Homeಮುಖಪುಟಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಯುವತಿ ಕೊಲೆಗೆ ಸಂಬಂಧಿಸಿದಂತೆ 13 ಬಿಡಿಭಾಗಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಪಿಟಿಐ ವರದಿ ಮಾಡಿದೆ

- Advertisement -
- Advertisement -

ತನ್ನ ಸಂಗಾತಿಯನ್ನು ಕೊಂದ ಆರೋಪದಲ್ಲಿ ಬಂಧಿತನಾದ 28 ವರ್ಷದ ಅಫ್ತಾಬ್ ಅಮೀನ್ ಪೂನಾವಾಲಾನನ್ನು ದಕ್ಷಿಣ ದೆಹಲಿಯ ಛತ್ತರ್‌ಪುರದ ಅರಣ್ಯ ಪ್ರದೇಶಕ್ಕೆ ಪೊಲೀಸರು ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ತಾವು ಕೊಲೆ ಮಾಡಿದ ಶ್ರದ್ಧಾ ವಾಕರ್ ಅವರ ದೇಹದ ಭಾಗಗಳನ್ನು ಇಲ್ಲಿ ಎಸೆದಿದ್ದನು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ದೆಹಲಿ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿರುವ ವರದಿಯು, “ಅಫ್ತಾಬ್ ತಾನು ಬಿಡಿಭಾಗಗಳನ್ನು ಎಸೆದ ಪ್ರದೇಶಗಳನ್ನು ಗುರುತಿಸಿದ್ದಾನೆ. ನಂತರ ದೇಹದ 13 ಭಾಗಗಳು ಪತ್ತೆಯಾಗಿವೆ. ಆದರೆ ವಿಧಿವಿಜ್ಞಾನ ಪರೀಕ್ಷೆಯ ನಂತರವೇ, ಅವು ಕೊಲೆಯಾದ ಯುವತಿಗೆ ಸೇರಿದೆಯೇ ಎಂದು ದೃಢೀಕರಿಸಬಹುದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಅಫ್ತಾಬ್‌ನನ್ನು ಛತ್ತರ್‌ಪುರ ಪ್ರದೇಶವನ್ನು ಹೊರತುಪಡಿಸಿ ನವದೆಹಲಿಯ ಇತರ ಕೆಲವು ಸ್ಥಳಗಳಿಗೆ ಕರೆದೊಯ್ಯಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮೇ 18ರಂದು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಅಫ್ತಾಬ್‌ ಪೂನವಾಲ ತನ್ನ ಪ್ರೇಯಸಿ ಶ್ರದ್ಧಾ ವಾಲ್ಕರ್‌ ಅವರ ಕತ್ತುಸೀಳಿ ಕೊಂದಿದ್ದ. ಬಳಿಕ ಆಕೆಯ ದೇಹವನ್ನು ಸುಮಾರು 35 ಭಾಗಗಳಾಗಿ ಕತ್ತರಿಸಿ ಮೂರು ವಾರಗಳ ಕಾಲ ಫ್ರಿಡ್ಜ್‌ನಲ್ಲಿಟ್ಟು, ನಂತರ ನಗರದ ವಿವಿಧ ಪ್ರದೇಶಗಳಲ್ಲಿ ಒಂದೊಂದು ಭಾಗವನ್ನು ವಿಲೇವಾರಿ ಮಾಡಿದ್ದ.

ಇದುವರೆಗೆ ಪತ್ತೆಯಾಗಿರುವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅವೆಲ್ಲವೂ ಮಾನವ ಅವಶೇಷಗಳೇ ಎಂದು ಖಚಿತಪಡಿಸಿಕೊಳ್ಳಲಾಗಿದೆ. ತಲೆ ಇನ್ನೂ ಪತ್ತೆಯಾಗಿಲ್ಲ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕೊಲೆಗೆ ಬಳಸಲಾದ ಆಯುಧವನ್ನು ಪತ್ತೆಹಚ್ಚಲಾಗಿಲ್ಲ.

