Homeಮುಖಪುಟಹಿಂಸಾಚಾರದ ಮಧ್ಯೆಯೇ 23 ವರ್ಷಗಳ ಬಳಿಕ ಮಣಿಪುರದಲ್ಲಿ ಹಿಂದಿ ಸಿನಿಮಾ ಪ್ರಸಾರ

ಹಿಂಸಾಚಾರದ ಮಧ್ಯೆಯೇ 23 ವರ್ಷಗಳ ಬಳಿಕ ಮಣಿಪುರದಲ್ಲಿ ಹಿಂದಿ ಸಿನಿಮಾ ಪ್ರಸಾರ

- Advertisement -
- Advertisement -

ಮಣಿಪುರವು ಜನಾಂಗೀಯ ದ್ವೇಷದ ಜ್ವಾಲೆಯಲ್ಲಿ ಬೇಯುತ್ತಿದೆ. ಇಂತಹ ಈ ಸಂದರ್ಭದಲ್ಲಿ ಒಂದು ಜನಾಂಗ ನಿಷೇಧ ಹೇರಿದ್ದ ಹಿಂದಿ ಸಿನಿಮಾವನ್ನು ಇನ್ನೊಂದು ಜನಾಂಗದವರು ಪ್ರದರ್ಶಿಸಿದ್ದಾರೆ. ಮಣಿಪುರದಲ್ಲಿ ಸುಮಾರು 23 ವರ್ಷಗಳ ಬಳಿಕ ಹಿಂದಿ ಸಿನಿಮಾವೊಂದು ಪ್ರದರ್ಶನ ಕಂಡಿದೆ.

ಮೈತಿ ಸಮುದಾಯದವರು ಮಣಿಪುರದಲ್ಲಿ ಹಿಂದಿ ಸಿನಿಮಾಗೆ ನಿಷೇಧ ಹೇರಿದ್ದರು. ಆದರೆ ಇದೀಗ ಕುಕಿ ಸಮುದಾಯದವರು ‘ಉರಿ: ದಿ ಸರ್ಜಿಕಲ್ ಸ್ಟೈಕ್’ ಸಿನಿಮಾವನ್ನು ಚುರ್ಚಾಂದಪುರದ ರೆಂಗ್‌ ಎಂಬಲ್ಲಿ ತೆರೆದ ಸಿನಿಮಾ ಮಂದಿರದಲ್ಲಿ ಪ್ರದರ್ಶಿಸಿದ್ದಾರೆ. ಚಿತ್ರ ವೀಕ್ಷಣೆಗೆ ದೊಡ್ಡ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು.

ಮಣಿಪುರದಲ್ಲಿ ಹಿಂದಿ ಸಿನಿಮಾ ಪ್ರದರ್ಶನಕ್ಕೆ ಮೈತಿ ಹಾಗೂ ನಾಗಗಳ ಸಂಘಟನೆಯಾದ ‘ರೆವೆಲ್ಯೂಷನರಿ ಪೀಪಲ್ಸ್ ಫ್ರೆಂಟ್’ ನಿಷೇಧ ಹೇರಿತ್ತು. ಹಿಂದಿ ಸಿನಿಮಾ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ 2000ನೇ ಇಸವಿಯ ಸೆಪ್ಟೆಂಬರ್‌ನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಕುಕಿ ಸಮುದಾಯದ ಸಂಘಟನೆಯಾದ ‘ಮಾರ್ ವಿದ್ಯಾರ್ಥಿ ಒಕ್ಕೂಟ’ವು ಮಂಗಳವಾರ ಸಿನಿಮಾ ಪ್ರದರ್ಶನವನ್ನು ಆಯೋಜಿಸಿತ್ತು. 23ವರ್ಷಗಳ ಹಿಂದೆ ರೆವೆಲ್ಯೂಷನರಿ ಪೀಪಲ್ಸ್ ಫ್ರೆಂಟ್ ತೆಗೆದುಕೊಂಡ ನಿರ್ಧಾರಕ್ಕೆ ವಿರುದ್ಧವಾಗಿ ಈ ಸಿನಿಮಾ ಪ್ರದರ್ಶನ ಏರ್ಪಡಿಸಲಾಗಿತ್ತು.

ಈ ಬಗ್ಗೆ ಕುಕಿ ಜನಾಂಗದ ಬೆಂಬಲಿತ ಸಂಘಟನೆ ‘ಇಂಡಿಜೀನಿಯಸ್ ಟ್ರೈಬಲ್ ಲೀಸರ್ಡ್ ಫೋರಂ’ನ ವಕ್ತಾರ ಗಿಂಜಾ ವುಲಾಜೋಂಗ್ ಮಾತನಾಡಿದ್ದು, ”ನಮ್ಮಊರಿನಲ್ಲಿ ಹಿಂದಿ ಸಿನಿಮಾ ಪ್ರದರ್ಶನವಾಗಿ ಎರಡು ದಶಕಗಳು ಕಳೆದಿದ್ದವು. ಸುಮಾರು ವರ್ಷಗಳಿಂದ ಮೈತಿಗಳು ಹಿಂದಿ ಸಿನಿಮಾಗೆ ನಿಷೇಧ ಹೇರಿದ್ದರು. ಮೈತೇಯಿ ಗುಂಪುಗಳ ದೇಶ ವಿರೋಧಿ ನೀತಿಗಳನ್ನು ಧಿಕ್ಕರಿಸುವ ಹಾಗೂ ದೇಶದ ಮೇಲೆ ನಮ್ಮ ಪ್ರೀತಿಯನ್ನು ತೋರಿಸುವ ಸಲುವಾಗಿ ಸಿನಿಮಾ ಪ್ರದರ್ಶನ ಮಾಡಿದ್ದೇವೆ” ಎಂದು ಹೇಳಿದ್ದಾರೆ.

ರಾಜ್ಯ ರಾಜಧಾನಿ ಇಂಫಾಲದಿಂದ 63 ಕಿ.ಮೀ. ದೂರದಲ್ಲಿ ಈ ಘಟನೆ ನಡೆದಿದ್ದು, ಸಿನಿಮಾ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಹಾಡಲಾಯಿತು.

ಮಣಿಪುರದಲ್ಲಿ ಮೇ 3 ರಿಂದ ಆರಂಭವಾದ ಜನಾಂಗೀಯ ಸಂಘರ್ಷದಲ್ಲಿ ಈವರೆಗೂ 180ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. 60 ಸಾವಿರಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಮಣಿಪುರ, ಹರಿಯಾಣದಂತೆ ದೇಶದೆಲ್ಲೆಡೆ ಸಂಘರ್ಷ ಮುಂದುವರಿದರೆ ಭಾರತ ಹೇಗೆ ವಿಶ್ವಗುರುವಾಗುತ್ತದೆ?: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...