Homeಮುಖಪುಟಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು NDA ಮೈತ್ರಿಕೂಟಕ್ಕೆ ಮರಳಿದ ನಿತೇಶ್‌ ಕುಮಾರ್‌: ಬಿಜೆಪಿಯಿಂದ ಇಬ್ಬರಿಗೆ ಡಿಸಿಎಂ...

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು NDA ಮೈತ್ರಿಕೂಟಕ್ಕೆ ಮರಳಿದ ನಿತೇಶ್‌ ಕುಮಾರ್‌: ಬಿಜೆಪಿಯಿಂದ ಇಬ್ಬರಿಗೆ ಡಿಸಿಎಂ ಪಟ್ಟ!

- Advertisement -
- Advertisement -

ಕಳೆದ ಕೆಲವು ತಿಂಗಳಿನಿಂದ INDIA ಮೈತ್ರಿ ಕೂಟದ ಜೊತೆಗೆ ಕಾಣಿಸಿಕೊಂಡಿದ್ದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಇದೀಗ ಉಲ್ಟಾ ಹೊಡೆದಿದ್ದು, ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್‌ಡಿಎ ಮೈತ್ರಿಕೂಟಕ್ಕೆ ಮತ್ತೆ ಮರಳಿದ್ದಾರೆ.

ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ರಾಜೀನಾಮೆ ಸಲ್ಲಿಸಿದ ನಿತೀಶ್ ಕುಮಾರ್, ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್ ಒಳಗೊಂಡಿರುವ ಮಹಾಘಟಬಂಧನ್ ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳಲು ತಮ್ಮ ಪಕ್ಷವು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮಾತನಾಡಿದ ನಿತೀಶ್ ಕುಮಾರ್,  ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರನ್ನು ಕೋರಿದ್ದೇನೆ. ಇಂದು ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ವಿಸರ್ಜಿಸುವಂತೆ ನಾನು ರಾಜ್ಯಪಾಲರಿಗೆ ಹೇಳಿದ್ದೇನೆ ಎಂದು ಹೇಳಿದ್ದಾರೆ.

ಬಿಹಾರದ ರಾಜಕೀಯ ಜೀವನದಲ್ಲಿ ಹೊಸ ತಿರುವು ಕಂಡಿದೆ. ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮಹಾಮೈತ್ರಿಕೂಟಕ್ಕೆ ಧಕ್ಕೆ ಉಂಟಾಗಿದೆ. ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಬಿಜೆಪಿ, ಜೆಡಿಯು ಮತ್ತು ಇತರ ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಬಿಹಾರದಲ್ಲಿ ಎನ್‌ಡಿಎ ಸರ್ಕಾರ ರಚಿಸುವ ಪ್ರಸ್ತಾಪವನ್ನು ಬಿಜೆಪಿ ಭಾನುವಾರ ಅಂಗೀಕರಿಸಿದೆ.

ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯದ ಜನರ ಕಲ್ಯಾಣಕ್ಕಾಗಿ ಬಿಜೆಪಿ, ಜೆಡಿಯು ಮತ್ತು ಇತರ ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಬಿಹಾರದಲ್ಲಿ ಎನ್‌ಡಿಎ ಸರ್ಕಾರ ರಚಿಸುವ ಪ್ರಸ್ತಾವನೆಯನ್ನು ಎಲ್ಲಾ ಶಾಸಕರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಸಭೆಯಲ್ಲಿ ಸಾಮ್ರಾಟ್ ಚೌಧರಿ ಶಾಸಕಾಂಗ ಪಕ್ಷದ ನಾಯಕರಾಗಿ ಹಾಗೂ ವಿಜಯ್ ಸಿನ್ಹಾ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾನುವಾರ ಬೆಳಗ್ಗೆ ರಾಜ್ಯಪಾಲ ರಾಜೇಂದ್ರ ವಿ ಅರ್ಲೇಕರ್ ಅವರಿಗೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ನಿತೀಶ್‌ ಕುಮಾರ್ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದು, ಹೊಸ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ಸೂಚಿಸಿದ್ದಾರೆ. ಎನ್‌ಡಿಎ ಸರಕಾರದಲ್ಲಿ ನಿತೀಶ್‌ ಕುಮಾರ್‌ ಮುಖ್ಯಮಂತ್ರಿ ಮತ್ತು ಎನ್‌ಡಿಎಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ ಡಿಸಿಎಂಗಳಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.

ನಿತೀಶ್‌ ಕುಮಾರ್‌ ಇಂದು ರಾಜ್ಯಪಾಲರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದು, ಕಳೆದ ಕೆಲವು ದಿನಗಳಿಂದ ಬಿಹಾರ ರಾಜಕಾರಣದಲ್ಲಿ ಸೃಷ್ಟಿಯಾಗಿದ್ದ ನಿಗೂಢತೆಗೆ ಅಂತ್ಯ ಹಾಡಿದ್ದಾರೆ. ನಿತೀಶ್ ಕುಮಾರ್ ಅವರ ಬಿಜೆಪಿಯ ಘರ್ ವಾಪ್ಸಿಯು ಬಿಹಾರದ ರಾಜಕೀಯದಲ್ಲಿ ಮಿಶ್ರ ಪ್ರತಿಕ್ರಿಯೆ ಕೇಳಿ ಬರುತ್ತಿದೆ. ಮೂಲಗಳ ಪ್ರಕಾರ ನಿತೀಶ್ ಕುಮಾರ್ ಅವರ ಪಕ್ಷದೊಳಗೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆ.

ಇದನ್ನು ಓದಿ: ಬೇಲಿಮ್ ವಾಸ್ ಹಿಂಸಾಚಾರ: ಮುಸ್ಲಿಂ ಯುವಕರ ಬಂಧನ, ಕುಟುಂಬಸ್ಥರ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...