Homeಮುಖಪುಟಗುಜರಾತ್ : ನಕಲಿ ಟೋಲ್ ಪ್ಲಾಝಾ, ಸರ್ಕಾರಿ ಕಚೇರಿ ಬಳಿಕ ಈಗ ನಕಲಿ ಆಸ್ಪತ್ರೆ ಪತ್ತೆ

ಗುಜರಾತ್ : ನಕಲಿ ಟೋಲ್ ಪ್ಲಾಝಾ, ಸರ್ಕಾರಿ ಕಚೇರಿ ಬಳಿಕ ಈಗ ನಕಲಿ ಆಸ್ಪತ್ರೆ ಪತ್ತೆ

- Advertisement -
- Advertisement -

ಕೆಲ ತಿಂಗಳ ಹಿಂದೆ ಗುಜರಾತ್‌ನಲ್ಲಿ ನಕಲಿ ಟೋಲ್‌ ಪ್ಲಾಝಾ ಹಾಗೂ ನಕಲಿ ಸರ್ಕಾರಿ ಕಚೇರಿಗಳು ಪತ್ತೆಯಾಗಿದ್ದವು. ಇದೀಗ ಅಹಮದಾಬಾದ್‌ನಲ್ಲಿ ನಕಲಿ ಆಸ್ಪತ್ರೆಯನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿಯೊಬ್ಬಳು ಮೃತಪಟ್ಟ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದ ತಂಡ ಅಹಮದಾಬಾದ್‌ ಜಿಲ್ಲೆಯ ಭವ್ಲಾ ತಾಲೂಕಿನ ಕೇರಳ ಎಂಬ ಗ್ರಾಮದಲ್ಲಿ ‘ಅನನ್ಯ ಮಲ್ಟಿ ಸ್ಪೆಷಾಲಿಟಿ’ಎಂಬ ಹೆಸರಿನ ಆಸ್ಪತ್ರೆಯ ಮೇಲೆ ದಾಳಿ ನಡೆಸಿ ವಿಷಯ ಬಯಲಿಗೆಳೆದಿದ್ದಾರೆ.

ಅಧಿಕಾರಿಗಳ ಪ್ರಕಾರ, ಸಂಪೂರ್ಣ ಆಸ್ಪತ್ರೆ ನಕಲಿ ವೈದ್ಯರಿಂದ ನಡೆಯುತ್ತಿತ್ತು. ಬೇರೆ ವೈದ್ಯರ ಹೆಸರಿನಲ್ಲಿ ಆಸ್ಪತ್ರೆ ನೋಂದಣಿಯಾಗಿತ್ತು. ಸದ್ಯ, ಆಸ್ಪತ್ರೆಯನ್ನು ಮುಚ್ಚಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

“ವೈದ್ಯಕೀಯ ಅಧ್ಯಯನದ ಹಿನ್ನೆಲೆ ಇಲ್ಲದ ಮೆಹುಲ್ ಚಾವ್ಡಾ ಎಂಬ ವ್ಯಕ್ತಿ ನೇಪಾಳದ ನರ್ಸಿಂಗ್ ಸಿಬ್ಬಂದಿಯೊಬ್ಬಳ ಜೊತೆ ಆಸ್ಪತ್ರೆ ನಡೆಸುತ್ತಿದ್ದ. ಆಕೆಯೂ ತನ್ನ ನರ್ಸಿಂಗ್ ಅಧ್ಯಯನದ ಕುರಿತ ದಾಖಲೆಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ. ಕಳೆದ ಎರಡು ತಿಂಗಳಿನಿಂದ ಆಸ್ಪತ್ರೆ ನಡೆಯುತ್ತಿತ್ತು. ಮತ್ತೊಬ್ಬರ ಹೆಸರಿನಲ್ಲಿ ಅದನ್ನು ನೋಂದಣಿ ಮಾಡಲಾಗಿತ್ತು. ಈ ಕುರಿತು ಶುಕ್ರವಾರ (ಜುಲೈ 12) ಪೊಲೀಸರಿಗೆ ದೂರು ನೀಡುತ್ತೇವೆ” ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶೈಲೇಶ್ ಪರ್ಮಾರ್ ಹೇಳಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಆಸ್ಪತ್ರೆಯಲ್ಲಿ ಇಎನ್‌ಟಿ, ಮೂತ್ರ ವಿಭಾಗ, ಚರ್ಮ ವಿಭಾಗ ಸೇರಿದಂತೆ ಹಲವು ವಿಭಾಗಗಳಿದ್ದು,ದಿನವಿಡಿ ಕಾರ್ಯನಿರ್ವಹಿಸಲಾಗುತ್ತಿತ್ತು. ಆಸ್ಪತ್ರೆಯಲ್ಲಿ ಬಾಲಕಿಯೊಬ್ಬಳು ಮೃತಪಟ್ಟ ನಂತರ, ಆಕೆಯ ಕುಟುಂಬಸ್ಥರು ವಿಡಿಯೋ ಚಿತ್ರೀಕರಿಸಿದ್ದರು. ಈ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ.

ಸಾಮಾನ್ಯ ಆನಾರೋಗ್ಯದ ಸಮಸ್ಯೆಯಿಂದಾಗಿ ಕುಟುಂಬವು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿತ್ತು. ಕೆಲ ದಿನಗಳಲ್ಲಿ ಬಾಲಕಿಯ ಆರೋಗ್ಯ ಸಂಪೂರ್ಣವಾಗಿ ಹದಗೆಟ್ಟಿತು. ಅಲ್ಲಿನ ನಕಲಿ ವೈದ್ಯರು ಇಲ್ಲಿ ಸರಿಪಡಿಸಲು ಸಾಧ್ಯವಿಲ್ಲ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಎಂದು ಹೇಳಿದ್ದರು. ಬಾಲಕಿಗೆ 1.5 ಲಕ್ಷ ರೂ. ಶುಲ್ಕ ವಿಧಿಸಿದ್ದ ಆಸ್ಪತ್ರೆ ಸಿಬ್ಬಂದಿ, ಪೋಷಕರು ಪರಿಪರಿಯಾಗಿ ಕೇಳಿಕೊಂಡರೂ ವೈದ್ಯಕೀಯ ವರದಿಯನ್ನು ಮಾತ್ರ ನೀಡಿರಲಿಲ್ಲ.

ಬೇರೆ ಆಸ್ಪತ್ರೆಗೆ ದಾಖಲಿಸುವ ವೇಳೆಗೆ ಬಾಲಕಿ ಮೃತಪಟ್ಟಿದ್ದಳು. ಬಾಲಕಿಯ ಸಾವಿನ ನಂತರ ಆಸ್ಪತ್ರೆ ನಡೆಸುತ್ತಿರುವವರ ವಿರುದ್ಧ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಅಹಮದಾಬಾದ್‌ ಎಸ್‌ಪಿ ತಿಳಿಸಿದ್ದಾರೆ.

ಇದನ್ನೂ ಓದಿ : ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....