ಅಫ್ತಾಬ್ ಹದಿನೈದು ದಿನಗಳ ಹಿಂದೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈನಲ್ಲಿರುವ ಹೌಸಿಂಗ್ ಸೊಸೈಟಿಗೆ ಭೇಟಿ ನೀಡಿದ್ದನು. ಆತನ ಕುಟುಂಬ ಸದಸ್ಯರು ಮುಂಬೈಗೆ ತೆರಳಲು ಸಹಾಯ ಮಾಡಿದ್ದರು ಎಂದು ಸೊಸೈಟಿ ಸದಸ್ಯರೊಬ್ಬರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಆರೋಪಿ ಅಫ್ತಾಬ್‌‌ ಭೇಟಿ ಮಾಡಿದ ಯುವತಿಯ ವಿವರಗಳನ್ನು ಕಂಡುಹಿಡಿಯಲು ದೆಹಲಿ ಪೊಲೀಸರು ಡೇಟಿಂಗ್ ಆ್ಯಪ್ ಬಂಬಲ್‌ಗೆ ಪತ್ರ ಬರೆಯುವ ಸಾಧ್ಯತೆಯಿದೆ. ಈ ಡೇಟಿಂಗ್ ಆಪ್‌ನಲ್ಲಿ ಶ್ರದ್ಧಾ ಅವರನ್ನು ಅಫ್ತಾಬ್ ಭೇಟಿಯಾಗಿದ್ದನು. ಬಂಬಲ್‌ನ ಪ್ರಧಾನ ಕಛೇರಿಯು ಅಮೆರಿಕಾದ ಟೆಕ್ಸಾಸ್‌ನಲ್ಲಿದೆ.

ಶ್ರದ್ಧಾಳ ತಂದೆ ವಿಕಾಸ್ ವಾಕರ್ ಪ್ರತಿಕ್ರಿಯಿಸಿ, “ಆರೋಪಿಗೆ ಮರಣದಂಡನೆ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ. ಈ ಜೊತೆಯ ಬೆನ್ನಲ್ಲೇ ಲವ್‌ ಜಿಹಾದ್‌ ಚರ್ಚೆ ನಡೆಯುತ್ತಿದೆ.

ಜಗಳದ ನಂತರ ತನ್ನ ಪ್ರಿಯತಮೆ ಶ್ರದ್ಧಾಳನ್ನು ಕೊಂದಿರುವುದಾಗಿ ಮತ್ತು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸುವ ಆಲೋಚನೆಯನ್ನು ಅಮೇರಿಕನ್ ಕ್ರೈಮ್ ಟಿವಿ ಸರಣಿಯಾದ ‘ಡೆಕ್ಸ್ಟರ್’ನಿಂದ ಬೆಳೆಸಿಕೊಂಡಿದ್ದಾಗಿ ಪೂನಾವಾಲಾ ತನಿಖೆಯ ಸಮಯದಲ್ಲಿ ಪೊಲೀಸರಿಗೆ ತಿಳಿಸಿದ್ದಾನೆ.

ಪ್ರೇಯಸಿಯ ದೇಹದ ಬಿಡಿಭಾಗಗಳನ್ನು ಸಂರಕ್ಷಿಸಲು ಫ್ರಿಜ್ ಖರೀದಿಸಿದ್ದನು. ಅವುಗಳನ್ನು ವಿಲೇವಾರಿ ಮಾಡಲು ಮಧ್ಯರಾತ್ರಿಯ ನಂತರ ಹೊರಗೆ ಹೋಗುತ್ತಿದ್ದನು. ಯಾವ ಭಾಗವು ಬೇಗನೆ ಕೊಳೆಯಲು ಪ್ರಾರಂಭಿಸುತ್ತದೆ ಎಂಬುದರ ಆಧಾರದ ಮೇಲೆ ಆರೋಪಿಯು ಯಾವುದನ್ನು ಮೊದಲು ವಿಲೇವಾರಿ ಮಾಡಬೇಕೆಂದು ನಿರ್ಧರಿಸುತ್ತಿದ್ದನು ಎಂದು ಪೊಲೀಸರು ವಿವರಿಸಿದ್ದಾರೆ.

ಪೂನಾವಾಲಾ ಜೊತೆಗಿನ ಸಂಬಂಧದ ಬಗ್ಗೆ ಭಿನ್ನಾಭಿಪ್ರಾಯ ಇದ್ದಿದ್ದರಿಂದ ಯುವತಿಯು ತನ್ನ ಕುಟುಂಬದೊಂದಿಗೆ ಮಾತುಕತೆ ನಡೆಸಿರಲಿಲ್ಲ.

