Homeಕರೋನಾ ತಲ್ಲಣ3 ತಿಂಗಳ ನಂತರ, ದಿನಕ್ಕೆ ಕಡಿಮೆ ಪ್ರಕರಣಗಳನ್ನು ವರದಿ ಮಾಡಿದ ಮುಂಬೈ.

3 ತಿಂಗಳ ನಂತರ, ದಿನಕ್ಕೆ ಕಡಿಮೆ ಪ್ರಕರಣಗಳನ್ನು ವರದಿ ಮಾಡಿದ ಮುಂಬೈ.

ದೇಶದ ಹಣಕಾಸು ರಾಜಧಾನಿಯಾದ ಮುಂಬೈ, ಭಾನುವಾರ ನಡೆಸಿದ ಪರೀಕ್ಷೆಗಳಿಂದ 1,033 ಕೊರೊನಾ ಪ್ರಕರಣಗಳನ್ನು ಸೋಮವಾರ ವರದಿ ಮಾಡಿದೆ.

- Advertisement -
- Advertisement -

ಕೊರೊನಾ ವೈರಸ್‌ನಿಂದ ತೀವ್ರ ಕೆಟ್ಟ ಹೊಡೆತ ಅನುಭವಿಸಿದ್ದ ಮುಂಬೈನಲ್ಲಿ ಸೋಮವಾರ ನಡೆಸಿದ 8,776 ಕೊರೊನಾ ವೈರಸ್‌ ಪರೀಕ್ಷೆಗಳ ಫಲಿತಾಂಶ ಹೊರಬಿದಿದ್ದು ಅದರಲ್ಲಿ ಸುಮಾರು 700 ಮಾದರಿಗಳು ಮಾತ್ರ ಪಾಸಿಟಿವ್ ಆಗಿದೆ. ಇದು ಕಳೆದ 100 ದಿನಗಳಲ್ಲಿ ಅತ್ಯಂತ ಕಡಿಮೆ ಪ್ರಕರಣ ದಾಖಲು ಮಾಡಿದ ದಿನವಾಗಿದೆ.

ದೇಶದ ಹಣಕಾಸು ರಾಜಧಾನಿಯಾದ ಮುಂಬೈ, ಭಾನುವಾರ ನಡೆಸಿದ ಪರೀಕ್ಷೆಗಳಿಂದ 1,033 ಕೊರೊನಾ ಪ್ರಕರಣಗಳನ್ನು ವರದಿ ಮಾಡಿತ್ತು. ಪ್ರಕರಣಗಳು ದ್ವಿಗುಣವಾಗಲು ಈಗ 68 ದಿನಗಳನ್ನು ತೆಗೆದುಕೊಳ್ಳುತ್ತಿದ್ದು, ಮುಂಬೈನ ಚೇತರಿಕೆ ಪ್ರಮಾಣವು ಶೇಕಡಾ 73 ರಷ್ಟಿದೆ. ಜುಲೈ 20 ರಿಂದ ಜುಲೈ 26 ರವರೆಗೆ ಮುಂಬೈನಲ್ಲಿನ ಕೊರೊನಾವೈರಸ್ ಪ್ರಕರಣಗಳ ಒಟ್ಟಾರೆ ಬೆಳವಣಿಗೆಯ ದರವು ಶೇಕಡಾ 1.03 ರಷ್ಟಿತ್ತು ಎನ್ನಲಾಗಿದೆ.

ಸೋಮವಾರ, ಇಡೀ ಮಹಾರಾಷ್ಟ್ರದಲ್ಲಿ 7,924 ಪ್ರಕರಣಗಳು ಮತ್ತು 227 ಸಾವುಗಳು ದಾಖಲಾಗಿವೆ. ಮುಂಬೈಯಲ್ಲಿ ಇದುವರೆಗೆ 6,132 ಸಾವುಗಳು ಸಂಭವಿಸಿವೆ.

“ಮುಂಬೈನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಪರೀಕ್ಷೆ ನಡೆಸಿ (8,776) ಕೇವಲ 700 ಪ್ರಕರಣಗಳು ದಾಖಲಾಗಿವೆ. ಇದರಿಂದ ವೈರಸ್ ಅನ್ನು ಪೂರ್ಣ ಪ್ರಮಾಣದಲ್ಲಿ ಹಿಮ್ಮೆಟ್ಟಿಸಲು ಸಾಧ್ಯವಾಗಿದೆ. 3 ತಿಂಗಳ ನಂತರ ಒಂದು ದೊಡ್ಡ ಸಮಾಧಾನ ಸಿಕ್ಕಂತಾಗಿದೆ. ನಿಮ್ಮ ಮಾಸ್ಕ್ ಅನ್ನು ಮುಖದಿಂದ ಕೆಳಗೆ ಇಳಿಸಬೇಡಿ! ಸಂಖ್ಯೆಗಳನ್ನು ಮಾತ್ರ ಇಳಿಸಿ!” ಎಂದು ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆ ಟ್ವೀಟ್‌ ಮಾಡಿದ್ದಾರೆ.

ಮುಂಬೈನಲ್ಲಿ ಒಟ್ಟು 1,10,182 ಪ್ರಕರಣಗಳಿದ್ದು, ಈ ಪೈಕಿ 21,812 ಪ್ರಕರಣಗಳು ಮಾತ್ರ ಸಕ್ರಿಯ ಪ್ರಕರಣಗಳಾಗಿವೆ. ನೆರೆಯ ಥಾಣೆಯಲ್ಲಿ 34,471 ಸಕ್ರಿಯ ಪ್ರಕರಣಗಳು ಮತ್ತು ಪುಣೆಯಲ್ಲಿ 48,672 ಸಕ್ರಿಯ ಪ್ರಕರಣಗಳಿವೆ.

ಆದಾಗ್ಯೂ, ಅಧಿಕಾರಿಗಳು ಎರಡನೇ ಅಲೆಗೆ ಹೆದರುತ್ತಿದ್ದಾರೆ. ಲಸಿಕೆ ಬರಲು ಇನ್ನೂ ಸ್ವಲ್ಪ ಸಮಯವಿದೆ ಎಂದು ಹೇಳುತ್ತಿರುವುದರಿಂದ ಬಹಳ ಎಚ್ಚರಿಕೆಯಿಂದಿದ್ದಾರೆ.

ಮುಂಬೈನಲ್ಲಿರುವ ಧಾರವಿ ಏಷ್ಯಾದ ಅತಿದೊಡ್ಡ ಸ್ಲಂ ಆಗಿದ್ದು ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಪ್ರದೇಶದಲ್ಲಿ ಈಗ 98 ಸಕ್ರಿಯ ಪ್ರಕರಣಗಳಿವೆ. ಸೋಮವಾರ ಕೇವಲ ಒಂಬತ್ತು ಹೊಸ ಪ್ರಕರಣಗಳು ವರದಿಯಾಗಿವೆ. ಧಾರವಿ ಯಲ್ಲಿ ಒಟ್ಟು 2,540 ಪ್ರಕರಣಗಳು ವರದಿಯಾಗಿವೆ.


ಇದನ್ನೂ ಓದಿ: ಉತ್ತರ ಪ್ರದೇಶದ ಕೊರೊನಾ ರೋಗಿಯ ವೀಡಿಯೋ: ಆತನ ಸಾವಿನ ನಂತರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...