Homeಮುಖಪುಟಏಳು ವರ್ಷಗಳ ವಿಳಂಬ; ಜನಗಣತಿ ವೇಳಾಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಏಳು ವರ್ಷಗಳ ವಿಳಂಬ; ಜನಗಣತಿ ವೇಳಾಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯ ವೇಳಾಪಟ್ಟಿಯನ್ನು ಕೇಂದ್ರ ಸರ್ಕಾರ ಬುಧವಾರ (ಜೂ.4) ಪ್ರಕಟಿಸಿದೆ. ದೇಶದಾದ್ಯಂತ ಮಾರ್ಚ್ 1, 2027 ರಿಂದ ಗಣತಿ ಪ್ರಾರಂಭವಾಗಲಿದೆಯಾದರೂ, ಲಡಾಖ್, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತ ಹಿಮ ಪ್ರದೇಶಗಳ ರಾಜ್ಯಗಳಲ್ಲಿ ಅಕ್ಟೋಬರ್ 1, 2026ರಂದು ಗಣತಿ ಪ್ರಾರಂಭವಾಗಲಿದೆ ಎಂದು ಸರ್ಕಾರ ತಿಳಿಸಿದೆ. ಏಳು ವರ್ಷಗಳ ವಿಳಂಬ

ದೇಶದಾದ್ಯಂತ ಕೊನೆಯ ಬಾರಿ ಜನಗಣತಿ 2011ರಲ್ಲಿ ನಡೆಸಲಾಗಿತ್ತು. ಹತ್ತು ವರ್ಷಗಳ ನಂತರ 2021ರಲ್ಲಿ ಗಣತಿ ಮಾಡಬೇಕಾಗಿತ್ತು. ಆದರೆ, ಕೊರೊನಾ ಕಾರಣ ನೀಡಿ ಸರ್ಕಾರ ಗಣತಿ ಮುಂದೂಡಿತ್ತು. ಕೊರೊನಾ ಬಳಿಕವೂ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳ ಕಾರಣ ನೀಡಿ ಗಣತಿ ಮುಂದೂಡಲಾಗಿತ್ತು. ಆದ್ದರಿಂದ ಏಳು ವರ್ಷಗಳ ವಿಳಂಬದ ನಂತರ ಈಗ ಗಣತಿ ನಡೆಸಲು ಸರ್ಕಾರ ಮುಂದಾಗಿದೆ.

“ಜನಸಂಖ್ಯಾ ಗಣತಿ-2027 ಅನ್ನು ಜಾತಿ ಗಣತಿಯೊಂದಿಗೆ ಎರಡು ಹಂತಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ. ಜನಸಂಖ್ಯಾ ಗಣತಿ-2027 ರ ಉಲ್ಲೇಖ ದಿನಾಂಕವು ಮಾರ್ಚ್, 2027ರ ಮೊದಲ ದಿನದ 00:00 ಗಂಟೆಗಳು ಆಗಿರುತ್ತದೆ” ಎಂದು ಕೇಂದ್ರ ಗೃಹ ಸಚಿವಾಲಯ (MHAS) ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಲಡಾಖ್ ಮತ್ತು ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಿಗೆ ಉಲ್ಲೇಖ ದಿನಾಂಕವು ಅಕ್ಟೋಬರ್, 2026 ರ ಮೊದಲ ದಿನದ 00.00 ಗಂಟೆಗಳು” ಎಂದು ಗೃಹ ಸಚಿವಾಲಯ ಹೇಳಿದೆ.

“ಜನಸಂಖ್ಯಾ ಗಣತಿಯನ್ನು ನಡೆಸುವ ಉದ್ದೇಶಕ್ಕಾಗಿ ಅಧಿಸೂಚನೆಯನ್ನು ಮೇಲಿನ ಉಲ್ಲೇಖ ದಿನಾಂಕಗಳೊಂದಿಗೆ 1948 ರ ಜನಗಣತಿ ಕಾಯ್ದೆಯ ಸೆಕ್ಷನ್ 3 ರ ನಿಬಂಧನೆಗಳ ಪ್ರಕಾರ, ಜೂನ್ 16, 2025 ರಂದು ಅಧಿಕೃತ ಗೆಜೆಟ್‌ನಲ್ಲಿ ತಾತ್ಕಾಲಿಕವಾಗಿ ಪ್ರಕಟಿಸಲಾಗುವುದು” ಎಂದು ಗೃಹ ಸಚಿವಾಲಯ ತಿಳಿಸಿದೆ.

ಭಾರತದ ಜನಗಣತಿಯನ್ನು 1948 ರ ಜನಗಣತಿ ಕಾಯ್ದೆ ಮತ್ತು 1990 ರ ಜನಗಣತಿ ನಿಯಮಗಳ ಅಡಿಯಲ್ಲಿ ನಡೆಸಲಾಗುತ್ತದೆ.

