Homeಮುಖಪುಟಅಫ್ಘಾನ್‌ನಿಂದ ಮರಳಿದವರಿಗೆ ಉಚಿತ ಪೋಲಿಯೋ ಲಸಿಕೆ: ಆರೋಗ್ಯ ಸಚಿವ

ಅಫ್ಘಾನ್‌ನಿಂದ ಮರಳಿದವರಿಗೆ ಉಚಿತ ಪೋಲಿಯೋ ಲಸಿಕೆ: ಆರೋಗ್ಯ ಸಚಿವ

- Advertisement -
- Advertisement -

ಅಫ್ಘಾನಿಸ್ತಾನದಿಂದ ವಾಪಸ್ ಆದವರಿಗೆ ಪೋಲಿಯೋ ವೈರಸ್ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಉಚಿತವಾಗಿ ಪೋಲಿಯೋ ಲಸಿಕೆ ಹಾಕಲು ಭಾರತ ನಿರ್ಧರಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಭಾನುವಾರ ತಿಳಿಸಿದ್ದಾರೆ.

ಅಫ್ಘಾನಿಸ್ತಾನದಿಂದ ವಾಪಸ್ ಬಂದವರು ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಸಿಕೆ  ಪಡೆಯುತ್ತಿರುವ ಫೋಟೋವನ್ನು ಆರೋಗ್ಯ ಸಚಿವರು ಹಂಚಿಕೊಂಡಿದ್ದಾರೆ.

ವಿಶ್ವದಲ್ಲಿ ಅಫ್ಘಾನಿಸ್ಥಾನ ಮತ್ತು ಪಾಕಿಸ್ತಾನ ಮಾತ್ರ ಪೋಲಿಯೊ ರೋಗವನ್ನು ಹೊಂದಿರುವ ಎರಡು ದೇಶಗಳಾಗಿವೆ.

ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಗುಂಪು ಕಟ್ಟಿಕೊಂಡು ಆಕ್ರಮಣ; ನಾಲ್ವರು ಆಸ್ಪತ್ರೆಗೆ ದಾಖಲು

 

“ಪೋಲಿಯೋ ವೈರಸ್ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಅಫ್ಘಾನಿಸ್ತಾನದಿಂದ ಮರಳಿದವರಿಗೆ ಉಚಿತ ಪೋಲಿಯೋ ಲಸಿಕೆ ಹಾಕಲು ನಾವು ನಿರ್ಧರಿಸಿದ್ದೇವೆ” ಎಂದು ಮನ್ಸುಖ್ ಮಾಂಡವೀಯ ಭಾನುವಾರ ಟ್ವೀಟ್ ಮಾಡಿದ್ದಾರೆ.

ಕಳೆದ ವಾರ ತಾಲಿಬಾನ್ ಅಫ್ಘಾನ್ ರಾಜಧಾನಿ ಕಾಬೂಲ್ ಸ್ವಾಧೀನಪಡಿಸಿಕೊಂಡ ನಂತರ ಐಎಎಫ್ ನ ಸೇನಾ ವಿಮಾನದಲ್ಲಿ 107 ಭಾರತೀಯರು ಸೇರಿದಂತೆ 168 ಜನರನ್ನು ಭಾರತಕ್ಕೆ ಭಾನುವಾರ ಸ್ಥಳಾಂತರಿಸಲಾಗಿದೆ.

ತಾಲಿಬಾನ್ ಕಾಬೂಲ್ ಮೇಲೆ ಹಿಡಿತ ಸಾಧಿಸಿದ ನಂತರ ಐಎಎಫ್ ನ ಎರಡು ಸಿ -17 ಹೆವಿ-ಲಿಫ್ಟ್ ವಿಮಾನದಲ್ಲಿ ಭಾರತೀಯ ರಾಯಭಾರಿ ಮತ್ತು ಕಾಬೂಲ್‌ನಲ್ಲಿರುವ ತನ್ನ ರಾಯಭಾರ ಕಚೇರಿಯ ಇತರ ಸಿಬ್ಬಂದಿ ಸೇರಿದಂತೆ 200 ಜನರನ್ನು ಈ ಹಿಂದೆ ಸ್ಥಳಾಂತರಿಸಲಾಗಿತ್ತು.

ಭಾರತವು ತನ್ನ ಎಲ್ಲಾ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸ್ಥಳಾಂತರಿಸಿದೆ. ಆದರೆ ಅಂದಾಜು 1,000 ನಾಗರಿಕರು ಅಫ್ಘಾನಿಸ್ತಾನದ ಹಲವಾರು ನಗರಗಳಲ್ಲಿ ಉಳಿದಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ. ಅವರು ಇರುವ ಸ್ಥಳ ಮತ್ತು ಪರಿಸ್ಥಿತಿಯನ್ನು ಖಚಿತಪಡಿಸಿಕೊಳ್ಳುವುದು ಒಂದು ಸವಾಲಾಗಿದೆ ಎಂದು ಅವರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ನಿರ್ಬಂಧ ಸಡಿಲಗೊಳಿಸಿದ ತಮಿಳುನಾಡು: ಸಿನಿಮಾ ಥಿಯೇಟರ್‌ ಓಪನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

0
ಯುನೈಟೆಡ್ ಸ್ಟೇಟ್ಸ್ ತನ್ನ 2023ರ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, BBC ಮೇಲೆ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಂತಹ ಭಾರತಕ್ಕೆ ಸಂಬಂಧಿಸಿದ ಪ್ರಮುಖ...