Homeಕರ್ನಾಟಕಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

ಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

- Advertisement -
- Advertisement -

ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸಿರುವ ಬಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದೆ.

ಈ ಮಂಗಳಾದೇವಿ ದೇವಸ್ಥಾನವು ಮುಜುರಾಯಿ ಇಲಾಖೆ ವ್ಯಾಪ್ತಿಗೆ ಬರುತ್ತದೆ. ದೇವಸ್ಥಾನದ ನವರಾತ್ರಿ ಉತ್ಸವವು ಅಕ್ಟೋಬರ್ 15 ರಿಂದ 24 ರ ವರೆಗೆ ನಡೆಯಲಿದೆ. ಆದರೆ, ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ ಹಾಗಾಗಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ನಿರಾಕರಿಸಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯುವ ಹೇಳಿದೆ ಎನ್ನಲಾಗಿದೆ.

ಪ್ರತಿವರ್ಷದಂತೆ ಈ ವರ್ಷವು ನವರಾತ್ರಿ ಸಿದ್ಧತೆ ಹಿನ್ನೆಲೆಯಲ್ಲಿ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆ ಮಾಡಲಾಗುತ್ತಿದೆ. ಇದು ಮಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಸರ್ಕಾರಿ ರಸ್ತೆಯಾಗಿದೆ.

ಹಲವು ವರ್ಷಗಳಿಂದ ಈ ರಸ್ತೆಯ ಬದಿಗಳಲ್ಲಿ ನವರಾತ್ರಿ ಜಾತ್ರಾ ವ್ಯಾಪಾರ ನಡೆಯುತ್ತಾ ಬಂದಿದೆ. ಪಾಲಿಕೆ ರಸ್ತೆಯಾಗಿದ್ದರೂ ಹಲವು ವರ್ಷಗಳಿಂದ ದೇವಸ್ಥಾನದ ಆಡಳಿತದಿಂದಲೇ ವ್ಯಾಪಾರದ ಜಾಗ ಹರಾಜು ಮಾಡಲಾಗುತ್ತಿದೆ. ಆದರೆ ಈ ಬಾರಿ ಮಾತ್ರ ದೇವಸ್ಥಾನದ ಆಡಳಿತ ಮಂಡಳಿಯು ಮುಸ್ಲಿಂ ಸಮುದಾಯದ ವ್ಯಾಪಾರಸ್ಥರಿಗೆ ಅವಕಾಶ ನೀಡಿಲ್ಲ. ಇದು ಮುಸ್ಲಿಂ ಸಮುದಾಯದ ವ್ಯಾಪಾರಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಂಬಂಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಅವರು, ”ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನಗಳಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ಮಂಗಳೂರಿನ ಹಲವು ದೇವಸ್ಥಾನಗಳ ಮುಂದೆ ಬ್ಯಾನರ್ ಹಾಕಲಾಗುತ್ತಿತ್ತು. ಆದರೆ ಮಂಗಳಾದೇವಿ ದೇವಸ್ಥಾನದಲ್ಲಿ ಈವರೆಗೂ ಮುಸ್ಲಿಂ ವ್ಯಾಪಾರಸ್ಥರಿಗೆ ನಿಷೇಧ ಹೇರಿರಲಿಲ್ಲ. ಆದರೆ ಈ ಬಾರಿ ಇಲ್ಲಿಯೂ ಅದೇ ಬೆಳವಣಿಗೆ ನಡೆದಿದೆ” ಎಂದು ತಿಳಿಸಿದರು.

”ಕಾನೂನಿನ ಪ್ರಕಾರ ದೇವಸ್ಥಾನದ ಪ್ರಣಾಂಗದಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರ ನಡೆಸಲು ಅವಕಾಶ ಇಲ್ಲ, ಆದರೆ ಈವರೆಗೂ ಮುಸ್ಲಿಂ ವ್ಯಾಪಾರಸ್ಥರು ದೇವಸ್ಥಾನದ ಒಳಾಂಗಣದಲ್ಲಿ ವ್ಯಾಪಾರ ಮಾಡಿಲ್ಲ. ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆ ಮಾಡಲಾಗುತ್ತದೆ. ಈ ಬಾರಿಯೂ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲಿ 95 ಅಂಗಡಿಗಳಿದ್ದು ಪ್ರತಿವರ್ಷದಂತೆ ಈ ವರ್ಷವು ಅಂಗಡಿ ಟೆಂಡರ್ ಪಡೆಯಲು ಹೋದರೆ ಅವಕಾಶ ನೀಡದೆ, ನಾಳೆ ಬನ್ನಿ ಎಂದು ಎಲ್ಲ ಮುಸ್ಲಿಂ ವ್ಯಾಪಾರಸ್ಥರನ್ನು ಮರಳಿ ಕಳುಹಿಸಿದ್ದಾರೆ. ಇದೀಗ ಎಲ್ಲ ಅಂಗಡಿಗಳನ್ನು ಹಿಂದೂ ವ್ಯಾಪಾರಸ್ಥರಿಗೆ ನೀಡಲಾಗಿದೆ. ಭಾನುವಾರವೇ ಜಾತ್ರೆ ಇರುವುದರಿಂದ ಮುಸ್ಲಿ ವ್ಯಾಪಾರಸ್ಥರಿಗೆ ಅವಕಾಶ ಇಲ್ಲದಂತಾಗಿದೆ” ಎಂದು ಹೇಳಿದರು.

