸಕ್ರಿಯ ರಾಜಕೀಯ ಪ್ರವೇಶಿಸುತ್ತಿರುವುದು ಸಮಾಜದ ಹಿತದೃಷ್ಟಿಯಿಂದ ಆಶಾದಾಯಕ ಬೆಳವಣಿಗೆಯಾಗಿದೆ” ಎಂದು ತಿಳಿಸಿದ್ದಾರೆ.

ಅಕ್ಟೋಬರ್ 11ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಾನು ಆಮ್ ಆದ್ಮಿ ಪಕ್ಷ ಸೇರಲಿದ್ದೇನೆ ಎಂದು ಜಗದೀಶ್‌ ಮಹಾದೇವ್‌ರವರು ತಮ್ಮ ಫೇಸ್‌ಬುಕ್ ಮೂಲಕ ಘೋಷಿಸಿದ್ದಾರೆ.


ಇದನ್ನೂ ಓದಿ : ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮಸ್ಕಾರ ಸರ್ ನಾನೊಬ್ಬ ರೈತ ಮಾತಾಡ್ತಿರೋದು ನಾನು ಆಂಧ್ರದಿಂದ ಮಾತಾಡುತ್ತಿದ್ದೇನೆ ನನಗೆ ಯಾವುದೋ ಒಂದು ಕೇಸ್ ವಿಚಾರ ಪೊಲೀಸರು ಎ ಫೈಯರ್ ಆಗಿದೆ ಆದರೂ ಸಮಿತ ನೀವು 60000 ಹಣವನ್ನು ಕೊಡಿ ನಿಮ್ಮ ಕೇಸನ್ನು ನಾವುತೆಗೆದ ಹಾಕ್ತಿವಿ ಅಂತ ಹೇಳಿದ್ರು ಇದು ಹೇಗೆ ಸುಲಭ ಆಗುತ್ತೆ ತಯಾರಾದ ಆದಮೇಲೆ ಇವರು ಹೇಗೆ ನನ್ನ ಮೇಲಿರೋ ಕೇಸನ್ನುತೆಗೆದುಹಾಕುತ್ತಾರೆ ಅಂತ ನನಗೆ ಅರ್ಥವಾಗಲಿಲ್ಲ ಆದರೂ ಸಮೇತ ಅವರು 60000 ಹಣವನ್ನು ನನ್ನತ್ರ ಲಂಚವಾಗಿ ತಗೊಂಡು ನನಗೆ ಏನು ಮಾಡಿಲ್ಲ ಸರ್ ದಯವಿಟ್ಟು ಜಗದೀಶ್ ಸರ್ ನಿಮ್ಮನ್ನು ನೋಡಿದೆ ನನಗೆ ನ್ಯಾಯವನ್ನು ಮಾಡಿಕೊಡಿ ಅಂತ ನಾನು ನಿಮ್ಮತ್ರ ಬೇಡಿಕೆ ಮಾಡುತ್ತಿದ್ದೇನೆ ಮಾತನ್ನು ಮುಗಿಸಿದ ನಿಮ್ಮ ಪ್ರೀತಿಯ ವಿನೋದ್ ಕುಮಾರ್

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...