Homeಅಂತರಾಷ್ಟ್ರೀಯಅಫ್ಘಾನ್: ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ- ತಾಲಿಬಾನ್ ವಕ್ತಾರ

ಅಫ್ಘಾನ್: ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ- ತಾಲಿಬಾನ್ ವಕ್ತಾರ

- Advertisement -
- Advertisement -

ಈಗಿನ ತಾಲಿಬಾನ್ ಆಡಳಿತದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂಬುದನ್ನು ಒಪ್ಪಿಕೊಂಡಿರುವ ತಾಲಿಬಾನ್ ಸರ್ಕಾರ, ಅಫ್ಘಾನ್ ಮಹಿಳೆಯರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿದೆ. ಮಹಿಳೆಯರು ಕೆಲಸಕ್ಕೆ ಹೊರ ಹೋಗುವುದು ಸುರಕ್ಷಿತವಲ್ಲ ಎಂದು ತಿಳಿಸಿದೆ.

ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಸುದ್ದಿಗೋಷ್ಠಿಯಲ್ಲಿ, “ಮಹಿಳೆಯರು ತಮ್ಮ ಸುರಕ್ಷತೆಗಾಗಿ ಕೆಲಸಕ್ಕೆ ಹೋಗಬಾರದು, ನಮ್ಮ ಸೈನಿಕರ ಗುಂಪು ಇನ್ನು ಹಳೆಯ ಮನಸ್ಥಿತಿಯಲ್ಲಿಯೇ ಇದೆ. ಹೊಸ ಬದಲಾವಣೆ ಬರಲು ಸಮಯ ಬೇಕಾಗಿದೆ” ಎಂದಿದ್ದಾರೆ.

“ಮಹಿಳೆಯರು ಮನೆಯಲ್ಲಿಯೇ ಇರುವ ಕ್ರಮವು ಅಗತ್ಯವಾಗಿದೆ. ಏಕೆಂದರೆ ತಾಲಿಬಾನ್ ಬದಲಾಗುತ್ತಲೇ ಇದೆ ಮತ್ತು ಅವರಿಗೆ ಮಹಿಳೆಯರಿಗೆ ಗೌರವ ಕೊಡುವ ತರಬೇತಿ ನೀಡಿಲ್ಲ” ಎಂದು ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

1996 ಮತ್ತು 2001 ರ ನಡುವೆ ತಾಲಿಬಾನ್ ಅಧಿಕಾರದಲ್ಲಿದ್ದಾಗ ಮಹಿಳೆಯರು ಕೆಲಸಕ್ಕೆ ಹೋಗುವುದನ್ನು  ನಿಷೇಧಿಸಿತ್ತು. ಅವರನ್ನು ಮನೆಯಿಂದ ಹೊರಹೋಗದಂತೆ ತಡೆಹಿಡಿದಿತ್ತು. ಕಾಲುಗಳು ಕೂಡ ಕಾಣದಂತೆ ಸಂಪೂರ್ಣ ದೇಹವನ್ನು ಮುಚ್ಚುವಂತೆ ಒತ್ತಾಯಿಸಲಾಗಿತ್ತು.

ಈ ಬಾರಿ ತಾಲಿಬಾನ್ ತನ್ನ ಹೊಸ ಯುಗವು ಹೆಚ್ಚು ಆಶಾದಾಯಕವಾಗಿರುತ್ತದೆ ಎಂದು ಭರವಸೆ ನೀಡಿತ್ತು. ಆದರೆ,  ತಾಲಿಬಾನ್ ನಾಯಕರು ಮಹಿಳಾ ಹಕ್ಕುಗಳನ್ನು ಕಸಿದುಕೊಳ್ಳುವುದಿಲ್ಲ ಎಂದು ಭರವಸೆ ನೀಡಲು ನಿರಾಕರಿಸಿದ್ದಾರೆ. ಈಗಾಗಲೇ ಅನೇಕ ಮಹಿಳೆಯರು ಹಿಂಸೆಯನ್ನು ಎದುರಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಅಫ್ಘಾನಿಸ್ತಾನವನ್ನು ತೊರೆದ ಒಟ್ಟು ಜನಸಂಖ್ಯೆ 19,000. ಇದರಲ್ಲಿ 11,200 ಜನರು 42 ಯುಎಸ್ ಮಿಲಿಟರಿ ವಿಮಾನಗಳಲ್ಲಿ ಸ್ಥಳಾಂತರಗೊಂಡಿದ್ದಾರೆ. ಇತರ 7,800 ಜನರನ್ನು ಒಕ್ಕೂಟದ ಪಾಲುದಾರರಿಂದ ಸ್ಥಳಾಂತರಿಸಲಾಗಿದೆ ಎಂದು ಬುಧವಾರ ಘೋಷಿಸಿಸಲಾಗಿದೆ.

ಇನ್ನು, ಅಫ್ಘಾನ್‌ನಿಂದ ಭಾರತಕ್ಕೆ ಬಂದಿರುವ ನೂರಾರು ಅಫ್ಘಾನಿಸ್ತಾನದ ಪ್ರಜೆಗಳು ನಿರಾಶ್ರಿತರ ಕಾರ್ಡ್‌ಗಾಗಿ ಒತ್ತಾಯಿಸಿ ಬುಧವಾರ ನವದೆಹಲಿಯಲ್ಲಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ (UNHRC) ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ನಿರಾಶ್ರಿತರ ಕಾರ್ಡ್‌ಗಾಗಿ ಅಫ್ಘಾನ್ ನಿರಾಶ್ರಿತರು ಕಳೆದ ನಾಲ್ಕು ದಿನಗಳಿಂದ  ಪ್ರತಿಭಟನೆ ನಡೆಸುತ್ತಿದ್ದಾರೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ನಿರಾಶ್ರಿತರ ಕಾರ್ಡುಗಳು ಸಿಗದ ಹಿನ್ನೆಲೆ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...