Homeಮುಖಪುಟಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

- Advertisement -
- Advertisement -

ಅಲಹಾಬಾದ್ ಮತ್ತು ಫೈಜಾಬಾದ್‌ ಬಳಿಕ ಇದೀಗ ಉತ್ತರ ಪ್ರದೇಶದ ಮತ್ತೊಂದು ಪ್ರಮುಖ ನಗರದ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಗಿದೆ. ಅಲಿಘರ್ ಮುನ್ಸಿಪಲ್ ಕಾರ್ಪೊರೇಷನ್ ನಗರದ ಹೆಸರನ್ನು ಹರಿಘರ್ ಎಂದು ಬದಲಾಯಿಸುವ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.

ನಿನ್ನೆ ನಡೆದ ಸಭೆಯಲ್ಲಿ ಮೇಯರ್ ಪ್ರಶಾಂತ್ ಸಿಂಘಾಲ್ ಪ್ರಸ್ತಾವನೆ ಸಲ್ಲಿಸಿದ್ದು, ಎಲ್ಲಾ ಕೌನ್ಸಿಲರ್‌ಗಳು ಪ್ರಸ್ತಾವನೆಗೆ ಬೆಂಬಲಿಸಿದ್ದಾರೆ. ಈ ಪ್ರಸ್ತಾವನೆಗೆ ಉತ್ತರಪ್ರದೇಶ ಸರ್ಕಾರ ಅನುಮೋದನೆ ನೀಡಿದರೆ ಯೋಗಿ ಆಡಳಿತದಲ್ಲಿ ಹೆಸರು ಬದಲಾವಣೆಗೊಂಡ ಮೂರನೇ ನಗರ ಇದಾಗಲಿದೆ. ಜನವರಿ 2019ರಲ್ಲಿ ಅಲಹಾಬಾದ್‌ ಹೆಸರನ್ನು ಪ್ರಯಾಗರಾಜ್‌ ಎಂದು ಬದಲಿಸಲಾಗಿತ್ತು.

