Homeಮುಖಪುಟಅಯೋಧ್ಯೆ ಬಳಿಕ ಬದ್ರಿನಾಥದಲ್ಲೂ ಬಿಜೆಪಿಗೆ ಸೋಲು

ಅಯೋಧ್ಯೆ ಬಳಿಕ ಬದ್ರಿನಾಥದಲ್ಲೂ ಬಿಜೆಪಿಗೆ ಸೋಲು

- Advertisement -
- Advertisement -

ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಇಂದು (ಜು 13) ನಡೆಯಿತು. ಈ ಸುದ್ದಿ ಬರೆಯುವ ಹೊತ್ತಿಗೆ (4:30 pm)ಇಂಡಿಯಾ ಮೈತ್ರಿಕೂಟದ ಪಕ್ಷಗಳ ಅಭ್ಯರ್ಥಿಗಳು 8 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು ಮತ್ತು 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರು.

ಇಂದಿನ ಫಲಿತಾಂಶದಲ್ಲಿ ಉತ್ತರಾಖಂಡದ ಬದ್ರಿನಾಥ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿರುವುದು ಗಮನ ಸೆಳೆದಿದೆ. ಬದ್ರಿನಾಥದಲ್ಲಿ ಕಾಂಗ್ರೆಸ್‌ನ ಲಖಪತ್ ಸಿಂಗ್ ಬುಟೋಲಾ ಅವರು ಬಿಜೆಪಿ ಅಭ್ಯರ್ಥಿ ರಾಜೇಂದ್ರ ಸಿಂಗ್ ಭಂಡಾರಿ ವಿರುದ್ದ 5, 224 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಜುಲೈ 10ರಂದು ಬದ್ರಿನಾಥ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಒಟ್ಟು 54, 228 ಮತದಾರರ ಪೈಕಿ 28,161 ಮತಗಳು ಕಾಂಗ್ರೆಸ್‌ ಅಭ್ಯರ್ಥಿ ಪಡೆದಿದ್ದು, 22,937 ಮತಗಳು ಬಿಜೆಪಿ ಅಭ್ಯರ್ಥಿ ಪರ ಬಿದ್ದಿವೆ.

ಬಿಜೆಪಿ ಅಭ್ಯರ್ಥಿ ಭಂಡಾರಿ ಅವರು 2022ರಲ್ಲಿ ಪಡೆದಿರುವುದಕ್ಕಿಂತ 10,000 ಕಡಿಮೆ ಮತಗಳನ್ನು ಈ ಬಾರಿ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ನವಲ್ ಕಿಶೋಲ್ ಖಾಲಿ 1, 813 ಮತ್ತು ಸೈನಿಕ್ ಸಮಾಜ್ ಪಕ್ಷದ ಹಿಮ್ಮತ್ ಸಿಂಗ್ 494 ಮತಗಳನ್ನು ಪಡೆದಿದ್ದಾರೆ.

ಅಯೋಧ್ಯೆ ಬಳಿಕ ಬದ್ರಿನಾಥದಲ್ಲೂ ಬಿಜೆಪಿ ಸೋಲು

ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆ ರಾಮಮಂದಿರ ಇರುವ ಪೈಝಾಬಾದ್ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮುಂದೆ ಬಿಜೆಪಿ ಅಭ್ಯರ್ಥಿ ಸೋಲನುಭವಿಸಿದ್ದರು. ಇದೀಗ ವಿಧಾನಸಭಾ ಚುನಾವಣೆಯಲ್ಲಿ ಹಿಂದೂಗಳ ಮತ್ತೊಂದು ಪ್ರಮುಖ ಶ್ರದ್ದಾ ಕೇಂದ್ರ ಬದ್ರಿನಾಥದಲ್ಲೂ ಬಿಜೆಪಿಗೆ ಸೋಲಾಗಿದೆ.

ಬದ್ರಿನಾಥದಲ್ಲಿ ಬಿಜೆಪಿ ಸೋಲನ್ನು ಹಿಂದುತ್ವ ರಾಜಕೀಯದ ಸೋಲು ಎಂದು ಅನೇಕರು ಬಣ್ಣಿಸಿದ್ದಾರೆ. ಬಿಜೆಪಿಯ ಕೋಮುವಾದ ರಾಜಕೀಯವನ್ನು ಜನರು ತಿರಸ್ಕರಿಸುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ : ಐಷಾರಾಮಿ ಕಾರು ಕಳುಹಿಸದ್ದಕ್ಕೆ ರಾಜ್ಯಪಾಲರ ಪುತ್ರನಿಂದ ಹಲ್ಲೆ: ಒಡಿಶಾ ರಾಜಭವನ ಸಿಬ್ಬಂದಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...