Homeಮುಖಪುಟಚಂದ್ರಬಾಬು ನಾಯ್ಡು ಬಂಧನದ ಬೆನ್ನಲ್ಲೇ ಪವನ್ ಕಲ್ಯಾಣ್ ಪೊಲೀಸರ ವಶಕ್ಕೆ

ಚಂದ್ರಬಾಬು ನಾಯ್ಡು ಬಂಧನದ ಬೆನ್ನಲ್ಲೇ ಪವನ್ ಕಲ್ಯಾಣ್ ಪೊಲೀಸರ ವಶಕ್ಕೆ

- Advertisement -
- Advertisement -

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನವಾದ ಬಳಿಕ ಅವರಿಗೆ ಬೆಂಬಲ ಸೂಚಿಸಲು ತೆರಳುತ್ತಿದ್ದ ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಮತ್ತು ಪಕ್ಷದ ಹಿರಿಯ ನಾಯಕ ನಾದಂಡ ಮನೋಹರ್ ಅವರನ್ನು ಎನ್‌ಟಿಆರ್ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪವನ್ ಕಲ್ಯಾಣ್ ಅವರನ್ನು ವಿಜಯವಾಡಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ ಆಂಧ್ರ ಪ್ರದೇಶ ಪ್ರವೇಶಕ್ಕೆ ಪೊಲೀಸರು ಪವನ್‌ ಕಲ್ಯಾಣ್‌ಗೆ ಅವಕಾಶ ನೀಡಲಿಲ್ಲ. ಆದ್ದರಿಂದ ಆಂಧ್ರ ಪ್ರದೇಶ-ತೆಲಂಗಾಣ ಗಡಿಯ ಜಗ್ಗಯ್ಯಪೇಟ ಚೆಕ್‌ಪೋಸ್ಟ್‌ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮಲಗಿ ಅವರು ಪ್ರತಿಭಟನೆ ನಡೆಸಿದರು. ವಿಜಯವಾಡಕ್ಕೆ ಹೋಗಬೇಕು ಎಂದು ಪಟ್ಟು ಹಿಡಿದರು.

ಈ ಸಂದರ್ಭದಲ್ಲಿ ಪವನ್ ಕಲ್ಯಾಣ್ ಬೆಂಗಲಿಗರು ಮತ್ತು ಪೊಲೀಸರ ನಡುವೆ ವಾಕ್ಸಮರ ನಡೆಯಿತು. ಬಳಿಕ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಪವನ್ ಕಲ್ಯಾಣ್ ಮತ್ತು ಪಿಎಸಿ ಅಧ್ಯಕ್ಷ ನಂದೇನಂಡಲ ಮನೋಹರ್‌ರನ್ನು ವಶಕ್ಕೆ ಪಡೆದರು. ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಕರೆದುಕೊಂಡು ಹೋದರು.

ಈ ಬಗ್ಗೆ ಮಾತನಾಡಿದ ನಂದಿಗಾಮ ಉಪವಿಭಾಗದ ಪೊಲೀಸ್ ಅಧಿಕಾರಿ ಜನಾರ್ದನ್ ನಾಯ್ಡು ಅವರು, ”ನಾವು ಪವನ್ ಕಲ್ಯಾಣ್ ಮತ್ತು ಮನೋಹರ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಕಸ್ಟಡಿಗೆ ತೆಗೆದುಕೊಂಡಿದ್ದೇವೆ ನಾವು ಅವರನ್ನು ವಿಜಯವಾಡಕ್ಕೆ ಕರೆದೊಯ್ಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಚಂದ್ರಬಾಬು ನಾಯ್ಡು ಬಂಧನ:

ಶನಿವಾರ ಮುಂಜಾನೆ ಆಂಧ್ರ ಪ್ರದೇಶದ ಸಿಐಡಿ ಪೊಲೀಸರು ರಾಜ್ಯದ ಮಾಜಿ ಮುಖ್ಯಮಂತ್ರಿ, ತೆಲಗು ದೇಶಂ ಪಕ್ಷದ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡುವನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಿದ್ದರು. ಈ ಬಂಧನದ ಬಳಿಕ ಆಂಧ್ರದ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎದ್ದಿದೆ.

ಆಂಧ್ರ ಪ್ರದೇಶದ ಕೌಶಾಲಾಭಿವೃದ್ಧಿ ನಿಗಮದಲ್ಲಿ ನಡೆದಿರುವ 550 ಕೋಟಿ ರೂ. ಅವ್ಯವಹಾರ ಪ್ರಕರಣದಲ್ಲಿ ಎನ್. ಚಂದ್ರಬಾಬು ನಾಯ್ಡು ಮೊದಲ ಆರೋಪಿ ಎಂದು ಸಿಐಡಿ ಎಡಿಜಿಪಿ ಎನ್. ಸಂಜಯ್ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಸಿಎಂ ಆಗಿದ್ದಾಗ ನಿಗಮಕ್ಕೆ ಬಿಡುಗಡೆಯಾಗಿದ್ದ 3,300 ಕೋಟಿ ರೂ. ಅನುದಾನದಲ್ಲಿ ಅವ್ಯವಹಾರವಾಗಿದ್ದು, ಸರ್ಕಾರಕ್ಕೆ 370 ಕೋಟಿ ರೂ. ವಂಚನೆಯಾಗಿದೆ ಎಂಬುದು ಆರೋಪವಾಗಿದೆ. ಎನ್. ಚಂದ್ರಬಾಬು ನಾಯ್ಡು ಬಂಧಿಸಿ ವಿಚಾರಣೆ ನಡೆಸುವುದು ಅಗತ್ಯವಾಗಿದೆ ಎಂದು ಸಿಐಡಿ ಪೊಲೀಸರು ಹೇಳಿದ್ದರು.

ಶನಿವಾರ ಮುಂಜಾನೆ 6 ಗಂಟೆಗೆ ಬಿಗಿ ಭದ್ರತೆಯಲ್ಲಿ ಅವರನ್ನು ಬಂಧಿಸಿ ವಿಜಯವಾಡಕ್ಕೆ ಕರೆದುಕೊಂಡು ಹೋಗಿದ್ದರು. ಆದ್ದರಿಂದ ಪವನ್ ಕಲ್ಯಾಣ್ ಸಹ ವಿಜಯವಾಡಕ್ಕೆ ಹೋಗಬೇಕು ಎಂದು ಪಟ್ಟು ಹಿಡಿದಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ನೇತೃತ್ವದ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂಬುದು ಆರೋಪವಾಗಿದೆ. ಎನ್. ಚಂದ್ರಬಾಬು ನಾಯ್ಡು ಬಂಧನದ ಬಳಿಕ ವೈಎಸ್ಆರ್ ಕಾಂಗ್ರೆಸ್ ಮತ್ತು ಟಿಡಿಪಿ ನಡುವೆ ರಾಜಕೀಯ ಆರೋಪ ಪ್ರತ್ಯಾರೋಪ ಜೋರಾಗಿದೆ. ಆದರೆ ಜಗನ್ ಮೋಹನ ರೆಡ್ಡಿ ಇದುವರೆಗೂ ಚಂದ್ರಬಾಬು ನಾಯ್ಡು ಬಂಧನದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ಆಂಧ್ರಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...