Homeಮುಖಪುಟಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

- Advertisement -
- Advertisement -

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಫೈಝಾನ್‌ಗೆ ಪೊಲೀಸರು ರಾಷ್ಟ್ರಗೀತೆ ಮತ್ತು ವಂದೇ ಮಾತರಂ ಹಾಡುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದ ವಿಡಿಯೋ ವೈರಲ್ ಆಗಿತ್ತು. ರಕ್ಷಕರಾದ ಪೊಲೀಸರೇ ಅಮಾನವೀಯವಾಗಿ ವರ್ತಿಸಿದ್ದರ ವಿರುದ್ದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪೊಲೀಸರ ನಿಷ್ಪಕ್ಷಪಾತ ಕಾರ್ಯನಿರ್ಹಣೆಯ ಬಗ್ಗೆ ಪ್ರಶ್ನೆ ಮೂಡಿತ್ತು.

ಪೊಲೀಸರು ಕಿರುಕುಳ ನೀಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ 23 ವರ್ಷದ ಯುವಕ ಫೈಝಾನ್ ಸಾವಿಗೀಡಾಗಿದ್ದ. ಆತನ ಕುಟುಂಬ ಪೊಲೀಸರ ವಿರುದ್ದ ಅಕ್ರಮ ಬಂಧನ ಮತ್ತು ವೈದ್ಯಕೀಯ ಚಿಕಿತ್ಸೆಯ ನಿರಾಕರಣೆಯ ಆರೋಪ ಮಾಡಿದೆ.

ಫೆಬ್ರವರಿ 4, 2026ರಂದು, ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮಾಯಾಂಕ್ ಗೋಯೆಲ್ ಅವರು ಕೇಂದ್ರ ತನಿಖಾ ದಳ (ಸಿಬಿಐ) ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿಯನ್ನು ಪರಿಗಣಿಸಿದ್ದಾರೆ ಅಥವಾ ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ಅವರಿಗೆ ಫೆಬ್ರವರಿ 24,2026 ರಂದು ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ನೀಡಲಾಗಿದೆ.

ಈ ಹಿಂದೆ ದೆಹಲಿ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ನಲ್ಲಿ ಕಲಂ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಸಿಬಿಐ ತನ್ನ ತನಿಖೆಯಲ್ಲಿ ಕೊಲೆ ಮಾಡುವ ಸ್ಪಷ್ಟ ಉದ್ದೇಶ ಕಂಡುಬಂದಿಲ್ಲ ಎಂದು ತಿಳಿಸಿ, ಅದನ್ನು ಕಲಂ 304(II) ಅಡಿಯಲ್ಲಿ ‘ಕೊಲೆಯಲ್ಲದ ಅಪರಾಧಯುತ ನರಹತ್ಯೆ’ ಎಂದು ಮಾರ್ಪಡಿಸಿದೆ. ಅಲ್ಲದೆ, ಕಲಂ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 325 (ತೀವ್ರವಾದ ನೋವುಂಟುಮಾಡುವುದು) ಅಡಿ ಆರೋಪ ಹೊರಿಸಿದೆ.

ಜುಲೈ 23, 2024ರಂದು ದೆಹಲಿ ಹೈಕೋರ್ಟ್ ನೀಡಿದ ಆದೇಶದ ಮೇರೆಗೆ, ಸಿಬಿಐ ಆಗಸ್ಟ್ 6, 2024ರಂದು ಐಪಿಸಿ ಕಲಂ 147, 148, 149 ಮತ್ತು 302 ರ ಅಡಿಯಲ್ಲಿ ಎಫ್‌ಐಆರ್ (RC-09S/2024/SC-II/2024) ದಾಖಲಿಸಿತ್ತು. ಫೈಝಾನ್ ಅವರ ತಾಯಿ ಕಿಸ್ಮತುನ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ತನಿಖೆಯನ್ನು ದೆಹಲಿ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಿತ್ತು.

2019ರ ಪೌರತ್ವ (ತಿದ್ದುಪಡಿ) ಕಾಯ್ದೆಗೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಕರ್ದಂಪುರಿಯಲ್ಲಿ ಪೊಲೀಸರು ತನ್ನ ಮಗನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ, ನಂತರ ಜ್ಯೋತಿ ನಗರ ಪೊಲೀಸ್ ಠಾಣೆಯಲ್ಲಿ ಅಕ್ರಮ ಬಂಧನದಲ್ಲಿ ಇರಿಸಿದ್ದಾರೆ. ಅಲ್ಲಿ ಆತನಿಗೆ ವೈದ್ಯಕೀಯ ಚಿಕಿತ್ಸೆ ನಿರಾಕರಿಸಲಾಗಿದೆ. ಇದರಿಂದಾಗಿ ಆತ ಸಾವನ್ನಪ್ಪಿದ್ದಾನೆ ಎಂದು ಕಿಸ್ಮತುನ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು.

