Homeಮುಖಪುಟ4 ವರ್ಷಗಳ ಬಳಿಕ ಜೆಎನ್‌ಯುನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

4 ವರ್ಷಗಳ ಬಳಿಕ ಜೆಎನ್‌ಯುನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

- Advertisement -
- Advertisement -

ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆ ಮಾರ್ಚ್ 22ರಂದು ನಡೆಯಲಿದ್ದು, ಫಲಿತಾಂಶ ಮಾರ್ಚ್ 24ರಂದು ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಮೂಲಗಳು ತಿಳಿಸಿದೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಜೆಎನ್‌ಯುಎಸ್‌ಯು) ಚುನಾವಣೆಗಳು ಕೊನೆಯದಾಗಿ 2019ರಲ್ಲಿ ನಡೆದಿದೆ, ಆ ಬಳಿಕ ಕಳೆದ 4 ವರ್ಷಗಳಿಂದ ಚುನಾವಣೆ ನಡೆದಿರಲಿಲ್ಲ.

ಚುನಾವಣೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಹೊಂದಿರುವ ಜೆಎನ್‌ಯುನ ಚುನಾವಣಾ ಸಮಿತಿಯು ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ತಾತ್ಕಾಲಿಕ ಮತದಾರರ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಲಾಗುತ್ತದೆ ಮತ್ತು ಮಂಗಳವಾರದವರೆಗೆ ತಿದ್ದುಪಡಿಗೆ ಮುಕ್ತವಾಗಿರುತ್ತದೆ.

ಚುನಾವಣೆಗೆ ಮಾರ್ಚ್ 14ರಿಂದ ವಿದ್ಯಾರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದು ಮತ್ತು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮಾರ್ಚ್ 16ರಂದು ಪ್ರಕಟಿಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಮಾರ್ಚ್ 20ರಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸಭೆ (UGBM) ನಡೆಯಲಿದೆ, ನಂತರ ಅಭ್ಯರ್ಥಿಗಳು ಇತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣವನ್ನು ಮಾಡಲಿದ್ದಾರೆ. ಮಾರ್ಚ್ 22ರಂದು ಮತದಾನ ನಡೆಯಲಿದ್ದು, ಮಾರ್ಚ್ 24ರಂದು ಮತ ಎಣಿಕೆ ನಡೆಯಲಿದೆ, ನಂತರ ಫಲಿತಾಂಶ ಪ್ರಕಟವಾಗಲಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಜನವರಿಯಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು) ಅಧಿಸೂಚನೆ ಹೊರಡಿಸಿ ಕಳೆದ ನಾಲ್ಕು ವರ್ಷಗಳಿಂದ ಬಾಕಿ ಉಳಿದಿರುವ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಎಂಟು ವಾರಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿತ್ತು. ವಿಶ್ವವಿದ್ಯಾನಿಲಯದ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಜೆಎನ್‌ಯು ವಿದ್ಯಾರ್ಥಿ ಸಂಘ ಬೆದರಿಕೆ ಹಾಕಿದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿತ್ತು. ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟ (ಜೆಎನ್‌ಯುಎಸ್‌ಯು) 2019ರಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳಾದ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ), ಆಲ್ ಇಂಡಿಯಾ ಸ್ಟೂಡೆಂಟ್ಸ್ ಫೆಡರೇಶನ್ (ಎಐಎಸ್‌ಎಫ್) ಮತ್ತು ಎಐಎಸ್‌ಎಫ್‌ನ ನೇತೃತ್ವದ ಮೈತ್ರಿ ಅಭ್ಯರ್ಥಿ ಐಶೆ ಘೋಷ್ ಗೆಲುವನ್ನು ಕಂಡಿದ್ದರು.

ಇದನ್ನು ಓದಿ: ನಾಳೆಯೊಳಗೆ ಚುನಾವಣಾ ಬಾಂಡ್ ಕುರಿತ ಮಾಹಿತಿ ನೀಡಿ: ಎಸ್‌ಬಿಐಗೆ ಸುಪ್ರೀಂಕೋರ್ಟ್ ಖಡಕ್‌ ಆದೇಶ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read