”ಈ ಬಗ್ಗೆ ನಾವು ದೇವಸ್ಥಾನದ ಆಡಳಿತ ಮಂಡಳಿಯವರನ್ನು ಪ್ರಶ್ನೆ ಮಾಡಿದಾಗ ಅವರಿಗೆ ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ. ಹಾಗಾಗಿ ನಾವು ಈ ರೀತಿ ಮಾಡಬೇಕಾಯಿತು. ಒಂದು ವೇಳೆ ಅದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಗಲಾಟೆಗಳಾಗಿ ವ್ಯಾಪಾರಸ್ಥರಿಗೆ ತೊಂದರೆ ಆಗಬಾರದು ಎಂದು ನಾವು ಅನ್ಯಧರ್ಮಿಯರಿಗೆ ಅವಕಾಶ ನೀಡಲಿಲ್ಲ ಎಂದು ಹೇಳಿದರು. ಆ ಪತ್ರ ಬರೆದವರು ಯಾರು? ಆತ ಸರ್ಕಾರದ ಪ್ರತಿನಿಧಿಯೇ? ಇದು ಮುಜರಾಯಿ ಇಲಾಖೆಯ ದೇವಸ್ಥಾನವಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು” ಎಂದು ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

”ಈ ಬಗ್ಗೆ ನಾವು ಈಗಾಗಲೇ ಮಹಾನಗರ ಪಾಲಿಕೆ. ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಹಾಗೂ ದೂರು ಕೊಟ್ಟಿದ್ದೇವೆ. ಆದರೆ, ಅವರುಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ನಾವು ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ. ಕಳೆದ 5 ವರ್ಷಗಳ ಹರಾಜು ಪಟ್ಟಿಯನ್ನು ನೋಡಿಕೊಂಡು ಅಲ್ಲಿ ಈ ಹಿಂದೆ ವ್ಯಾಪಾರ ಮಾಡಿದ್ದ ಮುಸ್ಲಿಂ ವ್ಯಾಪಾರಸ್ಥರಿಗೆ ಈ ಬಾರಿಯೂ ಅವಕಾಶ ನೀಡಬೇಕು. ಇಲ್ಲದಿದ್ದರೇ ನಾವು ಮತ್ತಷ್ಟು ಹೋರಾಟಗಳನ್ನು ಮಾಡುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

NOTE:

ಈ ಹಿಂದೆ ನಾವು ವರದಿಯಲ್ಲಿ ”ಸನಾತನ ಸಂಸ್ಥೆಯ ಪತ್ರಕ್ಕೆ ಹೆದರಿ, ಮುಸ್ಲಿಂ ವ್ಯಾಪಾರಸ್ಥರಿಗೆ ನಿರ್ಬಂಧ ಹೇರಿದ ದೇವಸ್ಥಾನದ ಆಡಳಿತ ಮಂಡಳಿ” ಎಂದು ತಲೆಬಹರ ನೀಡಿದ್ದೇವು.. ಆದರೆ ಇದೀಗ ಸನಾತನ ಸಂಸ್ಥೆಯು ತಾವು ಯಾವುದೇ ಪತ್ರ ಬರೆದಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

”ಮಂಗಳಾದೇವಿ ದೇವಸ್ಥಾನ ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ, ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ತರ ಸಂಘ(ರಿ) ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರವನ್ನು ಮಾಡಲು ಹಿಂದೂ ವ್ಯಾಪಾರಸ್ಥರಿಗೆ ಪ್ರಥಮ ಪ್ರಾಧಾನ್ಯತೆಯನ್ನು ನೀಡಬೇಕು ಎಂದು ದೇವಸ್ಥಾನ ಸಮಿತಿಗೆ ಮನವಿ ನೀಡಲಾಗಿತ್ತು. ಈ ವಿಷಯದಲ್ಲಿ ಸನಾತನ ಸಂಸ್ಥೆ ಯಾವುದೇ ಮನವಿಯನ್ನು ದೇವಸ್ಥಾನ ಸಮಿತಿಗೆ ನೀಡಿಲ್ಲ. ಈ ವಿಷಯದಲ್ಲಿ ತಪ್ಪಾಗಿ ಸನಾತನ ಸಂಸ್ಥೆಯ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಘಟನೆಗೂ ಸನಾತನ ಸಂಸ್ಥೆಗೂ ಯಾವುದೇ ಸಂಬಂಧ ಇರುವುದಿಲ್ಲ” ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಅವರಿಗೆ ಖುದ್ದಾಗಿ ಆಡಳಿತ ಮಂಡಳಿಯವರೇ ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ”ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ” ಎಂದವರು ಈಗ “ತಿಂದಿದ್ದು ಹೇಳಿದವರನ್ನು ಬಿಡುವುದಿಲ್ಲ” ಎಂದು ಬದಲಿಸಿದ್ದಾರೆಯೇ?: ಕಾಂಗ್ರೆಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. If such behaviours continue there will not be any difference between rowdies and commitee members. These things expected under BJP rules. But our state governed by Congress.

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...