Homeಕರೋನಾ ತಲ್ಲಣದೆಹಲಿ, ಹರಿಯಾಣ ಬಳಿಕ ಮುಂಬೈನಲ್ಲೂ ಪಟಾಕಿ ನಿಷೇಧ!

ದೆಹಲಿ, ಹರಿಯಾಣ ಬಳಿಕ ಮುಂಬೈನಲ್ಲೂ ಪಟಾಕಿ ನಿಷೇಧ!

ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ನವೆಂಬರ್ 30ರ ವರೆಗೆ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸೋಮವಾರ ಸಂಪೂರ್ಣ ನಿಷೇಧ ಹೇರಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯ ಸಮಯದ ಮಾಲಿನ್ಯವನ್ನು ತಡೆಗಟ್ಟಲು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ದೀಪಾವಳಿ ಹಬ್ಬಕ್ಕೆ ಮುಂಬೈ ಮಹಾನಗರದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧ ಮಾಡಿ ಆದೇಶಿಸಿದೆ.

ಹೆಚ್ಚುತ್ತಿರುವ ಕೊರೊನಾವೈರಸ್ ಸಾಂಕ್ರಾಮಿಕದ ಮಧ್ಯೆ, ಮುಂಬೈನಲ್ಲಿ ಕೊರೊನಾ ಸೋಂಕಿತರು ಹೆಚ್ಚುತ್ತಿರುವ ಪರಿಣಾಮವಾಗಿ ಎರಡನೇ ಅಲೆ ಶುರುವಾಗುವ ಸಾಧ್ಯತೆ ಇರುವುದರಿಂದ ಬಿಎಂಸಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ದೀಪಾವಳಿಯನ್ನು ಪಟಾಕಿ ಇಲ್ಲದೆ ಆಚರಿಸಬೇಕೆಂದು ಜನರಿಗೆ ಮನವಿ ಮಾಡಿದೆ.

ಕೆಲವು ರಾಜ್ಯಗಳಲ್ಲಿ ಹಸಿರು ಪಟಾಕಿಗಳನ್ನು ಸಿಡಿಸಲು ಅನುಮತಿ ನೀಡಲಾಗಿದೆ. ಆದರೆ ಮುಂಬೈನಲ್ಲಿ ಹಸಿರು ಪಟಾಕಿಗಳು ಸೇರಿದಂತೆ ಎಲ್ಲಾ ರೀತಿಯ ಕ್ರ್ಯಾಕರ್‌ಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಜನರು ಸಾರ್ವಜನಿಕ ಸ್ಥಳಗಳಲ್ಲಿ ಕ್ರ್ಯಾಕರ್‌ಗಳನ್ನು ಸಿಡಿಯುವುದನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ಆದರೆ ಸಾರ್ವಜನಿಕರು ತಮ್ಮ ಸಣ್ಣ ಪ್ರದೇಶಗಳಲ್ಲಿ ಸೀಮಿತ ಅವಧಿಗೆ ಅಂದರೆ, ದೀಪಾವಳಿ ಹಬ್ಬದ ದಿನ ಮಾತ್ರ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ 2 ಗಂಟೆಗಳ ಕಾಲ ಫ್ಲವ​ರ್​ ಪಾಟ್​​ಗಳನ್ನ ಮಾತ್ರ​​ ಹಚ್ಚಲು ಅವಕಾಶ ನೀಡಿದೆ.

ಹರಿಯಾಣ ಸರ್ಕಾರ, ದೀಪಾವಳಿ ಮತ್ತು ಗುರುಪುರಬ್‌ನಲ್ಲಿ ಪಟಾಕಿ ಸಿಡಿಸಲು ಮತ್ತು ಮಾರಾಟ ಮಾಡಲು ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ 2 ಗಂಟೆ ಅನುಮತಿ ನೀಡಿದೆ.  ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಮುನ್ನಾ ದಿನದಂದು ರಾತ್ರಿ 11.55 ರಿಂದ ಮುಂಜಾನೆ 12.30 ರ ನಡುವೆ ಪಟಾಕಿ ಸಿಡಿಸಲು ಅನುಮತಿ ನೀಡಿದೆ.

ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ಇಂದಿನಿಂದ ನವೆಂಬರ್ 30 ರ ವರೆಗೆ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸೋಮವಾರ ಸಂಪೂರ್ಣ ನಿಷೇಧ ಹೇರಿದೆ.

ಗಾಳಿಯ ಗುಣಮಟ್ಟ ಕುಸಿದು, ವಾಯುಮಾಲಿನ್ಯ ಹೆಚ್ಚಾಗಿರುವ, ಕರ್ನಾಟಕವೂ ಸೇರಿದಂತೆ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪಟಾಕಿ ನಿಷೇಧ ಸಂಬಂಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ನೋಟಿಸ್ ನೀಡಿತ್ತು.


ಇದನ್ನೂ ಓದಿ: ದೆಹಲಿ: ಇಂದಿನಿಂದ ನ. 30ರವರೆಗೆ ಪಟಾಕಿ ಸಂಪೂರ್ಣ ನಿಷೇಧ ಹೇರಿದ ಎನ್‌ಜಿಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...