Homeಮುಖಪುಟಸಂಪುಟ ವಿಸ್ತರಣೆ ಬೆನ್ನಿಗೆ ಬಿಎಸ್​ವೈಗೆ ಶುರುವಾಯ್ತು ಮತ್ತೊಂದು ಕಂಟಕ; ವಿಧಾನ ಪರಿಷತ್ ಟಿಕೆಟ್ ಯಾರಿಗೆ?

ಸಂಪುಟ ವಿಸ್ತರಣೆ ಬೆನ್ನಿಗೆ ಬಿಎಸ್​ವೈಗೆ ಶುರುವಾಯ್ತು ಮತ್ತೊಂದು ಕಂಟಕ; ವಿಧಾನ ಪರಿಷತ್ ಟಿಕೆಟ್ ಯಾರಿಗೆ?

ಒಂದು ವೇಳೆ ಬಿಜೆಪಿ ಪಕ್ಷದಲ್ಲಿ ಆಂತರಿಕ ಕಲಹಕ್ಕೆ ಕಾರಣವಾಗಲಿದೆ ಎಂದು ಬಿಂಬಿಸಲಾಗಿರುವ ಸಚಿವ ಸಂಪುಟ ವಿಸ್ತರಣೆಯನ್ನು ಬಿಎಸ್​ವೈ ಯಶಸ್ವಿಯಾಗಿ ನಿಭಾಯಿಸಿದರೂ ಸಹ, ಮುಂದಿನ ವಿಧಾನ ಪರಿಷತ್ ಚುನಾವಣೆ ಅವರ ಪಾಲಿಗೆ ಕತ್ತಿಯಂಚಿನ ದಾರಿಯಂತಾಗಲಿದೆ ಎಂದು ರಾಜ್ಯ ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ.

- Advertisement -
- Advertisement -

ಬೆಂಗಳೂರು (ಜನವರಿ 27); ಹೈಕಮಾಂಡ್​ನೊಂದಿಗೆ ಸತತ ಎರಡು ತಿಂಗಳ ಹಗ್ಗಾಜಗ್ಗಾಟದ ನಂತರ ಕೊನೆಗೂ ಸಚಿವ ಸಂಪುಟ ವಿಸ್ತರಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಅಂತಿಮ ತಯಾರಿ ನಡೆಸುತ್ತಿದ್ದಾರೆ. ಇದಕ್ಕಾಗಿ ವಲಸಿಗರಿಗೆ 9 ಮತ್ತು ಮೂಲ ಬಿಜೆಪಿಗರಿಗೆ 3 ಸಚಿವ ಸ್ಥಾನ ಎಂಬ ಸೂತ್ರವನ್ನು ಸಿದ್ದಪಡಿಸಿದ್ದಾರೆ. ಆದರೆ, ಸಂಪುಟ ವಿಸ್ತರಣೆ ಬೆನ್ನಿಗೆ ವಿಧಾನ ಪರಿಷತ್ ಚುನಾವಣೆ ಎದುರಾಗುತ್ತಿದ್ದು, ಬಿಎಸ್​ವೈ ಎದುರು ಮತ್ತೊಂದು ದೊಡ್ಡ ಕಂಟಕ ಎದುರಾಗುವ ಎಲ್ಲಾ ಸಾಧ್ಯತೆಗಳನ್ನು ತೆರೆದಿಟ್ಟಿದೆ.