ಜುಲೈ 2024ರಲ್ಲಿ, ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಭಾನಿ ಅವರು ದೆಹಲಿ ಪೊಲೀಸರ ತನಿಖೆಯನ್ನು ತೀವ್ರವಾಗಿ ಟೀಕಿಸಿದ್ದರು. ಇದನ್ನು “ಆಲಸ್ಯ ಮತ್ತು ಅಸ್ಪಷ್ಟ” ಎಂದಿದ್ದರು. ಪ್ರಕರಣವು ದ್ವೇಷಾಪರಾಧದ ವರ್ಗಕ್ಕೆ ಸೇರುವಂತೆ ತೋರುತ್ತಿದೆ ಎಂದು ಹೇಳಿದ್ದರು.

ಆರೋಪಿಗಳು ಮತ್ತು ತನಿಖಾಧಿಕಾರಿಗಳು ಒಂದೇ ಇಲಾಖೆಗೆ ಸೇರಿದವರಾದಾಗ ತನಿಖೆ ನ್ಯಾಯಯುತವಾಗಿ ನಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಆತಂಕ ವ್ಯಕ್ತಪಡಿಸಿತ್ತು. ಇದೇ ಕಾರಣಕ್ಕೆ ಈ ಹಿಂದೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.

“ಕಾನೂನಿನ ರಕ್ಷಕರೇ ಕಾನೂನನ್ನು ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವಾಗ ಮತ್ತು ಅವರೇ ಆ ಪ್ರಕರಣದ ತನಿಖೆ ನಡೆಸುವ ಸಂಸ್ಥೆಯ ಭಾಗವಾಗಿದ್ದಾಗ, ಅಂತಹ ತನಿಖೆಯು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಸಾಧ್ಯವಿಲ್ಲ,” ಎಂದು ಹೈಕೋರ್ಟ್ ಮಾರ್ಮಿಕವಾಗಿ ನುಡಿದಿತ್ತು.

ತನಿಖಾ ಪ್ರಕ್ರಿಯೆಯ ಘನತೆ ಮತ್ತು ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಲು, ತನಿಖೆಯನ್ನು ಸ್ವತಂತ್ರ ಸಂಸ್ಥೆಗೆ ವರ್ಗಾಯಿಸುವುದು ಅನಿವಾರ್ಯ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು.

ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಕ್ಷ್ಯಗಳಿದ್ದರೂ ಸಹ, ನಾಲ್ಕು ವರ್ಷಗಳ ಕಾಲ ಸ್ಥಳೀಯ ಪೊಲೀಸರು ನಡೆಸಿದ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 323ರ ಅಡಿಯಲ್ಲಿ ಇತರ ದಂಡ ವಿಧಿಸಬಹುದಾದ ಆರೋಪಪಟ್ಟಿಯನ್ನು ಸಿಬಿಐ ಸಲ್ಲಿಸಿದೆ.

ಬುಧವಾರ, ಸಿಬಿಐ ಸಲ್ಲಿಸಿದ ಆರೋಪಪಟ್ಟಿಯನ್ನು ಪರಿಗಣಿಸಿದ ವಿಶೇಷ ಸಿಬಿಐ ನ್ಯಾಯಾಲಯವು, “ತನಿಖೆಯ ಸಮಯದಲ್ಲಿ, ಐಒ (ತನಿಖಾ ಅಧಿಕಾರಿ) ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ ಮತ್ತು ನಡೆಸಿದ ತನಿಖೆಯ ಆಧಾರದ ಮೇಲೆ, ಆರೋಪಿ ಹೆಡ್ ಕಾನ್ಸ್‌ಟೇಬಲ್ ರವೀಂದರ್ ಕುಮಾರ್ ಮತ್ತು ಕಾನ್ಸ್‌ಟೇಬಲ್ ಪವನ್ ಯಾದವ್ ವಿರುದ್ಧ ಪ್ರಸ್ತುತ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ. ಐಪಿಸಿ ಸೆಕ್ಷನ್ 323, 325, 304(II) r/w ಸೆಕ್ಷನ್ 34 ಮತ್ತು ಅದರ ಪ್ರಮುಖ ಅಪರಾಧಗಳ ಅಡಿಯಲ್ಲಿ ಅಪರಾಧವನ್ನು ಗುರುತಿಸಲು ಸಾಕಷ್ಟು ದಾಖಲೆಗಳಿವೆ” ಎಂದು ಹೇಳಿದೆ.

ಫೆಬ್ರವರಿ 2025ರಲ್ಲಿ, ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯವು ಜ್ಯೋತಿ ನಗರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ವಿರುದ್ಧವೂ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...