Homeಅಂತರಾಷ್ಟ್ರೀಯರಾಜೀನಾಮೆ ನಂತರವೂ ಮುಂದುವರೆದ ಪ್ರತಿಭಟನೆ: ನೌಕಾನೆಲೆಯಲ್ಲಿ ಅವಿತುಕೂತ ಮಾಜಿ ಪ್ರಧಾನಿ ಮಹಿಂದ ರಾಜಪಕ್ಸೆ

ರಾಜೀನಾಮೆ ನಂತರವೂ ಮುಂದುವರೆದ ಪ್ರತಿಭಟನೆ: ನೌಕಾನೆಲೆಯಲ್ಲಿ ಅವಿತುಕೂತ ಮಾಜಿ ಪ್ರಧಾನಿ ಮಹಿಂದ ರಾಜಪಕ್ಸೆ

- Advertisement -
- Advertisement -

ಶ್ರೀಲಂಕಾದಲ್ಲಿ ಭುಗಿಲೆದ್ದಿರುವ ಭಾರಿ ಪ್ರತಿಭಟನೆಗೆ ಬೆದರಿ ಅಲ್ಲಿನ ಮಾಜಿ ಪ್ರಧಾನಿ ಮಹಿಂದ ರಾಜಪಕ್ಸೆ ಮತ್ತು ಅವರ ಕುಟುಂಬವು ದೇಶದ ಈಶಾನ್ಯ ಭಾಗದಲ್ಲಿರುವ ಟ್ರಿಂಕೋಮಲಿಯಲ್ಲಿರುವ ನೌಕಾ ನೆಲೆಯಲ್ಲಿ ಆಶ್ರಯ ಪಡೆದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ NDTV ವರದಿ ಮಾಡಿದೆ. ಶ್ರೀಲಂಕಾದಾದ್ಯಂತ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ನಡುವೆ ಭಾರಿ ಪ್ರತಿಭಟನೆಗಳು ಮುಂದುವರಿದಿವೆ.

ಮಾಜಿ ಪ್ರಧಾನಿ ಮತ್ತು ಅವರ ಕುಟುಂಬವನ್ನು ಹೆಲಿಕಾಪ್ಟರ್‌ ಮೂಲಕ ನೌಕಾನೆಲೆಗೆ ಕೊಂಡೊಯ್ಯಲಾಯಿತು ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ರಾಜಧಾನಿ ಕೊಲಂಬೊದಿಂದ ಸುಮಾರು 270 ಕಿಮೀ ದೂರದಲ್ಲಿರುವ ನೌಕಾ ನೆಲೆಯ ಹೊರಗೆ ಕೂಡಾ ಪ್ರತಿಭಟನೆಗಳು ನಡೆದಿವೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರಿ ಆರ್ಥಿಕ ಬಿಕ್ಕಟ್ಟಿನ ಹಿನ್ನಲೆಯಲ್ಲಿ ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಗಳ ಭೀಕರ ಹಿಂಸಾಚಾರದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ. ಇದರ ನಂತರ ಶ್ರಿಲಂಕಾ ಆಡಳಿತ ಕರ್ಫ್ಯೂ ಜಾರಿಗೊಳಿಸಿದ್ದು, ಅದಕ್ಕಾಗಿ ಸಾವಿರಾರು ಸೈನಿಕರು ಮತ್ತು ಪೊಲೀಸರನ್ನು ನಿಯೋಜಿಸಿದೆ. ಪ್ರಧಾನಿ ರಾಜಪಕ್ಸೆ ರಾಜೀನಾಮೆಯ ನಂತರ ನಡೆದ ಹಿಂಸಾಚಾರದಲ್ಲಿ ಸುಮಾರು 200 ಮಂದಿ ನಿನ್ನೆ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

ಕೊಲಂಬೊದಲ್ಲಿನ ರಾಜಪಕ್ಸೆ ಅವರ ಅವರ ಅಧಿಕೃತ ನಿವಾಸಕ್ಕೆ ರಾತ್ರೋರಾತ್ರಿ ಸಾವಿರಾರು ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಆಗಮಿಸಿದ್ದರಿಂದ ಪೊಲೀಸರು ಅಶ್ರುವಾಯು ಮತ್ತು ಎಚ್ಚರಿಕೆಯ ಗುಂಡುಗಳನ್ನು ಸಿಡಿಸಿ ಗುಂಪನ್ನು ಹಿಮ್ಮೆಟ್ಟಿಸಿದ್ದಾರೆ. ಇದರ ನಂತರ ಇಂದು ಮುಂಜಾನೆ ಶ್ರಿಲಂಕಾ ಸೇನೆ ಕಾರ್ಯಾಚರಣೆ ನಡೆಸಿ ಅವರನ್ನು ಅಲ್ಲಿಂದ ಅವರನ್ನು ರಕ್ಷಿಸಿದ್ದಾರೆ.

“ಕನಿಷ್ಠ 10 ಪೆಟ್ರೋಲ್ ಬಾಂಬ್‌ಗಳನ್ನು ಕಾಂಪೌಂಡ್‌ಗೆ ಎಸೆಯಲಾಯಿತು” ಎಂದು ಉನ್ನತ ಭದ್ರತಾ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ AFP ವರದಿ ಮಾಡಿದೆ.

