Homeಮುಖಪುಟಬಹುದಿನಗಳ ನಂತರ ಇಂದು ದೆಹಲಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ

ಬಹುದಿನಗಳ ನಂತರ ಇಂದು ದೆಹಲಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ

- Advertisement -
- Advertisement -

ದೆಹಲಿ ಮಹಾನಗರ ಪಾಲಿಕೆಯು ಮೇಯರ್ ಚುನಾವಣೆ ನಡೆಸಲು ಮೂರು ಭಾರಿ ಪ್ರಯತ್ನಿಸಿದಾಗಲೂ ವಿಫಲವಾದ ಹಿನ್ನೆಲೆ ಸುಪ್ರೀಂ ಕೋರ್ಟ್ ಆದೇಶದ ನಂತರ ಇಂದು (ಫೆಬ್ರವರಿ 22) ಹೊಸ ಮೇಯರ್ ಆಯ್ಕೆಗೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಗರಸಭೆ ಸಭಾಂಗಣದಲ್ಲಿ ಮತದಾನ ಆರಂಭಗೊಂಡಿದ್ದು, ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿಯ ಆರು ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಕಳೆದ ವಾರ ಮುನ್ಸಿಪಲ್ ಹೌಸ್ ನಡೆಸಲು ಒಪ್ಪಿಗೆ ನೀಡಿದ ನಂತರ, ಮೇಯರ್, ಉಪ ಮೇಯರ್ ಮತ್ತು ಸ್ಥಾಯಿ ಸಮಿತಿಯ ಆರು ಸದಸ್ಯರ ಸ್ಥಾನಗಳಿಗೆ ಫೆಬ್ರವರಿ 22ರಂದು ಚುನಾವಣೆ ನಡೆಸಲು ನಿರ್ಧರಿಸಲಾಯಿತು.

ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಮೇಯರ್ ಅಭ್ಯರ್ಥಿ ಶೆಲ್ಲಿ ಒಬೆರಾಯ್ ಅವರು ಚುನಾವಣೆಯನ್ನು ಶೀಘ್ರವಾಗಿ ನಡೆಸುವಂತೆ ಕೋರಿ ಮನವಿ ಸಲ್ಲಿಸಿದ್ದರು. ಮನವಿಯನ್ನು ಆಲಿಸಿದ ನ್ಯಾಯಾಲಯವು, ಮೇಯರ್, ಉಪಮೇಯರ್ ಮತ್ತು ಸ್ಥಾಯಿ ಸಮಿತಿಯ ಸದಸ್ಯರ ಚುನಾವಣೆಯ ದಿನಾಂಕವನ್ನು ನಿಗದಿಪಡಿಸಲು ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) 24 ಗಂಟೆಯೊಳಗೆ ಮೊದಲ ಸಭೆಯನ್ನು ಕರೆಯಬೇಕು ಎಂದು ಫೆಬ್ರವರಿ 17ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಸರ್ವೋಚ್ಚ ನ್ಯಾಯಾಲಯವು ರಾಜ್ಯಪಾಲರಿಂದ ದೆಹಲಿ ಮಹಾನಗರ ಪಾಲಿಕೆಗೆ ನಾಮನಿರ್ದೇಶನಗೊಂಡ ಸದಸ್ಯರು ಮೇಯರ್‌ಅನ್ನು ಆಯ್ಕೆ ಮಾಡಲು ಮತ ಚಲಾಯಿಸುವಂತಿಲ್ಲ ಎಂದು ಹೇಳಿದೆ. ಇದು ಎಎಪಿಗೆ ವರವಾಗಲಿದೆ.

ಇದನ್ನೂ ಓದಿ: ನನ್ನ ವಿರುದ್ಧ ಸಿಬಿಐ, ಇಡಿ ಸಂಸ್ಥೆಗಳ ಸಂಪೂರ್ಣ ಅಧಿಕಾರ ಬಳಕೆ: ಕೇಂದ್ರದ ವಿರುದ್ಧ ದೆಹಲಿ ಡಿಸಿಎಂ ಆರೋಪ

ದೆಹಲಿ ಮಹಾನಗರ ಪಾಲಿಕೆ (ಡಿಎಂಸಿ) ಕಾಯಿದೆ, 1957 ರ ಪ್ರಕಾರ, ನಾಗರಿಕ ಚುನಾವಣೆಯ ನಂತರ ಸದನದ ಮೊದಲ ಅಧಿವೇಶನದಲ್ಲಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಯಾಗಬೇಕು. ಆದರೆ, ಡಿಸೆಂಬರ್ 4 ರಂದು ಪಾಲಿಕೆ ಚುನಾವಣೆ ನಡೆದು ಎರಡು ತಿಂಗಳಾಗಿದೆ.

ಪಾಲಿಕೆ ಚುನಾವಣೆ ಮುಗಿದ ಒಂದು ತಿಂಗಳ ನಂತರ, ಜನವರಿ 6ರಂದು ಮೊದಲ ಬಾರಿಗೆ ಸದನ ನಡೆಯಿತು. ಆದರೆ ಅಂದು ಬಿಜೆಪಿ ಮತ್ತು ಆಪ್ ಸದಸ್ಯರ ನಡುವಿನ ವಾಗ್ವಾದದ ನಂತರ ಅದನ್ನು ಮುಂದೂಡಲಾಯಿತು. ಜನವರಿ 24 ಮತ್ತು ಫೆಬ್ರವರಿ 6 ರಂದು ನಡೆದ ಎರಡನೇ ಮತ್ತು ಮೂರನೇ ಸಭೆಗಳು ಸಹ ಮೇಯರ್ ಆಯ್ಕೆಯ ಚುನಾವಣೆ ಪ್ರಕ್ರಿಯೆ ವಿಫಲವಾದವು.

ಈ ಮೇಯರ್ ಆಯ್ಕೆ ಚುನಾವಣೆಯಲ್ಲಿ 250 ಚುನಾಯಿತ ಕೌನ್ಸಿಲರ್‌ಗಳು, ಏಳು ಲೋಕಸಭೆ ಮತ್ತು ದೆಹಲಿಯ ಮೂರು ರಾಜ್ಯಸಭಾ ಸಂಸದರು ಮತ್ತು 14 ಶಾಸಕರನ್ನು ಒಳಗೊಂಡಿದೆ. ದೆಹಲಿ ಅಸೆಂಬ್ಲಿ ಸ್ಪೀಕರ್ 13 ಎಎಪಿ ಮತ್ತು ಒಬ್ಬ ಬಿಜೆಪಿ ಸದಸ್ಯರನ್ನು ಸದನಕ್ಕೆ ನಾಮನಿರ್ದೇಶನ ಮಾಡಿದ್ದಾರೆ. ಮೇಯರ್ ಚುನಾವಣೆಯಲ್ಲಿ ಒಟ್ಟು ಮತಗಳ ಸಂಖ್ಯೆ 274. ಬಿಜೆಪಿಯ 113 ಸ್ಥಾನ ಹೊಂದಿದ್ದರೆ, ಎಎಪಿ 150 ಮತಗಳನ್ನು ಹೊಂದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಮತ್ತು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...