ಅಲಿಘರ್ ಮೇಯರ್ ಪ್ರಶಾಂತ್ ಸಿಂಘಾಲ್ ಈ ಬಗ್ಗೆ ಮಾತನಾಡುತ್ತಾ, ನಿನ್ನೆ ನಡೆದ ಸಭೆಯಲ್ಲಿ ಅಲಿಘರ್ ಹೆಸರನ್ನು ಹರಿಘರ್ ಎಂದು ಬದಲಾಯಿಸುವ ಪ್ರಸ್ತಾವನೆಯನ್ನು ಮಂಡಿಸಲಾಯಿತು. ಎಲ್ಲಾ ಕೌನ್ಸಿಲರ್‌ಗಳು ಇದನ್ನು ಸರ್ವಾನುಮತದಿಂದ ಬೆಂಬಲಿಸಿದರು. ಈಗ ಈ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಲಾಗುವುದು. ಸರಕಾರವು ಇದರ ಬಗ್ಗೆ ಗಮನಹರಿಸಿ ನಮ್ಮ ಬೇಡಿಕೆಯನ್ನು ಈಡೇರಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಅಲಿಗಢದ ಹೆಸರನ್ನು ಹರಿಗಢ ಎಂದು ಬದಲಾಯಿಸಲು ಬಹಳ ಸಮಯದಿಂದ ಬೇಡಿಕೆ ಬಂದಿತ್ತು ಎಂದು  ಹೇಳಿದ್ದಾರೆ.
ರಾಜ್ಯ ಸರ್ಕಾರವು ರಾಜ್ಯದೊಳಗಿನ ಯಾವುದೇ ನಗರ ಅಥವಾ ಗ್ರಾಮೀಣ ಪ್ರದೇಶದ ಹೆಸರನ್ನು ಬದಲಾಯಿಸಬಹುದು. ಹೆಸರು ಬದಲಾವಣೆಯ ನಿರ್ಣಯವನ್ನು ಸ್ಥಳೀಯ ಆಡಳಿತ ಸರ್ವಾನುಮತದಿಂದ ಅನುಮೋದಿಸಿದ ನಂತರ ಅದನ್ನು ರಾಜ್ಯ ಸರ್ಕಾರದ ಮುಂದಿಡಲಾಗುತ್ತದೆ. ನಂತರ ನಿರ್ಣಯವನ್ನು ರಾಜ್ಯ ಸರ್ಕಾರವು ಅನುಮೋದನೆಗಾಗಿ ಗೃಹ ಸಚಿವಾಲಯಕ್ಕೆ ಕಳುಹಿಸುತ್ತದೆ. ಸಚಿವಾಲಯ ಮತ್ತು ಇತರ ಸಂಬಂಧಿತ ಇಲಾಖೆಗಳು ನಿರ್ಣಯವನ್ನು ಅನುಮೋದಿಸಿದರೆ,  ರಾಜ್ಯ ಸರ್ಕಾರವು ಅಧಿಕೃತವಾಗಿ ಹೆಸರನ್ನು ಬದಲಾಯಿಸಬಹುದು.
ಈ ಹಿಂದೆ 2021ರಲ್ಲಿ ಆಗಿನ ಜಿಲ್ಲಾ ಪಂಚಾಯತ್‌ ಕೂಡ ಆಲಿಘರ್‌ ಹೆಸರನ್ನು ಹರಿಘರ್‌ ಎಂದು ಬದಲಾಯಿಸಬೇಕೆಂಬ ಪ್ರಸ್ತಾವನೆ ಸಲ್ಲಿಸಿತ್ತು. 2017ರಲ್ಲಿ ಆದಿತ್ಯನಾಥ್‌ ಸರ್ಕಾರ ರಚನೆ ಬಳಿಕ ಪೂರ್ವಾಂಚಲ್‌ ಎಕ್ಸ್‌ಪ್ರೆಸ್‌ವೇ ಸಹಿತ ಹಲವು ಯೋಜನೆಗಳ ಹೆಸರು ಬದಲಾಯಿಸಿದೆ. ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರದ ಅವಧಿಯಲ್ಲಿದ್ದ ಸಮಾಜವಾದಿ ಅಂಬುಲೆನ್ಸ್‌ ಸ್ವಾಸ್ಥ್ಯ ಸೇವಾ ಅಂಬುಲೆನ್ಸ್‌ ಸೇವೆಯ ಹೆಸರಿನಲ್ಲಿನ ಸಮಾಜವಾದಿ ಪದವನ್ನು ಈಗಿನ ಸರ್ಕಾರ ತೆಗೆದು ಹಾಕಿದೆ.
ನಮಗೆ ಒಳ್ಳೆಯದೆಂದು ಅನಿಸಿದ್ದನ್ನು ಮಾಡಿದ್ದೇವೆ. ನಾವು ಮೊಘಲ್ ಸರಾಯ್‌ನ್ನು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ನಗರ ಎಂದು ಮರುನಾಮಕರಣ ಮಾಡಿದ್ದೇವೆ. ಅಲಹಾಬಾದ್‌ನ್ನು ಪ್ರಯಾಗ್‌ರಾಜ್‌ ಎಂದು ಮತ್ತು ಫೈಜಾಬಾದ್ ಜಿಲ್ಲೆಯನ್ನು ಅಯೋಧ್ಯೆ ಜಿಲ್ಲೆ ಎಂದು ಮರುನಾಮಕರಣ ಮಾಡಿದ್ದೇವೆ. ಅಗತ್ಯವಿರುವಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಯೋಗಿ ಆದಿತ್ಯನಾಥ್ ಈ ಮೊದಲು ಹೇಳಿದ್ದರು.
ಇದನ್ನು ಓದಿ: ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...