Homeಮುಖಪುಟರಾಮ ಮಂದಿರ ನಿರ್ಮಾಣದ ನಂತರ ವೃದ್ದರನ್ನು ದರ್ಶನಕ್ಕಾಗಿ ಕಳುಹಿಸುತ್ತೇವೆ: ಕೇಜ್ರಿವಾಲ್

ರಾಮ ಮಂದಿರ ನಿರ್ಮಾಣದ ನಂತರ ವೃದ್ದರನ್ನು ದರ್ಶನಕ್ಕಾಗಿ ಕಳುಹಿಸುತ್ತೇವೆ: ಕೇಜ್ರಿವಾಲ್

‘ನಾನು ಭಗವಾನ್ ರಾಮ ಮತ್ತು ಹನುಮನ ಭಕ್ತ’ ಎಂದು ಅವರು ಪ್ರತಿಪಾದಿಸಿದ್ದಾರೆ.

- Advertisement -
- Advertisement -

ದೆಹಲಿಯಲ್ಲಿ ಜನರಿಗೆ ಸೇವೆ ಸಲ್ಲಿಸಲು “ರಾಮ ರಾಜ್ಯ” ಎಂಬ ಪರಿಕಲ್ಪನೆಯಿಂದ ಪ್ರೇರಿತವಾದ 10 ತತ್ವಗಳನ್ನು ತಮ್ಮ ಸರ್ಕಾರ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌‌ ಬುಧವಾರ ಅಧಿವೇಶನದಲ್ಲಿ ಲೆಫ್ಟಿನೆಂಟ್ ಭಾಷಣದ ಮೇಲಿನ ಚರ್ಚೆಯಲ್ಲಿ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪೂರ್ಣಗೊಂಡ ನಂತರ ಆಮ್‌ಆದ್ಮಿ ಸರ್ಕಾರ ವೃದ್ಧರನ್ನು ‘ದರ್ಶನ’ಕ್ಕಾಗಿ ಕಳುಹಿಸುತ್ತದೆ ಎಂದು ಕೇಜ್ರಿವಾಲ್ ಘೋಷಿಸಿದ್ದಾರೆ.

“ನಾನು ಭಗವಾನ್ ರಾಮ ಮತ್ತು ಹನುಮನ ಭಕ್ತ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಪುಟಕ್ಕಿಟ್ಟ ಪುಟಗಳು: ಗ್ರಾಮ ದೇವತೆಗಳು ಜನಪದ ಸಂಸ್ಕೃತಿಯ ಮಹಾ ಪಲ್ಲಟದ ಬಗೆಗಿನ ತಿಳಿವು

ಈ ಹತ್ತು ತತ್ವಗಳು ಆಹಾರ, ಶಿಕ್ಷಣ, ವೈದ್ಯಕೀಯ ಆರೈಕೆ, ವಿದ್ಯುತ್, ನೀರು ಸರಬರಾಜು, ಉದ್ಯೋಗ, ವಸತಿ, ಮಹಿಳಾ ಭದ್ರತೆ, ವೃದ್ಧರನ್ನು ಗೌರವಿಸುವುದು ಎಂದು ಅವರು ತಿಳಿಸಿದ್ದಾರೆ.

ದೆಹಲಿಯಲ್ಲಿ ಯಾರೂ ಖಾಲಿ ಹೊಟ್ಟೆಯಲ್ಲಿ ಮಲಗಬಾರದು. ಪ್ರತಿ ಮಗು ಸಾಮಾಜಿಕ ಸ್ಥಾನಮಾನವನ್ನು ಲೆಕ್ಕಿಸದೆ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಶ್ರೀಮಂತರಾಗಿರಲಿ ಅಥವಾ ಬಡವರಾಗಿರಲಿ ಪ್ರತಿಯೊಬ್ಬರೂ ಸಾಧ್ಯವಾದಷ್ಟು ಉತ್ತಮವಾದ ವೈದ್ಯಕೀಯ ಚಿಕಿತ್ಸೆಯನ್ನು ಪಡೆಯಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. “ನಾವು ಸರ್ಕಾರಿ ಆಸ್ಪತ್ರೆಗಳನ್ನು ಸುಧಾರಿಸಿದ್ದು, ಈ ದಿಕ್ಕಿನಲ್ಲಿ ಕೆಲಸ ಮಾಡಿ ಮೊಹಲ್ಲಾ ಚಿಕಿತ್ಸಾಲಯಗಳನ್ನು ಸ್ಥಾಪಿಸಿದ್ದೇವೆ” ಎಂದು ಹೇಳಿದ್ದಾರೆ.

ಕೊರೊನಾ ಲಸಿಕಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ದೆಹಲಿಯ ಎಲ್ಲಾ ನಿವಾಸಿಗಳಿಗೆ ಮುಖ್ಯಮಂತ್ರಿ ಮನವಿ ಮಾಡಿದ್ದು, ದೆಹಲಿ ವಿಧಾನಸಭೆಯ ಸದಸ್ಯರನ್ನು ಆಸ್ಪತ್ರೆಗಳಿಗೆ ಹೋಗಿ, ಸರದಿಯಲ್ಲಿ ನಿಂತು ಸಾಮಾನ್ಯ ಜನರಂತೆ ಲಸಿಕೆ ತೆಗೆದುಕೊಳ್ಳುವಂತೆ ಅವರು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಡಿಜಿಪಿ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

0
ಯುನೈಟೆಡ್ ಸ್ಟೇಟ್ಸ್ ತನ್ನ 2023ರ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, BBC ಮೇಲೆ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಂತಹ ಭಾರತಕ್ಕೆ ಸಂಬಂಧಿಸಿದ ಪ್ರಮುಖ...