ಕಾಂಗ್ರೆಸ್ ಪಕ್ಷದ ರಿಜ್ವಾನ್ ಅರ್ಷದ್ ಅವರ ರಾಜೀನಾಮೆಯಿಂದ ತೆರವಾಗಿದ್ದ 1 ವಿಧಾನ ಪರಿಷತ್ ಸ್ಥಾನಕ್ಕೆ ಮುಂದಿನ ತಿಂಗಳು ಫೆಬ್ರವರಿ 17ಕ್ಕೆ ಚುನಾವಣೆ ನಡೆಯಲಿದೆ. ಆದರೆ, ಇರುವ ಈ ಒಂದು ಸ್ಥಾನವನ್ನು ಯಾರಿಗೆ ನೀಡುವುದು? ಎಂಬುದು ಇದೀಗ ಬಿಎಸ್ ಯಡಿಯೂರಪ್ಪ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಬೇಕು ಎಂದರೆ ಶತಾಯಗತಾಯ ವಿಧಾನ ಪರಿಷತ್​ಗೆ ಆಯ್ಕೆ ಆಗಲೇಬೇಕು. ಇನ್ನೂ ರಾಣಿಬೆನ್ನೂರು ಮಾಜಿ ಶಾಸಕ ಆರ್. ಶಂಕರ್ ಅವರಿಗೆ ವಿಧಾನ ಪರಿಷತ್​ಗೆ ನಾಮ ನಿರ್ದೇಶನ ಮಾಡಿ ಸಚಿವ ಸ್ಥಾನ ನೀಡುವ ಭರವಸೆ ನೀಡಿದ ಏಕೈಕ ಕಾರಣಕ್ಕೆ ಅವರು ಬಿಜೆಪಿ ನಾಯಕರ ಅಣತಿಯಂತೆ ತಮ್ಮ ಶಾಸಕ ಸ್ಥಾನವನ್ನೂ ಬಿಟ್ಟುಕೊಟ್ಟಿದ್ದರು.

ಇದೀಗ ಮುಂದಿನ ತಿಂಗಳು ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬಿಜೆಪಿಯ ಇಬ್ಬರು ನಾಯಕರು ಪೈಪೋಟಿ ನಡೆಸುತ್ತಿದ್ದಾರೆ. ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ನೀಡದಿದ್ದರೆ, ಉತ್ತರ ಕರ್ನಾಟಕದಲ್ಲಿ ಬಿಜೆಪಿ ಲಿಂಗಾಯತ ಸಮುದಾಯದ ಮತಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ಇನ್ನೂ ಸಚಿವ ಸ್ಥಾನಕ್ಕಾಗಿಯೇ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸೆ ಬಂದಿರುವ ಆರ್. ಶಂಕರ್​ಗೆ ಸಚಿವ ಸ್ಥಾನ ನೀಡಿ ವಿಧಾನ ಪರಿಷತ್​ಗೆ ಆಯ್ಕೆ ಮಾಡದಿದ್ದರೆ, ವಚನ ಭ್ರಷ್ಟ ಎಂಬ ಅಪಖ್ಯಾತಿ ಬಿಜೆಪಿ ಪಕ್ಷಕ್ಕೆ ಅಂಟಿಕೊಳ್ಳುತ್ತದೆ. ಅಲ್ಲದೆ ಅರ್ಹ ಶಾಸಕರ ಬಣದಲ್ಲಿ ಅಸಮಾಧಾನಕ್ಕೂ ಕಾರಣವಾಗಲಿದೆ.

ಹೀಗಾಗಿ, ಒಂದು ವೇಳೆ ಬಿಜೆಪಿ ಪಕ್ಷದಲ್ಲಿ ಆಂತರಿಕ ಕಲಹಕ್ಕೆ ಕಾರಣವಾಗಲಿದೆ ಎಂದು ಬಿಂಬಿಸಲಾಗಿರುವ ಸಚಿವ ಸಂಪುಟ ವಿಸ್ತರಣೆಯನ್ನು ಬಿಎಸ್​ವೈ ಯಶಸ್ವಿಯಾಗಿ ನಿಭಾಯಿಸಿದರೂ ಸಹ, ಮುಂದಿನ ವಿಧಾನ ಪರಿಷತ್ ಚುನಾವಣೆ ಅವರ ಪಾಲಿಗೆ ಕತ್ತಿಯಂಚಿನ ದಾರಿಯಂತಾಗಲಿದೆ ಎಂದು ರಾಜ್ಯ ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...