ಮೇ 18 ರಂದು, ಆರೋಪಿ ಮತ್ತು ಯುವತಿಯ ನಡುವೆ ಜಗಳವಾಗಿತ್ತು. ಯುವತಿಯು ಕೂಗುತ್ತಿದ್ದರಿಂದ ಅಫ್ತಾಬ್ ತನ್ನ ಕೈಯಿಂದ ಆಕೆಯ ಬಾಯಿಯನ್ನು ಮುಚ್ಚಿದನು. ನಂತರ ಆಕೆಯ ಕತ್ತು ಹಿಸುಕಿ, ದೇಹವನ್ನು ಭಾಗಗಳಾಗಿ ಕತ್ತರಿಸಿ ಹತ್ತಿರದ ಕಾಡಿನಲ್ಲಿ ವಿಲೇವಾರಿ ಮಾಡಲಾರಂಭಿಸಿದನು ಎಂದು ದೆಹಲಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೂನಾವಾಲಾನನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಶ್ರದ್ಧಾಳ ನೆನಪಿಗಾಗಿ ಫ್ರಿಡ್ಜ್‌ನಲ್ಲಿ ದೇಹವಿರಿಸಿದ್ದೆ: ಅಫ್ತಾಬ್

“ಕೊಲೆ ಮಾಡಿದ ನಂತರ ಯುವತಿಯ ತಲೆಯನ್ನು ರೆಫ್ರಿಜರೇಟರ್‌ನಲ್ಲಿ ಇರಿಸಿದ್ದೆನು. ಆಕೆ ಮತ್ತು ನನ್ನ ನಡುವಿನ ಸಂಬಂಧದ ನೆನಪಿಗಾಗಿ ಆ ದೇಹವನ್ನು ಆಗಾಗ್ಗೆ ನೋಡುತ್ತಿದ್ದೆ. ಆ ನಂತರದ ದಿನಗಳಲ್ಲಿ ಆಕೆಯ ತಲೆಯನ್ನು ಹೊರಗೆ ಎಸೆದಿದ್ದೇನೆ” ಎಂದು ಆರೋಪಿ ಅಫ್ತಾಬ್‌ ಪೊಲೀಸರಿಗೆ ತಿಳಿಸಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಇದನ್ನೂ ಓದಿರಿ: ಊನಾ ಪ್ರಕರಣದ ಆರೋಪಿಗಳಿಂದ ದಲಿತ ಸಂತ್ರಸ್ತರಿಗೆ ಜೀವ ಬೆದರಿಕೆ; ಎಫ್‌ಐಆರ್‌

ತಲೆ ಪತ್ತೆಯಾದ ನಂತರ, ಪೊಲೀಸರು ಸ್ಕಲ್ ಸೂಪರ್‌ಇಂಪೊಸಿಷನ್ ತಂತ್ರಜ್ಞಾನವನ್ನು ಬಳಸಿಕೊಂಡು ಸಂತ್ರಸ್ತೆಯ ಗುರುತನ್ನು ಪತ್ತೆಹಚ್ಚಲಿದ್ದಾರೆ. ಸದ್ಯಕ್ಕೆ ಅವರ ಏಕೈಕ ಭರವಸೆ ಎಂದರೆ ವಾಕರ್ ಅವರ ತಂದೆಯೊಂದಿಗೆ, ಈಗ ದೊರೆತಿರುವ ಕೆಲವು ಬಿಡಿಭಾಗಗಳ ಡಿಎನ್‌ಎ ಹೊಂದಾಣಿಕೆಯಾಗಿದೆ.

ಯುವತಿಯ ದೇಹದ ಭಾಗಗಳನ್ನು ಕತ್ತರಿಸುವಾಗ, ಸಂಗ್ರಹಿಸುವಾಗ ಮತ್ತು ವಿಲೇವಾರಿ ಮಾಡುವಾಗ ಆರ್ಥೋಬೊರಿಕ್ ಆಸಿಡ್ (ಬೋರಿಕ್ ಪೌಡರ್), ಫಾರ್ಮಾಲ್ಡಿಹೈಡ್, ಸಲ್ಫ್ಯೂರಿಕ್ ಆಸಿಡ್ ಮತ್ತು ಇತರ ಕೆಲವು ರಾಸಾಯನಿಕಗಳನ್ನು ಪೂನಾವಾಲಾ ಬಳಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಉಲ್ಲೇಖಿಸಿದೆ.

ಕೊಲೆಯಾಗಿ ಆರು ತಿಂಗಳುಗಳು ಕಳೆದಿರುವುದರಿಂದ, ಕೊಲೆಯನ್ನು ದೃಢೀಕರಿಸಲು ಪೊಲೀಸರು ವಿಧಿವಿಜ್ಞಾನವನ್ನು ಅವಲಂಬಿಸಬೇಕಾಗುತ್ತದೆ. ಆರೋಪಿಯು ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ತನ್ನ ಉತ್ತರಗಳನ್ನು ಆಗಾಗ್ಗೆ ಬದಲಾಯಿಸುತ್ತಿದ್ದಾನೆ ಮತ್ತು ಅನೇಕ ವಿವರಗಳನ್ನು ಮರೆತಿರುವುದಾಗಿ ಆತ ಹೇಳುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...