1948 ರಲ್ಲಿ ಸ್ವತಂತ್ರಗೊಂದ ಶ್ರೀಲಂಕಾದಲ್ಲಿ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟು ಸಂಭವಿಸಿದ್ದು ಇದರಿಂದಾಗಿ ವಿದ್ಯುತ್ ಕಡಿತ ಮತ್ತು ಕೊರತೆಗಳಿಂದ ರಾಜಪಕ್ಸೆ ಕುಟುಂಬದ ಅಧಿಕಾರವು ಅಲುಗಾಡಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾ ಸೇರಿದಂತೆ ಮೂರು ದೇಶಗಳ ರಾಯಭಾರ ಕಚೇರಿಗಳನ್ನು ಮುಚ್ಚಿದ ಶ್ರೀಲಂಕಾ

ಶ್ರೀಲಂಕಾದ ಪ್ರಮುಖ ವಿರೋಧ ಪಕ್ಷವಾದ SJB ತನ್ನ ಅಡಿಯಲ್ಲಿ ಮಧ್ಯಂತರ ಸರ್ಕಾರವನ್ನು ರಚಿಸುವ ಅಧ್ಯಕ್ಷರ ಪ್ರಸ್ತಾಪವನ್ನು ಇಂದು ತಿರಸ್ಕರಿಸಿದೆ. ಬದಲಿಗೆ ಅದು ರಾಷ್ಟ್ರದ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಹಲವು ವಾರಗಳಿಂದ ಸರ್ಕಾರದ ವಿರುದ್ದ ಶಾಂತಿಯುತವಾದ ಪ್ರತಿಭಟನಾ ಪ್ರದರ್ಶನಗಳು ನಡೆಯುತ್ತಿದೆ. ಆದರೆ ನಿನ್ನೆ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ನಂತರ ಬೆಂಬಲಿಗರು ಗ್ರಾಮಾಂತರ ಪ್ರದೇಶದಿಂದ ರಾಜಧಾನಿಗೆ ನುಗ್ಗಿ ಪ್ರತಿಭಟನಾಕಾರರ ಮೇಲೆ ದೊಣ್ಣೆಗಳಿಂದ ದಾಳಿ ಮಾಡಿದ್ದರಿಂದ ಹಿಂಸಾಚಾರ ಭುಗಿಲೆದ್ದಿದೆ.

ದೇಶದ ರಾಜಧಾನಿ ಕೊಲಂಬೊದ ಹೊರಗೆ ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತುಕೋರಾಲ ಅವರು ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಗುಂಪಿನಿಂದ ಸುತ್ತುವರಿದ ನಂತರ ಇಬ್ಬರನ್ನು ಗುಂಡಿಕ್ಕಿದ್ದರು. ಈ ವೇಳೆ 27 ವರ್ಷದ ವ್ಯಕ್ತಿಯನ್ನು ಅವರು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ನಂತರ ಅವರು ತನ್ನ ರಿವಾಲ್ವರ್‌ನಿಂದ ತನ್ನ ಪ್ರಾಣವನ್ನು ತೆಗೆದುಕೊಂಡಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು AFP ಗೆ ತಿಳಿಸಿದ್ದಾರೆ. ಸ್ಥಳದಲ್ಲಿ ಅತುಕೋರಾಲ ಅವರ ಅಂಗರಕ್ಷಕ ಕೂಡ ಶವವಾಗಿ ಪತ್ತೆಯಾಗಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಯನ್ನು ಹತ್ತಿಕ್ಕಲು ಭಾರತೀಯ ಸೈನಿಕರ ಆಗಮನದ ವರದಿಯನ್ನು ನಿರಾಕರಿಸಿದ ಶ್ರೀಲಂಕಾ ಸೇನೆ

ಕರ್ಫ್ಯೂಗಳ ಹೊರತಾಗಿಯೂ ಆಡಳಿತ ಪಕ್ಷದ ಉನ್ನತ ರಾಜಕಾರಣಿಗಳ ಕನಿಷ್ಠ 41 ಮನೆಗಳನ್ನು ರಾತ್ರಿಯಿಡೀ ಸುಟ್ಟು ಹಾಕಲಾಗಿದೆ. ಆ ಮನೆಗಳಲ್ಲಿ ನಿಲ್ಲಿಸಿದ್ದ ನೂರಾರು ದ್ವಿಚಕ್ರ ವಾಹನಗಳೂ ಸುಟ್ಟು ಕರಕಲಾಗಿವೆ. “ಇದು ನಾವು ಮೊದಲೇ ಮಾಡಬೇಕಾಗಿದ್ದ ಕೆಲಸ” ಎಂದು ಸಚಿವರೊಬ್ಬರ ಸುಡುವ ಮನೆಯ ಮುಂದೆ ಅಪರಿಚಿತ ವ್ಯಕ್ತಿಯೊಬ್ಬ ಸ್ಥಳೀಯ ಮಾಧ್ಯಮ ನೆಟ್ವರ್ಕ್‌ಗೆ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಠ್ಯ ಪರಿಷ್ಕರಣೆ ವಿವಾದಕ್ಕೆ ಕಾರ್ಟೂನ್‌ಗಳು ಸ್ಪಂದಿಸಿದ್ದು ಹೀಗೆ…

0
ಕರ್ನಾಟಕದಲ್ಲಿ ಪಠ್ಯ ಪರಿಷ್ಕರಣೆ ವಿವಾದ ತಾರಕಕ್ಕೆರಿದೆ. ಕರ್ನಾಟಕ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ಸಮಿತಿ ಮಾಡಿರುವ ಪರಿಷ್ಕರಣೆಗಳು ಸಂವಿಧಾನ ವಿರೋಧಿಯಾಗಿದ್ದು, ಒಂದು ಸಮುದಾಯವನ್ನು ಮಾತ್ರ ಪರಿಗಣಿಸಿವೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಎಳೆಯ...