Homeಮುಖಪುಟನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

- Advertisement -
- Advertisement -

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ, ಚಪ್ಪಲಿಯಿಂದ ಹೊಡೆಯಲು ಯತ್ನಿಸುವಾಗ ರಾಕೇಶ್ ಕಿಶೋರ್ ಕೈ ಅಡ್ಡ ಹಿಡಿದು ತಡೆದಿದ್ದು, ಚಪ್ಪಲಿ ಏಟು ಅವರ ಕೈಗೆ ಬಿದ್ದಿರುವುದನ್ನು ನೋಡಬಹುದು.

ಮಾಜಿ ಸಿಜೆಐ ಮೇಲಿನ ಹಲ್ಲೆ ಯತ್ನಕ್ಕೆ ಪ್ರತೀಕಾರವಾಗಿ ರಾಕೇಶ್ ಕಿಶೋರ್ ಮೇಲೆ ಹಲ್ಲೆ ನಡೆಸಲಾಗಿದೆಯೇ? ಎಂದು ಸ್ಪಷ್ಟವಾಗಿಲ್ಲ. ಮಾಧ್ಯಮ ವರದಿಗಳು ಅದೇ ಕಾರಣಕ್ಕೆ ಥಳಿಸಲು ಯತ್ನಿಸಿರಬಹುದು ಎಂದು ಅಭಿಪ್ರಾಯಪಟ್ಟಿವೆ.

“ಸುಮಾರು 35-40 ವರ್ಷ ವಯಸ್ಸಿನ ವಕೀಲರೊಬ್ಬರು ನಮ್ಮ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದರು. ನಂತರ ನಾವು ಸ್ಥಳದಿಂದ ಹೊರಟೆವು. ಮಾಜಿ ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ್ದಕ್ಕೆ ಹಲ್ಲೆ ಮಾಡುತ್ತಿರುವುದಾಗಿ ಅವರು ಹೇಳಿದರು. ನ್ಯಾಯಮೂರ್ತಿ ದಲಿತ ಎಂಬ ಕಾರಣಕ್ಕೆ ಶೂ ಎಸೆದಿದ್ದೀರಿ ಎಂದರು. ಆಗ ನಾವು ಕೂಡ ‘ಸನಾತನ’ ಘೋಷಣೆಗಳನ್ನು ಕೂಗಿದೆವು” ಎಂದು ರಾಕೇಶ್ ಕಿಶೋರ್ ಹೇಳಿರುವುದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಹಲ್ಲೆಯಿಂದ ನಾನು ಗಾಯಗೊಂಡಿಲ್ಲ” ಎಂದಿರುವ ರಾಕೇಶ್ ಕಿಶೋರ್, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೀರಾ? ಎಂದು ಕೇಳಿದಾಗ “ಇದೆಲ್ಲಾ ಕುಟುಂಬದೊಳಗಿನ ವಿಷಯ” ಎಂಬುವುದಾಗಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

“ನಾವು ದೂರು ದಾಖಲಿಸಿಲ್ಲ, ವಕೀಲರ ವಿರುದ್ಧ ದೂರು ನೀಡುವುದರ ಪ್ರಯೋಜನ ಏನು? ಅವರೆಲ್ಲರೂ ನಮ್ಮ ಸ್ವಂತ ಸಹೋದರರು. ಇದು ಕುಟುಂಬದೊಳಗಿನ ಒಂದು ಸಣ್ಣ ವಿಷಯ” ಎಂದು ರಾಕೇಶ್ ಕಿಶೋರ್ ಹೇಳಿರುವುದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

2025 ಅಕ್ಟೋಬರ್ 6ರಂದು ಮಾಜಿ ಸಿಜೆಐ ಬಿ.ಆರ್ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆಯಲು ಯತ್ನಿಸಿದ್ದರು. ಗವಾಯಿ ಅವರು ನ್ಯಾಯಮೂರ್ತಿ ಚಂದ್ರನ್ ಅವರೊಂದಿಗೆ ನ್ಯಾಯಪೀಠದಲ್ಲಿ ವಿಚಾರಣೆ ನಡೆಸುತ್ತಿದ್ದಾಗಲೇ ಈ ಘಟನೆ ನಡೆದಿತ್ತು. ಈ ವೇಳೆ 71 ವರ್ಷದ ರಾಕೇಶ್ ಕಿಶೋರ್ ಅವರನ್ನು ಸ್ವಲ್ಪ ಸಮಯದವರೆಗೆ ಬಂಧಿಸಲಾಗಿದ್ದರೂ, ನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ಅವರಿಗೆ ಆರೋಪಗಳನ್ನು ಹೊರಿಸದಂತೆ ಸಿಜೆಐ ಸೂಚಿಸಿದ ನಂತರ ಅವರನ್ನು ಬಿಡುಗಡೆ ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...