Homeಕರ್ನಾಟಕಈಶ್ವರಪ್ಪ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ಪಾಲಿಕೆಯ ಮೇಯರ್, ಉಪಮೇಯರ್ ಸೇರಿ 19 ಸದಸ್ಯರಿಂದ ರಾಜೀನಾಮೆ

ಈಶ್ವರಪ್ಪ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ಪಾಲಿಕೆಯ ಮೇಯರ್, ಉಪಮೇಯರ್ ಸೇರಿ 19 ಸದಸ್ಯರಿಂದ ರಾಜೀನಾಮೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನ ಸ್ಪೋಟಗೊಳ್ಳುತ್ತಲೇ ಇದೆ. ಬಿಜೆಪಿ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಕೈ ತಪ್ಪಿದ ಟಿಕೆಟ್ ಆಕಾಂಕ್ಷಿಗಳು ಬಂಡಾಯ ಎದ್ದಿದ್ದಾರೆ. ಮತ್ತೊಂದೆಡೆ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದರಿಂದ ಶಿವಮೊಗ್ಗ ಜಿಲ್ಲಾ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.

ಈಶ್ವರಪ್ಪ ಅವರು ಚುನಾವಣೆಯಿಂದ ಹಿಂದೆ ಸರಿದಿರುವುದಕ್ಕೆ ಕಾರ್ಯಕರ್ತರು, ಬೆಂಬಲಿಗರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಶಿವಮೊಗ್ಗ ಪಾಲಿಕೆ ಬಿಜೆಪಿ ಸದಸ್ಯರು ಪಕ್ಷದ ವಿವಿಧ ಜವಾಬ್ದಾರಿಗಳಿಗೆ ಸಾಮೂಹಿಕ‌ ರಾಜೀನಾಮೆ ಸಲ್ಲಿಸಿದ್ದಾರೆ. ಮೇಯರ್, ಉಪಮೇಯರ್ ಸೇರಿ 19 ಸದಸ್ಯರು ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಹಾಗೂ ಬೆಂಗಳೂರಿಗೆ ತೆರಳಿ ಯಡಿಯೂರಪ್ಪ ಭೇಟಿಯಾಗಲು ನಿರ್ಧಾರ ಮಾಡಿದ್ದಾರೆ.

ಕೆಎಸ್ ಈಶ್ವರಪ್ಪ ಅವರಿಗೆ ಟಿಕೆಟ್ ನೀಡಲಾಗುವುದಿಲ್ಲ ಎನ್ನುವ ಕಾರಣಕ್ಕೆ ಅವರಿಂದ ಬಲವಂತವಾಗಿ ರಾಜಕೀಯ ನಿವೃತ್ತಿ ಘೋ‍ಷಣೆ ಮಾಡಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗುತ್ತಿದೆ. ಇನ್ನು ಕೆಲವರು ಟಿಕೆಟ್ ನೀಡದಿದ್ದರೆ ಮುಜಗರ ಆಗಬಹುದು ಎನ್ನುವ ಕಾರಣಕ್ಕೆ ಟಿಕೆಟ್ ಘೋಷಣೆಗೆ ಕೆಲವು ಗಂಟೆಗಳ ಮುಂಚೆ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿ ಎದುರು ಕಾರ್ಯಕರ್ತರು ಮತ್ತು ಈಶ್ವರಪ್ಪ ಆಭಿಮಾನಿಗಳು ಧರಣಿ ನಡೆಸಿದ್ದಾರೆ. ಬಿಜೆಪಿ ಕಚೇರಿಯ ಮುಂಭಾಗದ ದೀನ ದಯಾಳ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.

ಕೆಎಸ್ ಈಶ್ವರಪ್ಪ ಅವರು ನಿವೃತ್ತಿ ಘೋಷಣೆ ಬಗ್ಗೆ ಮಾತನಾಡಿರುವ ಎಂಎಲ್​ಸಿ ಆಯನೂರು ಮಂಜುನಾಥ್ ಅವರು, ಈಶ್ವರಪ್ಪ ನಿವೃತ್ತಿ ಸ್ವಲ್ಪ ಆಘಾತಕಾರಿ ಮತ್ತು ಬೇಸರವಾಗಿದೆ. ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ವ್ಯಕ್ತಿಗತವಾಗಿ ದ್ವೇಷಿಗಳು ಕಡಿಮೆ. ಉತ್ತಮವಾಗಿ ಕೆಲಸ ಮಾಡುತ್ತಿದ್ದರೂ ಅಪಖ್ಯಾತಿಗೆ ಗುರಿಯಾಗಿದ್ದಾರೆ. ಈಶ್ವರಪ್ಪ ನಾಲಗೆ, ಮನೆಯಲ್ಲಿರುವ ವೈರಿಯಿಂದಾಗಿ ಟಿಕೆಟ್ ಸಿಕ್ಕಿಲ್ಲ. ಪುತ್ರ ವ್ಯಾಮೋಹದಿಂದ ಹೊರ ಬಂದಿದ್ದರೆ ಸ್ಪರ್ಧಿಸಬಹುದಿತ್ತು. ತನ್ನದಲ್ಲದ ತಪ್ಪಿಗೆ ಈಶ್ವರಪ್ಪ ರಾಜಕೀಯದಿಂದ ನಿವೃತ್ತಿ ಆಗಿದ್ದಾರೆ. ಕೆ.ಎಸ್.ಈಶ್ವರಪ್ಪ ನಿವೃತ್ತಿಗೆ ಕಾರ್ಯಕರ್ತರು, ಪಕ್ಷ ಕಾರಣವಲ್ಲ. ಪುತ್ರನಿಂದಾಗಿ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈಶ್ವರಪ್ಪ ಯಾವತ್ತೂ ನನ್ನ ಟಾರ್ಗೆಟ್ ಆಗಿರಲಿಲ್ಲ. ಈಶ್ವರಪ್ಪ ಬದಲು ನನಗೆ ಟಿಕೆಟ್​​​ ನೀಡಿ ಎಂದು ಕೇಳಿದ್ದೇನೆ ಅಷ್ಟೇ” ಎಂದು ಹೇಳಿದರು.

ಇದನ್ನೂ ಓದಿ: ಯತ್ನಾಳ್‌ಗೆ ಟಿಕೆಟ್ ನೀಡಿದ್ದಕ್ಕೆ ಸ್ಥಳೀಯ ಬಿಜೆಪಿಯಲ್ಲಿ ವಿರೋಧ; ಬ್ಲ್ಯಾಕ್​ಮೇಲ್​ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...