Homeಅಂತರಾಷ್ಟ್ರೀಯಅಫಘಾನಿಸ್ತಾನ ಪಾರ್ಲಿಮೆಂಟಿನ ಮಹಿಳಾ ಅಭ್ಯರ್ಥಿಗಳು ತುಟಿ ಹೊಲಿದುಕೊಂಡು ಪ್ರತಿಭಟಿಸಿದ್ದು ಏಕೆ ಗೊತ್ತಾ?

ಅಫಘಾನಿಸ್ತಾನ ಪಾರ್ಲಿಮೆಂಟಿನ ಮಹಿಳಾ ಅಭ್ಯರ್ಥಿಗಳು ತುಟಿ ಹೊಲಿದುಕೊಂಡು ಪ್ರತಿಭಟಿಸಿದ್ದು ಏಕೆ ಗೊತ್ತಾ?

- Advertisement -
- Advertisement -

ಕಳೆದ ವರ್ಷ ನಡೆದ ಪಾರ್ಲಿಮೆಂಟ್ ಚುನಾವಣೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಅಫಘಾನಿಸ್ತಾನ ಪಾರ್ಲಿಮೆಂಟ್ ಚುನಾವಣೆಯ ಮಹಿಳಾ ಅಭ್ಯರ್ಥಿಗಳು ತಮ್ಮ ತುಟಿಗಳನ್ನು ಹೊಲಿದುಕೊಂಡು ‘ಮೌನ’ ಪ್ರತಿಭಟನೆ ನಡೆಸಿದ್ದಾರೆ.

ಕಾಬೂಲ್ ನಲ್ಲಿರುವ ಅಧ್ಯಕ್ಷೀಯ ಅರಮನೆ ಮುಂದೆ ಮಹಿಳಾ ಅಭ್ಯರ್ಥಿಗಳು ಕಳೆದ ಮಂಗಳವಾರ ಪ್ರತಿಭಟನೆ ನಡೆಸಿದರು.

ಪಾರ್ಲಿಮೆಂಟ್ ಚುನಾವಣೆಯಲ್ಲಿ ಒಟ್ಟು 11 ಮಂದಿ ಮಹಿಳಾ ಅಭ್ಯರ್ಥಿಗಳ ಆಯ್ಕೆಯಲ್ಲಿ ಅಕ್ರಮ ನಡೆದಿದ್ದು, ಈ ಅಕ್ರಮ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ನಾಲ್ಕು ಮಂದಿ ಮಹಿಳಾ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಈ ಪ್ರಕರಣದ ಕುರಿತು ತನಿಖೆ ನಡೆಸಲು ವಿಶೇಷ ನ್ಯಾಯಾಲಯ ಸ್ಥಾಪನೆಯಾಗಬೇಕು ಎಂದು ಮಹಿಳೆಯರು ಆಗ್ರಹಿಸಿದ್ದಾರೆ.

ಆಧಾರ: ಇರಾನ್ ಪ್ರೆಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...