ಭಾರತದ ಕೊನೆಯ ಜನಗಣತಿಯನ್ನು 2011ರಲ್ಲಿ ಎರಡು ಹಂತಗಳಲ್ಲಿ ನಡೆಸಲಾಗಿತ್ತು. ಮೊದಲನೆಯದು ಮನೆ ಪಟ್ಟಿ (HLO),ಇದನ್ನು 2010 ರ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರ ನಡುವೆ ನಡೆಸಲಾಗಿತ್ತು ಮತ್ತು ಎರಡನೆಯದು ಜನಸಂಖ್ಯಾ ಗಣತಿ (PE), ಇದನ್ನು 2011ರ ಫೆಬ್ರವರಿ 9 ರಿಂದ 28 ರ ನಡುವೆ ನಡೆಸಲಾಗಿತ್ತು.

2021ರ ಜನಗಣತಿಯನ್ನು ಎರಡು ಹಂತಗಳಲ್ಲಿ ಇದೇ ರೀತಿ ನಡೆಸಲು ಪ್ರಸ್ತಾಪಿಸಲಾಗಿತ್ತು. ಮೊದಲ ಹಂತ 2020ರ ಏಪ್ರಿಲ್ -ಸೆಪ್ಟೆಂಬರ್ ನಡುವೆ ಮತ್ತು ಎರಡನೇ ಹಂತ 2021ರ ಫೆಬ್ರವರಿಯಲ್ಲಿ ನಡೆಸಲು ಉದ್ದೇಶಿಸಲಾಗಿತ್ತು.

“2021ರಲ್ಲಿ ಜನಗಣತಿಯ ಮೊದಲ ಹಂತದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿತ್ತು. ಏಪ್ರಿಲ್ 1, 2020 ರಿಂದ ಕೆಲವು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಕ್ಷೇತ್ರಕಾರ್ಯವನ್ನು ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ, ದೇಶಾದ್ಯಂತ ಕೊರೊನಾ ಸಾಂಕ್ರಾಮಿಕ ರೋಗ ಹರಡಿದ ಕಾರಣ ಜನಗಣತಿ ಕಾರ್ಯವನ್ನು ಮುಂದೂಡಲಾಯಿತು” ಎಂದು ಗೃಹ ಸಚಿವಾಲಯ ತಿಳಿಸಿದೆ.

ಕಳೆದ ಏಪ್ರಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯ ನಂತರ, ಜನಗಣತಿಯ ಜೊತೆಗೆ ಜಾತಿ ಆಧಾರಿತ ಗಣತಿ ನಡೆಸಲು ತೀರ್ಮಾನಿಸಿರುವುದಾಗಿ ಸರ್ಕಾರ ತಿಳಿಸಿತ್ತು. “ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಮೋದಿ ಸರ್ಕಾರ ಇಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ಗೃಹ ಸಚಿವ ಅಮಿತ್ ಶಾ ಎಕ್ಸ್‌ನಲ್ಲಿ ಅಂದು ಹೇಳಿದ್ದರು.

ಸ್ವಾತಂತ್ರ್ಯದ ನಂತರ, 1951ರಿಂದ ದೇಶದ ಜನಸಂಖ್ಯಾ ಗಣತಿಯನ್ನು ಪ್ರತಿ 10 ವರ್ಷಗಳಿಗೊಮ್ಮೆ ನಡೆಸಲಾಗುತ್ತಿದೆ. ಭಾರತದ ಜನಗಣತಿಯನ್ನು ಮೊದಲು 1872 ರಲ್ಲಿ ಭಾರತದಲ್ಲಿ ಪರಿಚಯಿಸಲಾಯಿತು. ಜನಗಣತಿ ಸಮಯದಲ್ಲಿ ನಾಗರಿಕರಿಗೆ ಕೇಳಲು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿ 31 ಪ್ರಶ್ನೆಗಳನ್ನು ಸಿದ್ಧಪಡಿಸಿತ್ತು.

2011 ರ ಮಾಹಿತಿಯ ಪ್ರಕಾರ, ಭಾರತದ ಒಟ್ಟು ಜನಸಂಖ್ಯೆ 121 ಕೋಟಿ, ಲಿಂಗ ಅನುಪಾತವು 1,000 ಪುರುಷರಿಗೆ 940 ಮಹಿಳೆಯರು, ಸಾಕ್ಷರತಾ ಪ್ರಮಾಣವು 74.04 ಪ್ರತಿಶತ ಆಗಿತ್ತು. ಜೊತೆಗೆ 2001 ರಿಂದ 2011 ರವರೆಗೆ ಜನಸಂಖ್ಯಾ ಬೆಳವಣಿಗೆ 17.64 ಪ್ರತಿಶತದಷ್ಟಿತ್ತು. ಏಳು ವರ್ಷಗಳ ವಿಳಂಬ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ತಿನ ಮಳೆಗಾಲದ ಅಧಿವೇಶನ

ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ತಿನ ಮಳೆಗಾಲದ ಅಧಿವೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...